ಹೊಸಕೋಟೆ: ತಾಲೂಕಿನ ಕೊರಳೂರು ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ 5 ಕೋಟಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಶರತ್ ಬಚ್ಚೇಗೌಡ ಭೂಮಿಪೂಜೆ ನೆರವೇರಿಸಿದರು
ಹೊಸಕೋಟೆ: ತಾಲೂಕಿನ ಕೊರಳೂರು ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ 5 ಕೋಟಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಶರತ್ ಬಚ್ಚೇಗೌಡ ಭೂಮಿಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡಬೇಕು. ಗ್ರಾಮಗಳಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಆದ್ಯತೆ ಮೇರೆಗೆ ನೀಡಲಾಗುತ್ತಿದೆ. ಪ್ರತಿ ಗ್ರಾಮಕ್ಕೂ ಕೋಟಿ ಲೆಕ್ಕದಲ್ಲಿ ಅನುದಾನಗಳನ್ನು ವಿವಿಧ ಇಲಾಖೆಗಳಿಂದ ತರಲಾಗಿದೆ. ಆದ್ದರಿಂದ ಗ್ರಾಮಸ್ಥರು ಮುಂದೆ ನಿಂತು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿಸಬೇಕು. ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡುವುದು ಕಂಡು ಬಂದರೆ ಖಂಡಿಸಬೇಕು ಎಂದರು.
ಬಿಎಂಆರ್‌ಡಿಎ ಸದಸ್ಯ ಕೊರಳೂರು ಸುರೇಶ್‌ಗೌಡ ಮಾತನಾಡಿ, ಸುಮಾರು ೫ ಕೋಟಿ ವೆಚ್ಚದಲ್ಲಿ ಕೆರೆ ಅಭುವೃದ್ಧಿಗೆ ಚಾಲನೆ ನೀಡಿದ್ದು, ಗ್ರಾಮದ ಕೆರೆಗೆ ಹೊಸ ಕಾಯಕಲ್ಪ ದಕ್ಕಲಿದೆ. ಕೆರೆಯನ್ನು ಹೂಳೆತ್ತುವ ಮೂಲಕ ಕಟ್ಟೆ ಅಭಿವೃದ್ಧಿ ಮಾಡುವುದರಿಂದ ಕೆರೆಯಲ್ಲಿ ನೀರು ಶೇಖರಣೆ ಆಗಿ ಅಂತರ್ಜಲ ವೃದ್ಧಿಗೆ ಪೂರಕವಾಗಲಿದೆ ಎಂದರು.
ಈ ವೇಳೆ ಮಾಜಿ ಅಧ್ಯಕ್ಷ ನಾರಾಯಣ ಗೌಡ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಕೃಷ್ಣಮೂರ್ತಿ, ಸಮೇತನಹಳ್ಳಿ ಗ್ರಾಪಂ ಅಧ್ಯಕ್ಷ ಕಾಂತರಾಜು, ಪಿಡಿಒ ಪ್ರಸಾದ್, ಮುಖಂಡರಾದ ಸಮೇತನಹಳ್ಳಿ ಸೊನ್ನಪ್ಪ ಇತರರು ಹಾಜರಿದ್ದರು.
ಫೋಟೋ : 3 ಹೆಚ್‌ಎಸ್‌ಕೆ 5
ಹೊಸಕೋಟೆ ತಾಲೂಕಿನ ಕೊರಳೂರು ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ 5 ಕೋಟಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಶರತ್ ಬಚ್ಚೇಗೌಡ ಚಾಲನೆ ನೀಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.