ಮೂರನೇ ದಿನಕ್ಕೆ ಕಾಲಿಟ್ಟ ಕೋಟೆ ಶ್ರೀ ಮಾರಿಕಾಂಬ ಜಾತ್ರೆ

KannadaprabhaNewsNetwork |  
Published : Feb 27, 2026, 01:45 AM IST
ಪೊಟೊ: 26ಎಸ್‌ಎಂಜಿಕೆಪಿ06ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಹಿನ್ನೆಲೆ ಗುರುವಾರ ಕೇಂದ್ರ ಸಚಿವ ಮುರುಗನ್ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಅವರು ಮಾರಿಕಾಂಬಾ ದೇವಸ್ಥಾನದಲ್ಲಿ ದೇವಿಯ ದರ್ಶನ ಪಡೆದರು. | Kannada Prabha

ಸಾರಾಂಶ

ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಗುರುವಾರ ಕೇಂದ್ರ ಸಚಿವ ಮುರುಗನ್ ಅವರು ಮಾರಿಕಾಂಬಾ ದೇವಸ್ಥಾನದಲ್ಲಿ ದೇವಿಯ ದರ್ಶನ ಪಡೆದರು. ಇವರಿಗೆ ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್‌.ಎನ್‌.ಚನ್ನಬಸಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ಜಗದೀಶ್‌ ಸಾಥ್‌ ನೀಡಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಗುರುವಾರ ಕೇಂದ್ರ ಸಚಿವ ಮುರುಗನ್ ಅವರು ಮಾರಿಕಾಂಬಾ ದೇವಸ್ಥಾನದಲ್ಲಿ ದೇವಿಯ ದರ್ಶನ ಪಡೆದರು. ಇವರಿಗೆ ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್‌.ಎನ್‌.ಚನ್ನಬಸಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ಜಗದೀಶ್‌ ಸಾಥ್‌ ನೀಡಿದರು.

ಗುರುವಾರ ಮಾರಿ ಗದ್ದುಗೆಯಲ್ಲಿ ಪೂಜೆ, ಮಡಿಲಕ್ಕಿ ಅರ್ಪಣೆ, ಹರಕೆ ಕೋಳಿ ಸಮರ್ಪಣೆ ನಡೆಯಿತು. ಭಕ್ತರ ಆಗಮನ ಕೂಡ ಹೆಚ್ಚಾಗಿತ್ತು. ಸರತಿ ಸಾಲಲ್ಲಿ ನಿಂತು ಭಕ್ತರು ದೇವಿಯ ದರ್ಶನ ಪಡೆದರು. ತವರು ಮನೆಯ ಉತ್ಸವದೊಂದಿಗೆ ಗದ್ದುಗೆ ಪ್ರವೇಶ ಮಾಡಿದ ಶ್ರೀ ಮಾರಿಕಾಂಬೆಯನ್ನು ನೋಡಲು ಜನ ಜಾತ್ರೆಯೇ ನೆರೆದಿದ್ದು, ದೇವಿಯನ್ನು ನೋಡಲು ಎರಡು ಕಣ್ಣುಗಳು ಸಾಲದಾಗಿತ್ತು. ಜೊತೆಗೆ ದೇವಸ್ಥಾನದ ಸುತ್ತಮುತ್ತ ಅಂಗಡಿ ಮುಂಗಟ್ಟುಗಳಲ್ಲಿ ವ್ಯಾಪಾರ ಕೂಡ ಬಲು ಜೋರಾಗಿತ್ತು.

ಪ್ರತಿದಿನವೂ ವಿವಿಧ ಸಮಾಜದವರು ಸರದಿಯಂತೆ ಪೂಜೆ ನೆರವೇರಿಸುತ್ತಿದ್ದಾರೆ. ಪ್ರಮುಖವಾಗಿ ವಾಲ್ಮೀಕಿ, ಉಪ್ಪಾರ, ಮಡಿವಾಳ ಸಮಾಜದವರು ನಾಲ್ಕುದಿನಗಳ ಕಾಲ ಗದ್ದುಗೆಯಲ್ಲಿ ಅಮ್ಮನವರಿಗೆ ಪೂಜೆ ಸಲ್ಲಿಸುತ್ತಿದ್ದಾರೆ.

ಬುಧವಾರ ಬೆಳಗ್ಗಿನಿಂದಲೇ ಕುರಿ ಹರಕೆಗಳು ನಡೆದು ಮಧ್ಯರಾತ್ರಿವರೆಗೂ ಹಬ್ಬ ಮಾಡುವವರ ಮನೆಗಳಲ್ಲಿ ಕುರಿ ಮಾಂಸದ ಅಡುಗೆಯ ಸಂಭ್ರಮ ಕಂಡು ಬಂದಿತ್ತು. ನಗರದ ರಸ್ತೆಗಳೆಲ್ಲಾ ತುಂಬಿ ತುಳುಕುತ್ತಿದ್ದವು. ಹಲವು ಕಡೆ ಸಂಜೆ ವಾಹನ ಸಂಚಾರ ದಟ್ಟಣೆ ಇತ್ತು. ರಾಜ್ಯದ ವಿವಿಧೆಡೆಯಿಂದ ಹಬ್ಬಕ್ಕೆ ನೆಂಟರು ಭಕ್ತರು ಆಗಮಿಸಿದ್ದು ಕಂಡು ಬಂದಿತು. ಇಂದು ಕೂಡ ಹಬ್ಬದ ಸಂಭ್ರಮ ಮನೆಗಳಲ್ಲಿ ಜೋರಾಗಿದೆ.

ಮಾರ್ಚ್ 6 ರಿಂದ 8 ರವರೆಗೆ ನೆಹರೂ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ ಕೂಡ ಆಯೋಜಿಸಲಾಗಿದೆ. ಜಾತ್ರೆಯು ಫೆ. 28ರಂದು ಶನಿವಾರ ರಾತ್ರಿ ಅಮ್ಮನವರನ್ನು ವನಕ್ಕೆ ತೆಗೆದುಕೊಂಡು ಹೋಗುವ ಮೂಲಕ ತೆರೆ ಬೀಳಲಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

]ನನ್ನ ಬಗ್ಗೆ ಇಲ್ಲಸಲ್ಲದ ಟೀಕೆ ಮಾಡಿದರೆ ಜನ ನಂಬಲ್ಲ: ಶಾಸಕ ಗಣೇಶ್‌
ವಿದ್ಯಾರ್ಥಿಗಳಿಗೆ ಕಲಿಕಾ ಸಾಮರ್ಥ್ಯ ಹೆಚ್ಚಳಕ್ಕೆ ವಿಶೇಷ ತರಗತಿಗಳು ವರದಾನ: ಡಾ.ಯೋಗೇಶ್