ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಹೆದ್ದಾರಿ ಭೂಸ್ವಾಧೀನ ಪ್ರಕ್ರಿಯೆ ವಿಳಂಬ ಪರಿಹರಿಸುವಂತೆ 8 ರಿಂದ 10 ಬಾರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರೂ ಪರಿಹಾರವಾಗಿಲ್ಲ. ವಿಳಂಬ ನೀತಿಯಿಂದ ಕಾಮಗಾರಿ ತಡವಾಗುತ್ತಿದೆ. ಕೇಂದ್ರ ಸರ್ಕಾರದ ಭೂ ಸಾರಿಗೆ ಇಲಾಖೆ ಮಧ್ಯ ಪ್ರವೇಶಿಸಿ ಕರ್ನಾಟಕ ರಾಜ್ಯದೊಂದಿಗೆ ಸಮಾಲೋಚಿಸಿ ಭೂ ಸ್ವಾಧೀನ ಪ್ರಕ್ರಿಯೆ ತ್ವರಿತವಾಗಲು ಕ್ರಮ ಜರುಗಿಸಬೇಕು ಎಂದು ಕೋಟಾ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.
ಮೂಗುತಿಹಳ್ಳಿಯಿಂದ ಮೂಡಿಗೆರೆವರೆಗಿನ ಹೆದ್ದಾರಿಯ ಕಾಮಗಾರಿಗೆ ಸಂಬಂಧಿಸಿದಂತೆ ಈಗಾಗಲೇ ತಾಂತ್ರಿಕ ಬಿಡ್ ತೆರೆಯಲಾಗಿದೆ. ಭೂಮಿ ನೀಡಿದ್ದ 262 ರೈತರಲ್ಲಿ ಹೆಚ್ಚಿನವರಿಗೆ ಹಣ ಸಂದಾಯವಾಗಿಲ್ಲ. ಅದಕ್ಕೆ ಕಾರಣ ಚಿಕ್ಕಮಗಳೂರು ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆಯ ವಿಳಂಬ ನೀತಿ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.ಜತೆಗೆ ಚಿಕ್ಕಮಗಳೂರಿನಿಂದ ಬೇಲೂರುವರೆಗಿನ 26 ಕಿಮೀ ಉದ್ದದ ಹೆದ್ದಾರಿ 372 ಭೂಸ್ವಾಧೀನ ಪ್ರಕ್ರಿಯೆಗಳು ಆರಂಭವಾಗಿಲ್ಲ. ಮಾಳ, ಎಸ್‌ಕೆ ಗಡಿಯಿಂದ ಕೆರೆಕಟ್ಟೆ, ತನಿಗೋಡುವರೆಗಿನ 29 ಕಿಮೀ ಉದ್ದದ ರಾಷ್ಟ್ರೀಯ ಹೆದ್ದಾರಿ 169 ಈ ಹಿಂದೆ 1999 ರಲ್ಲಿ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲಾಗಿತ್ತು. ಈ ಹೆದ್ದಾರಿ ಅರಣ್ಯ ಪ್ರದೇಶದಲ್ಲಿ ಹಾದು ಹೋಗುವು ದರಿಂದ ಬದಲಿ ಭೂಮಿಯನ್ನು ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಅರಣ್ಯ ಇಲಾಖೆ ಇಲ್ಲಿಯವರೆಗೂ ನೀಡಿಲ್ಲ ಎಂದು ತಿಳಿಸಿದ್ದಾರೆ.
ಫೋಟೋ ಕೋಟಾ ಶ್ರೀನಿವಾಸ್ ಪೂಜಾರಿ ಫೋಟೋ ಬಳಸುವುದು