ಕನ್ನಡಪ್ರಭ ವಾರ್ತೆ ಕುಂದಾಪುರ
ವೇ. ಮೂ. ಕಡಂದಲೆ ಕೆ. ವಿ. ಕೃಷ್ಣ ಭಟ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ವಿದ್ವಾನ್ ಪಂಜ ಭಾಸ್ಕರ ಭಟ್ - ಶ್ರೀಮತಿ ಚಂದ್ರಿಕಾ ಭಾಸ್ಕರ ಭಟ್ ದಂಪತಿ ಅವರ ಪುತ್ರ ಶ್ರೀವತ್ಸ, ಸೊಸೆ ಕೌಸಲ್ಯಾ ಇದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ ಕಲಾರಂಗದ ಕಾರ್ಯಕರ್ತರ ನಿಸ್ವಾರ್ಥ ಸಾಮಾಜಿಕ ಕಾರ್ಯ ಎಲ್ಲರಿಗೆ ಮಾದರಿಯಾಗಿದೆ ಎಂದರು.
ವೇ. ಮೂ. ಸೀತಾರಾಮ ಭಟ್ ಮಾತನಾಡಿ ವಿದ್ವಾಂಸ ಭಾಸ್ಕರ್ ಭಟ್ಟರ ಸಾಮಾಜಿಕ ಸ್ಪಂದನೆ ನಮ್ಮಂತ ವೈದಿಕರಿಗೆ ಆದರ್ಶಪ್ರಾಯವಾದುದು ಎಂದರು. ಆನೆಗುಡ್ಡೆ ದೇವಳದ ನಿಕಟಪೂರ್ವ ಆಡಳಿತ ಮೊಕ್ತೇಸರ ಸೂರ್ಯನಾರಾಯಣ ಉಪಾಧ್ಯಾಯ ಶುಭ ಹಾರೈಸಿದರು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ವಿಶ್ವ ಹಿಂದೂ ಪರಿಷತ್ತಿನ ಪ್ರೇಮಾನಂದ ಶೆಟ್ಟಿ, ಸಂಸ್ಥೆಯ ಉಪಾಧ್ಯಕ್ಷ ಎಸ್. ವಿ. ಭಟ್, ವಿ. ಜಿ. ಶೆಟ್ಟಿ, ಕೋಶಾಧಿಕಾರಿ ಪ್ರೊ. ಕೆ. ಸದಾಶಿವ ರಾವ್ ಮತ್ತಿತರರಿದ್ದರು.
ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳೊಂದಿಗೆ ನಿರೂಪಿಸಿದರು. ನಾರಾಯಣ ಎಮ್. ಹೆಗಡೆ ವಂದಿಸಿದರು. ಎಚ್. ಎನ್. ಶೃಂಗೇಶ್ವರ ಸಹಕರಿಸಿದರು.