)
ಕೋಟ: ಇಲ್ಲಿನ ಮಾಬುಕಳ ಸೇತುವೆಯಲ್ಲಿ ಪತಿ ಪತ್ನಿ ಕೈಗಳನ್ನು ಚೂಡಿದಾರದ ಶಾಲಿನಿಂದ ಕಟ್ಟಿಕೊಂಡು ಸೀತಾ ನದಿಗೆ ಹಾರಿ ಜೀವನ ಕೊನೆಗಾಣಿಸಿಕೊಂಡಿರುವ ದಾರುಣ ಘಟನೆ ಶನಿವಾರ ರಾತ್ರಿ ನಡೆದಿದೆ.
ಇದನ್ನು ಗಮನಿಸಿದ ರಿಕ್ಷಾ ಚಾಲಕರೊಬ್ಬರು ತಕ್ಷಣ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರು ಸ್ಥಳಕ್ಕೆ ಧಾವಿಸಿ ಪರಿಶೀಲಿಸುವಷ್ಟರಲ್ಲಿ ಇಬ್ಬರೂ ನೀರಿನಲ್ಲಿ ಮುಳುಗಿ ಕಣ್ಮರೆಯಾಗಿದ್ದರು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ರಾತ್ರಿ ವೇಳೆ ಶೋಧ ಕಾರ್ಯಾಚರಣೆ ನಡೆಸಿದರೂ ದಂಪತಿಯ ಪತ್ತೆಯಾಗಿರಲಿಲ್ಲ.
ಭಾನುವಾರ ಬೆಳಿಗ್ಗೆ ಮಾಬುಕಳ ಸೇತುವೆಯಿಂದ ಸುಮಾರು 500 ಮೀಟರ್ ದೂರದ ಪಾಂಡೇಶ್ವರದಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಆತ್ಮಹತ್ಯೆಗೂ ಮುನ್ನ ದಂಪತಿ ಚೂಡಿದಾರದ ಶಾಲಿನಿಂದ ತಮ್ಮ ಕೈಗಳನ್ನು ಪರಸ್ಪರ ಕಟ್ಟಿಕೊಂಡಿರುವುದು ಪತ್ತೆಯಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ಕೋಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತರ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ತನಿಖೆ ಮುಂದುವರಿಸಿದ್ದಾರೆ.