ಕೊಪ್ಪಳ: ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ-ಅಮಾನವೀಯವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪ

Published : Sep 15, 2024, 11:23 AM IST
dalit man

ಸಾರಾಂಶ

ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಕೊಪ್ಪಳ ತಾಲೂಕಿನ ಬೋಚಹಳ್ಳಿ ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ

ಕೊಪ್ಪಳ  : ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಕೊಪ್ಪಳ ತಾಲೂಕಿನ ಬೋಚಹಳ್ಳಿ ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.  

ಗುಡದಪ್ಪ ಮುಳ್ಳಣ್ಣ ಹಲ್ಲೆಗೊಳಗಾದ ಯುವಕ. ಗುಡದಪ್ಪ ನೀಡಿದ ದೂರಿನಲ್ಲಿ, ನಾನು ಗ್ರಾಮದ ಕಟ್ಟೆಯ ಮೇಲೆ ಕುಳಿತು ಸಿಗರೇಟ್ ಸೇದಲು ಮುಂದಾದೆ, ಇದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದಾದ ನಂತರ ಸೆ. 9 ರಂದು ಗಣೇಶ ವಿಸರ್ಜನೆ ವೇಳೆ ಜಗಳ ತೆಗೆದು, ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ್ದಾರೆ. ನನ್ನ ಬಟ್ಟೆ ಬಿಚ್ಚಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿ, ಗ್ರಾಮದ ನಾಗನಗೌಡ, ಯಲ್ಲಪ್ಪ, ಭೀಮಪ್ಪ, ಹನುಮಗೌಡ , ಪ್ರಜ್ವಲ್ ಹಾಗೂ ನವೀನ್ ಎಂಬವರ ವಿರುದ್ಧ ದೂರು ನೀಡಿದ್ದಾರೆ.

ಈ ಪ್ರಕರಣ ಬೆನ್ನಲ್ಲೆ ನಾಗನೌಡ ಎಂಬವರು ಗುಡದಪ್ಪ ಹಾಗೂ ಆತನ ಕುಟುಂಬಸ್ಥರು ತಮ್ಮ ಕುಟುಂಬದವರ ಮೇಲೆ ವಿನಾಕಾರಣ ಹಲ್ಲೆ ಮಾಡಿದ್ದಾರೆ ಎಂದು ಪ್ರತಿದೂರು ದಾಖಲಿಸಿದ್ದಾರೆ. ದಾರಿಯಲ್ಲಿ ಹೋಗುತ್ತಿರುವುದಾಗ ಸುಖಾಸುಮ್ಮನೆ ತಡೆದು, ಜಗಳ ತೆಗೆದು ಚಪ್ಪಲಿಯಲ್ಲಿ ಹೊಡೆದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಪೈಕಿ ನಾಗನಗೌಡ ನೀಡಿದ ದೂರಿನನ್ವಯ ಗುಡದಪ್ಪ, ಈರಪ್ಪ, ಯಮನೂರಪ್ಪ, ಕಿರಣಕುಮಾರ್, ಸಾರೇಪ್ಪ, ಮಂಜಪ್ಪ ಎಂಬುವವರ ವಿರುದ್ಧ ಅಳವಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

Recommended Stories

ಕಲ್ಯಾಣ ಕರ್ನಾಟಕ ಉತ್ಸವ ಅರ್ಥಪೂರ್ಣ ಆಚರಣೆಗೆ ಸಿದ್ಧತೆ
ಭ್ರಷ್ಟ ಸಮಾಜ ನಿರ್ಮೂಲನೆಗೆ ಉತ್ತಮ ಶಿಕ್ಷಣ ನೀಡಿ