ಐಗೂರಿನಲ್ಲಿ ನಡೆಯುವ ತಾಲೂಕು ಸಮ್ಮೇಳನ ಅದ್ಧೂರಿ ಮತ್ತು ಅರ್ಥಪೂರ್ಣವಾಗಿ ನಡೆಯಲು ವಿವಿಧ ಸಮಿತಿಯವರ ಕೊಡುಗೆ ಅಪಾರವಾದುದು ಎಂದು ವಿಜೇತ್ ತಿಳಿಸಿದರು.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಐಗೂರು ಗ್ರಾಮದಲ್ಲಿ ಫೆ. 9ರಂದು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ವಿವಿಧ ಸಮಿತಿಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆ ಪಟ್ಟಣದ ಕನ್ನಡ ಸಾಹಿತ್ಯ ಭವನದಲ್ಲಿ ಸೋಮವಾರ ನಡೆಯಿತು.ಐಗೂರಿನಲ್ಲಿ ನಡೆಯುವ ತಾಲೂಕು ಸಮ್ಮೇಳನ ಅದ್ಧೂರಿ ಮತ್ತು ಅರ್ಥಪೂರ್ಣವಾಗಿ ನಡೆಯಲು ವಿವಿಧ ಸಮಿತಿಯವರ ಕೊಡುಗೆ ಅಪಾರವಾದದು ಎಂದು ತಾಲೂಕು ಅಧ್ಯಕ್ಷ ಎಸ್.ಡಿ.ವಿಜೇತ್ ಹೇಳಿದರು. ಸಮ್ಮೇಳನದಲ್ಲಿ ಭಾಗವಹಿಸುವ ಕನ್ನಡಾಭಿಮಾನಿಗಳಿಗೆ ಎಲ್ಲಾ ರೀತಿಯ ಸೌಲಭ್ಯಗಳು ಸಿಗುವಂತೆ ನೋಡಿಕೊಳ್ಳಬೇಕು. ಅತಿಥ್ಯದ ವಿಷಯದಲ್ಲಿ ಆಹಾರ ಸಮಿತಿಗೆ ಹೆಚ್ಚಿನ ಜವಾಬ್ದಾರಿಯಿದ್ದು ಸಮಿತಿಗೆ ಹೆಚ್ಚಿನ ಜನರನ್ನು ಸೇರಿಸಿಕೊಳ್ಳುವಂತೆ ಸಲಹೆ ನೀಡಿದರು. ಹಣಕಾಸು ಸಮಿತಿಯವರಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಹೇಳಿದರು. ಪ್ರತಿಯೊಂದು ಸಮಿತಿಯವರ ಸಹಕಾರದಿಂದ ಸಮ್ಮೇಳನ ಯಶಸ್ವಿಯಾಗಲಿದೆ. ಪ್ರತಿಯೊಂದು ವಿಷಯದಲ್ಲೂ ಜಿಲ್ಲಾ ಮತ್ತು ತಾಲೂಕು ಕಸಾಪ ಪದಾಧಿಕಾರಿಗಳು ಕೈಜೋಡಿಸುತ್ತಾರೆ ಎಂದು ಹೇಳಿದರು.ಮೆರವಣಿಗೆಯಲ್ಲಿ ಗ್ರಾಮೀಣ ಜನರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸ್ತ್ರೀ ಶಕ್ತಿ, ಸ್ವಸಹಾಯ, ಅಂಗನವಾಡಿ, ಶ್ರೀ ಧರ್ಮಸ್ಥಳ ಸಂಘದ ಮಹಿಳೆಯರು ಮತ್ತು ಎಲ್ಲಾ ಕನ್ನಡಾಭಿಮಾನಿಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಾರ್ಯದರ್ಶಿ ಜ್ಯೋತಿ ಅರುಣ್ ಕಾರ್ಯಕ್ರಮವ ಮಾಹಿತಿಯನ್ನು ಒದಗಿಸಿದರು. ಸಾಧಕರಿಗೆ ಸನ್ಮಾನ, ದ್ವಾರಗಳು ಮತ್ತು ವೇದಿಕೆಯ ನಿರ್ಮಾಣದ ಬಗ್ಗೆ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ವಿವಿಧ ಸಮಿತಿಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಇದ್ದರು. ಕಸಾಬ ಹೋಬಳಿ ಘಟಕದ ಅಧ್ಯಕ್ಷ ನಂಗಾರು ಕೀರ್ತಿ, ತಾಲೂಕು ಘಟಕದ ಗೌರವ ಕಾರ್ಯದರ್ಶಿ ಎ.ಪಿ.ವೀರರಾಜು, ಖಜಾಂಚಿ ಕೆ.ಪಿ.ದಿನೇಶ್, ಪದಾಧಿಕಾರಿಗಳಾದ ವಾಸಂತಿ, ಶುಭ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.