ಚಿಕ್ಕಮಗಳೂರುಚಿಕ್ಕಮಗಳೂರಿನ ಬಿಜೆಪಿ ಪ್ರಭಾವಿ ಮುಖಂಡ ಕೋಟೆ ಕೃಷ್ಣ ಅವರು ಗುರುವಾರ ಬಿಜೆಪಿ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿ ನಗರಾಧ್ಯಕ್ಷ ಕೆ.ಎಸ್.ಪುಷ್ಪರಾಜ್ ಅವರನ್ನು ಭೇಟಿ ಮಾಡಿದ ಕೋಟೆ ಕೃಷ್ಣ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಪತ್ರ ನೀಡಿದ್ದಾರೆ. ಬಿಜೆಪಿ ಸಕ್ರಿಯ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿದ್ದೇನೆ. ಪಕ್ಷಕ್ಕೆ ಮಾಡಿದ ನನ್ನ ಸೇವೆ ಗುರುತಿಸಿ, ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ನೀಡಲಾಗಿತ್ತು. ಆದರೆ, ವೈಯಕ್ತಿಕ ಕಾರಣದಿಂದ ಇದೀಗ ತಮ್ಮ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಪತ್ರ ಸಲ್ಲಿಸುತ್ತಿರುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಚಿಕ್ಕಮಗಳೂರಿನ ಬಿಜೆಪಿ ಪ್ರಭಾವಿ ಮುಖಂಡ ಕೋಟೆ ಕೃಷ್ಣ ಅವರು ಗುರುವಾರ ಬಿಜೆಪಿ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿ ನಗರಾಧ್ಯಕ್ಷ ಕೆ.ಎಸ್.ಪುಷ್ಪರಾಜ್ ಅವರನ್ನು ಭೇಟಿ ಮಾಡಿದ ಕೋಟೆ ಕೃಷ್ಣ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಪತ್ರ ನೀಡಿದ್ದಾರೆ. ಬಿಜೆಪಿ ಸಕ್ರಿಯ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿದ್ದೇನೆ. ಪಕ್ಷಕ್ಕೆ ಮಾಡಿದ ನನ್ನ ಸೇವೆ ಗುರುತಿಸಿ, ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ನೀಡಲಾಗಿತ್ತು. ಆದರೆ, ವೈಯಕ್ತಿಕ ಕಾರಣದಿಂದ ಇದೀಗ ತಮ್ಮ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಪತ್ರ ಸಲ್ಲಿಸುತ್ತಿರುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.
ಆರೋಗ್ಯ ಸಮಸ್ಯೆಯಿಂದ ನನಗೆ ಪಕ್ಷದಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸಲು ಹಾಗೂ ಪಕ್ಷ ಸಂಘಟನೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ರಾಜಕೀಯ ನಿವೃತ್ತಿ ಪಡೆಯಲು ಬಯಸಿದ್ದು ಇದೇ ಕಾರಣದಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಮುಕ್ತ ಗೊಳಿಸುವಂತೆ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಅಂತರ ಕಾಯ್ದುಕೊಂಡಿದ್ದ ನಾಯಕ
ಕೋಟೆ ಕೃಷ್ಣ ಕಳೆದ ಒಂದು ವರ್ಷದಿಂದ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು. ಪಕ್ಷದ ಯಾವುದೇ ವೇದಿಕೆಗಳಲ್ಲಿಯೂ ಕಾಣಿಸಿಕೊಳ್ಳದೆ ಅಜ್ಞಾತರಾಗಿಯೇ ಉಳಿದಿದ್ದರು. ಇದೀಗ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಕೋಟೆ ಕೃಷ್ಣ ಅವರ ಪತ್ನಿ ಉಮಾದೇವಿ ಕೃಷ್ಣ ಬಿಜೆಪಿಯಿಂದ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಇದಲ್ಲದೆ ನಗರ ಸಭೆ ಕೊನೆ ಅವಧಿ ಅಧ್ಯಕ್ಷ ಸ್ಥಾನದ ಪ್ರಬಲ ಅಭ್ಯರ್ಥಿಯೂ ಆಗಿದ್ದರು. ಆದರೆ ಉಮಾದೇವಿ ಅವರಿಗೆ ಅಧ್ಯಕ್ಷ ಸ್ಥಾನ ಕೈತಪ್ಪಿತ್ತು. ಇದೇ ಕಾರಣದಿಂದ ಕೋಟೆ ಕೃಷ್ಣ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ ಎನ್ನುವ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ.ಫೋಟೋ:
ಬಿಜೆಪಿ ನಗರ ಮಂಡಲ ಅಧ್ಯಕ್ಷ ಪುಷ್ಪರಾಜ್ ಅವರಿಗೆ ಕೋಟೆ ಕೃಷ್ಣ ರಾಜಿನಾಮೆ ಪತ್ರ ನೀಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.