ಫೆ.6ರಿಂದ ಕೋಸಂಬೆ ಬೀದರ್‌ ಜಿಲ್ಲಾ ಪ್ರವಾಸ

KannadaprabhaNewsNetwork |  
Published : Feb 05, 2026, 01:45 AM IST
ಬೈಂದೂರು ರೈತರ ಧರಣಿ ಸ್ಥಳಕ್ಕೆ ಡಿಸಿ ಸ್ವರೂಪ ಮತ್ತು ಎಸಿ ರಶ್ಮಿ ಭೇಟಿ ನೀಡಿ ಬೇಡಿಕೆಗಳನ್ನು ಆಲಿಸಿದರು | Kannada Prabha

ಸಾರಾಂಶ

Kosamba from Feb. 6Bidar district tour

ಬೀದರ್‌: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಕೋಸಂಬೆ ಅವರು ಫೆ.6 ಮತ್ತು 7ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ.ಫೆ.6 ರಂದು ಬೆಳಿಗ್ಗೆ 7.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬಸವಕಲ್ಯಾಣ ತಾಲೂಕಿನ ಬೇಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಭೇಟಿ ಮತ್ತು ಪರಿಶೀಲನೆ ನಡೆಸಲಿದ್ದಾರೆ. ಸಂಜೆ 4 ರಿಂದ ಸಾಯಂಕಾಲ 6 ಗಂಟೆಯವರೆಗೆ ಔರಾದ್ ತಾಲ್ಲೂಕಿನ ಸಂತಪೂರ ಬಳಿಯ ಅನುಭವ ಮಂಟಪದ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 6 ಗಂಟೆಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ಮತ್ತು ಪರಿಶೀಲನೆ ನಡೆಸಿ ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ. ಫೆ.7 ರಂದು ಬೆಳಿಗ್ಗೆ 9 ರಿಂದ 11 ಗಂಟೆಯವರೆಗೆ ಔರಾದ್ ತಾಲ್ಲೂಕಿನ ಜಮಾಲಪೂರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡ ಮಕ್ಕಳ ಪ್ರಕರಣ ಕುರಿತು ಶಾಲೆಗೆ ಭೇಟಿ ಮತ್ತು ಪರಿಶೀಲನೆ ನಡೆಸುವರು. ಬೆಳಿಗ್ಗೆ 11 ರಿಂದ 12 ರ ವರೆಗೆ ಔರಾದ್ ತಾಲೂಕಿನ ಮಧ್ಯಾಹ್ನ ಬಿಸಿಯೂಟದ ಸಹಾಯಕ ನಿರ್ದೇಶಕರು ಹಾಗೂ ಇತರೆ ಅಧಿಕಾರಿ ಗಳೊಂದಿಗೆ ಸಭೆ (ಹಾಲಿನ ಪೌಡರ್ ಮಾರಾಟ ಪ್ರಕರಣ ಕುರಿತು), ಮಧ್ಯಾಹ್ನ 12ಕ್ಕೆ ಔರಾದ್‌ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮತ್ತು ಮೇಲ್ವಿಚಾರಕಿಯರೊಂದಿಗೆ ಸಭೆ, ನಂತರ ಕೋನ ಮೇಳಕುಂದಾ ಗ್ರಾಮಕ್ಕೆ ಪ್ರಯಾಣಿಸಿ ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.--

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಠಿಣ ಪರಿಶ್ರಮದಿಂದ ಉತ್ತಮ ಫಲಿತಾಂಶ ಸಾಧ್ಯ
ಔರಾದ್ ತಾಲೂಕು ಅದ್ಧೂರಿ ಕಸಾಪ ಸಮ್ಮೇಳನ