21ರಂದು ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ, ಸಿಎಂ ಸನ್ಮಾನ: ಜಿಲ್ಲೆ ಜನರು ಭಾಗಿ

KannadaprabhaNewsNetwork |  
Published : Jun 17, 2026, 01:30 AM IST
16ಕೆಡಿವಿಜಿ9-ದಾವಣಗೆರೆಯಲ್ಲಿ ಮಂಗಳವಾರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾಗಿ ನೇಮಕವಾದ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್‌ರ ಪದಗ್ರಹಣ ಸಮಾರಂಭ ಜೂ.21ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಜಿಲ್ಲೆಯಿಂದ ಸಹಸ್ರಾರು ಮುಖಂಡರು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ತಿಳಿಸಿದ್ದಾರೆ.

- ಬೆಂಗಳೂರು ಕಾರ್ಯಕ್ರಮಕ್ಕೆ ಮುಖಂಡರು, ಕಾರ್ಯಕರ್ತರು: ಡಿ.ಬಸವರಾಜ ಮಾಹಿತಿ - - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾಗಿ ನೇಮಕವಾದ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್‌ರ ಪದಗ್ರಹಣ ಸಮಾರಂಭ ಜೂ.21ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಜಿಲ್ಲೆಯಿಂದ ಸಹಸ್ರಾರು ಮುಖಂಡರು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ತಿಳಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರ ಸಮಕ್ಷಮದಲ್ಲಿ ಕೆಪಿಸಿಸಿ ನಿಕಟಪೂರ್ವ ಅಧ್ಯಕ್ಷ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ ಅವರಿಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ ಎಂದರು.

ನೂತನ ಸಿಎಂ ಡಿ.ಕೆ.ಶಿವಕುಮಾರ, ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯರಾದ ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎರಡನೇ ಸಲ ಡಿಸಿಎಂ ಆಗಿ ಅಧಿಕಾರ ವಹಿಸಿಕೊಂಡ ಡಾ. ಜಿ.ಪರಮೇಶ್ವರ ಅವರನ್ನು ಕೆಪಿಸಿಸಿಯಿಂದ ಪದಗ್ರಹಣ ಸಮಾರಂಭದಲ್ಲಿ ಸನ್ಮಾನಿಸಿ, ಅಭಿನಂದಿಸಲಾಗುವುದು ಎಂದು ಹೇಳಿದರು.

ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ, ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಕಾರ್ಯಾಧ್ಯಕ್ಷರು, ಸಚಿವರು, ಮಾಜಿ ಸಚಿವರು, ಶಾಸಕರು, ಸಂಸದರು, ರಾಜ್ಯಸಭಾ ಸದಸ್ಯರು, ವಿಪ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು, ಮಾಜಿ ಸಚಿವರು, ಮಾಜಿ ಶಾಸಕರು ಸೇರಿದಂತೆ ಎಲ್ಲ ಹಂತದ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.

ದಾವಣಗೆರೆ ಜಿಲ್ಲೆಯಿಂದ ಹತ್ತಾರು ಸಾವಿರ ಮುಖಂಡರು, ಕಾರ್ಯಕರ್ತರು ಲಘು ವಾಹನ, ಟಿಟಿ, ಬಸ್‌ಗಳು ಸೇರಿದಂತೆ ಬೆಂಗಳೂರಿನ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಇಡೀ ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರು ಸಮಾರಂಭದಲ್ಲಿ ಭಾಗವಹಿಸುವರು. ಕಾಂಗ್ರೆಸ್ಸಿನ ಸಾಮಾನ್ಯ ಕಾರ್ಯಕರ್ತನಾಗಿ, ದೇಶದ 20 ರಾಜ್ಯಗಳಲ್ಲಿ ಪಕ್ಷದ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿರುವ ಬಿ.ಕೆ. ಹರಿಪ್ರಸಾದ್ ಅಧ್ಯಕ್ಷರಾಗಿದ್ದು ಪಕ್ಷಕ್ಕೆ ಮತ್ತಷ್ಟು ಬಲ ತಂದಿದೆ ಎಂದು ಡಿ.ಬಸವರಾಜ ತಿಳಿಸಿದರು.

ಪಕ್ಷದ ಮುಖಂಡರಾದ ಮಾಜಿ ಮೇಯರ್ ಕೆ.ಚಮನ್ ಸಾಬ್‌, ನಲ್ಕುಂದ ಹಾಲೇಶ, ಬಿ.ಎನ್.ವಿನಾಯಕ, ಕೆ.ಎಂ.ಮಂಜುನಾಥ, ಎಂ.ಕೆ. ಲಿಯಾಖತ್ ಅಲಿ, ಸುರೇಶ ಜಾಧವ್, ಎಸ್.ರೇವಣಸಿದ್ದಪ್ಪ, ಬಿ.ಎಸ್.ಸುರೇಶ, ಈಶ್ವರ, ಓಂಕಾರ, ಡಿ.ಶಿವಕುಮಾರ ಇತರರು ಇದ್ದರು.

- - -

-16ಕೆಡಿವಿಜಿ9:

ದಾವಣಗೆರೆಯಲ್ಲಿ ಮಂಗಳವಾರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀಟ್ ಮರು ಪರೀಕ್ಷೆ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಿ: ಡಾ.ಕುಮಾರ
ಮತದಾರರ ಪಟ್ಟಿ ನಿಖರವಾಗಿ ಪರಿಷ್ಕರಿಸಿ: ಪಿ.ರವಿಕುಮಾರ್