ಬಿಜೆಪಿ ಉಡುಪಿ ಜಿಲ್ಲಾ ಪ್ರಕೋಷ್ಠದ ವತಿಯಿಂದ ಪರ್ಯಾಯ ಶಿರೂರು ಮಠದ ಆಶ್ರಯದಲ್ಲಿ, ಪರ್ಕಳ ಲಯನ್ಸ್ ಕ್ಲಬ್ ಮತ್ತು ಉಡುಪಿ ಚಿತ್ರಕಲಾ ಸಂಘಟನೆಗಳ ಸಹಯೋಗದಲ್ಲಿ ದೀಪಾವಳಿಯ ಶುಭ ಸಂದರ್ಭದಲ್ಲಿ ರಾಜ್ಯ ಮಟ್ಟದ ಸಾಂಪ್ರದಾಯಿಕ ಗೂಡುದೀಪ ರಚನೆ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮವನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು.
ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಪ್ರಕೋಷ್ಠದ ವತಿಯಿಂದ ಪರ್ಯಾಯ ಶಿರೂರು ಮಠದ ಆಶ್ರಯದಲ್ಲಿ, ಪರ್ಕಳ ಲಯನ್ಸ್ ಕ್ಲಬ್ ಮತ್ತು ಉಡುಪಿ ಚಿತ್ರಕಲಾ ಸಂಘಟನೆಗಳ ಸಹಯೋಗದಲ್ಲಿ ದೀಪಾವಳಿಯ ಶುಭ ಸಂದರ್ಭದಲ್ಲಿ ರಾಜ್ಯ ಮಟ್ಟದ ಸಾಂಪ್ರದಾಯಿಕ ಗೂಡುದೀಪ ರಚನೆ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮವನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ನಗರಸಭಾ ಸದಸ್ಯ ಕೆ. ವಿಜಯ ಕೊಡವೂರು ಅವರು, ಇದು ನಮ್ಮ ಹತ್ತನೇ ಕಾರ್ಯಕ್ರಮ, ಈ ವೇದಿಕೆಯ ಮೂಲಕ ಚಿತ್ರಕಲಾವಿದರು ಸೇರಿದಂತೆ ವಿವಿಧ ಕಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವ ಕಲಾವಿದರನ್ನು ಗುರುತಿಸಿ ಗೌರವಿಸುವ ಕಾರ್ಯ ನಡೆಯುತ್ತಿದೆ ಎಂದರು.
ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಗುರುತಿಸಿ ಸನ್ಮಾನಿಸಲಾಯಿತು.ಮಾಜಿ ಲಯನ್ಸ್ ಜಿಲ್ಲಾ ಗವರ್ನರ್ ಸುರೇಶ್, ಉಡುಪಿ ಜಿಲ್ಲಾ ಬಿಜೆಪಿ ಪ್ರಕೋಷ್ಠದ ಸಂಚಾಲಕ ದಿಲೇಶ್ ಶೆಟ್ಟಿ ಬೈರಂಪಳ್ಳಿ, ರಾಧಾಕೃಷ್ಣ ಮೆಂಡನ್ ಹಾಗೂ ಚಿತ್ರಕಲಾವಿದರ ಸಂಘಟನೆ ಉಡುಪಿಯ ಅಧ್ಯಕ್ಷ ಶಿವಪ್ರಸಾದ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.