ಪ್ರಥಮ ಸಂಸ್ಥಾಪನಾ ದಿನಾಚರಣೆಗೆ ಚಾಲನೆ ನೀಡಿದ ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿ ಕುಲಪತಿಕನ್ನಡಪ್ರಭ ವಾರ್ತೆ ಕೊಪ್ಪಳ
ಕೊಪ್ಪಳ ವಿಶ್ವ ವಿದ್ಯಾಲಯದಲ್ಲಿ ಮಂಗಳವಾರ ಪ್ರಥಮ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೊಪ್ಪಳ ಸಹ ಕನ್ನಡಕ್ಕೆ ವಿಶೇಷ ಸ್ಥಾನಮಾನ ನೀಡಿದ ಭೂಮಿಯಾಗಿದೆ. ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದೆ. ಹಾಗಾಗಿ ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಮುನ್ನುಗ್ಗಲು ಹಾಗೂ ಈ ಭಾಗದ ಸರ್ವತೋಮುಖ ಬೆಳವಣಿಗೆಗೆ ಕೊಪ್ಪಳ ವಿಶ್ವ ವಿದ್ಯಾಲಯದ ಸನ್ನದ್ಧವಾಗಿದೆ. ಈ ಭಾಗದ ಶಿಕ್ಷಣ ಇನ್ನಷ್ಟು ಬೆಳವಣಿಗೆಯಾಗಲಿ ಎಂದರು.
ಗದುಗಿನ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವಿಷ್ಣುಕಾಂತ್ ಎಸ್. ಚಟಪಲ್ಲಿ ಮಾತನಾಡಿ, ಕೊಪ್ಪಳ ವಿಶ್ವ ವಿದ್ಯಾಲಯದಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುವಂತಾಗಲಿ ಎಂದರು.ಗೊಟಗೋಡಿ, ಶಿಗ್ಗಾಂವಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಟಿ.ಎಂ. ಭಾಸ್ಕರ್ ಮಾತನಾಡಿ, ಸಂವಿಧಾನ ಆಶಯವನ್ನು ಜಾರಿಗೆ ತರುವ ಕೆಲಸವಾಗಬೇಕು. ಸಂವಿಧಾನ ಆಶಯದಂತೆ ನಾವೆಲ್ಲರೂ ನಡೆಯೋಣ ಎಂದರು.
ಬೀದರ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ. ಬಿ.ಎಸ್. ಬಿರಾದಾರ ಮಾತನಾಡಿ, ಜಿಲ್ಲೆಯ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಿಗಬೇಕು ಎಂಬ ಉದ್ದೇಶದಿಂದ ವಿಶ್ವ ವಿದ್ಯಾಲಯ ಸ್ಥಾಪನೆಯಾಗಿದೆ. ಹೊಸ ವಿಶ್ವ ವಿದ್ಯಾಲಯದ ಸ್ನಾತಕೋತ್ತರ ಶಿಕ್ಷಣದ ಜತೆಗೆ ಉದ್ದೇಶ ಕೌಶಲ್ಯಭರಿತ ಕೋರ್ಸುಗಳನ್ನು ಪ್ರಾರಂಭಿಸಿ ಆ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು ಎಂದರು.
ಹಾಸನ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ. ತರಿಕೇರಿ ಸಿ. ತಾರಾನಾಥ ಮಾತನಾಡಿ, ಕೊಪ್ಪಳ ನಾಡು ಕಲ್ಯಾಣ ಕರ್ನಾಟಕದಲ್ಲಿ ಪ್ರಸಿದ್ಧಿ ಪಡೆದಿದೆ. ಜ್ಞಾನ ಎಲ್ಲರಿಗೂ ಸಿಗಬೇಕು. ಮನುಷ್ಯನ ಕ್ರಿಯೆಗೆ ಸೂರ್ಯನ ಶಕ್ತಿ ಆಧಾರವಾಗಿದೆ. ವಿಕಾಸದ ಹಾದಿಯಲ್ಲಿ ವಿವಿಧ ಸಂಘರ್ಷವನ್ನು ಎದುರಿಸಿ ಮನುಷ್ಯ ಮುಂದು ವರಿದಿದ್ದಾನೆ. ಮನುಷ್ಯನ ಮಾತ್ರ ಸಂವಹನ ಕಲೆ ಹಾಗೂ ಬುದ್ಧಿ ಶಕ್ತಿ ಇರುವುದು ಎಂದರು.
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲ ಸಚಿವ ಎಸ್.ಎನ್. ರುದ್ರೇಶ ಮಾತನಾಡಿದರು. ಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ. ರವಿ ಅಧ್ಯಕ್ಷತೆ ವಹಿಸಿದ್ದರು. ಕುಲಸಚಿವರಾದ ಡಾ. ಕೆ.ವಿ. ಪ್ರಸಾದ್, ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಡಾ. ಸಿ.ಐ. ಚಲವಾದಿ, ಡಾ. ಪ್ರಕಾಶ ಯಳವಟ್ಟಿ, ಡಾ. ಬಾಜಿ ದೇವೇಂದ್ರಪ್ಪ ಇದ್ದರು.