ಕನ್ನಡಪ್ರಭ ವಾರ್ತೆ ಮೈಸೂರುಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ [ಮುಡಾ] ಹಗರಣ ಸಂಬಂಧ ಮುಖ್ಯಮಂತ್ರಿ ವಿರುದ್ಧ ದೂರು ನೀಡಿರುವ ಸ್ನೇಹಮಯಿ ಕೃಷ್ಣ ಬಿಜೆಪಿ ನಾಯಕರ ಅಣತಿಯಂತೆ ನೆಡೆದುಕೊಳ್ಳುತ್ತಿದ್ದಾರೆ. ಕೇಂದ್ರ ಸರ್ಕಾರದ ಸೂತ್ರಧಾರರಂತೆ ವರ್ತಿಸುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಆರೋಪಿಸಿದರು.ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ನೇಹಮಯಿ ಕೃಷ್ಣ ವಿರುದ್ಧ 43 ಪ್ರಕರಣಗಳು ದಾಖಲಾಗಿವೆ. ಕ್ರಿಮಿನಲ್ ಹಿನ್ನೆಲೆ ಹೊಂದಿರುವ ಸ್ನೇಹಮಯಿ ಕೃಷ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಬಂಧಿಸಿ ವಿಚಾರ ನಡೆಸುವಂತೆ ಆಗ್ರಹಿಸಿದ್ದಾರೆ. ಪ್ರತಿನಿತ್ಯ ಲೋಕಾಯುಕ್ತ ಕಚೇರಿಗೆ ಭೇಟಿ ನೀಡುತ್ತಿದ್ದಾರೆ. ಅಧಿಕಾರಿಗಳ ವಿರುದ್ಧ ಒತ್ತಡ ಹೇರುತ್ತಿದ್ದಾರೆ. ಬಿಜೆಪಿ ನಾಯಕರ ಅಣತಿಯಂತೆ ನೆಡೆದುಕೊಳ್ಳುತ್ತಿದ್ದಾರೆ ಎಂದು ದೂರಿದರು.ಲಕ್ಷ್ಮಣ ಪ್ರತಿನಿತ್ಯ ಲೋಕಾಯುಕ್ತ ಕಚೇರಿಗೆ ಹೋಗುತ್ತಿದ್ದಾರೆಂದು ಆರೋಪಿಸಿದ್ದಾರೆ. ಆದರೆ, ನಾನು ಒಮ್ಮೆ ಮಾತ್ರ ಹೋಗಿದ್ದೇನೆ. ಲೋಕಾಯುಕ್ತ ಕಚೇರಿ ಪಕ್ಕದಲ್ಲಿರುವ ಹೊಟೇಲ್ ನಲ್ಲಿ ಕಾಫಿ ಕುಡಿಯಲು ಪ್ರತಿನಿತ್ಯ ಹೋಗುತ್ತೇನೆ ಎಂದು ಅವರು ಸ್ಪಷ್ಟಪಡಿಸಿದರು.ಸ್ನೇಹಮಯಿ ಕೃಷ್ಣ ಬ್ಲಾಕ್ ಮೇಲರ್. ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಮಾಧ್ಯಮಗಳ ಮುಂದೆ ಸುಳ್ಳು ಹೇಳಿಕೆಗಳನ್ನು ನೀಡಿ ಪ್ರಚಾರ ಪಡೆಯುವ ಕೆಲಸವನ್ನು ಮಾಡುತ್ತಿದ್ದಾರೆ. ಪ್ರಕರಣ ತನಿಖೆಯ ಹಂತದಲ್ಲಿರುವಾಗ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಸ್ನೇಹಮಯಿ ಕೃಷ್ಣ ಕೇಂದ್ರ ಸರ್ಕಾರದ ಸೂತ್ರಧಾರರಂತೆ ವರ್ತಿಸುತ್ತಿದ್ದಾರೆ ಎಂದು ಅವರು ಕಿಡಿಕಾರಿದರು. ಬಿಜೆಪಿ ಟೀಕೆಗೆ ತಿರುಗೇಟುಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ಮೇಲಿನ ಪ್ರಕರಣವನ್ನು ರಾಜ್ಯ ಸರ್ಕಾರದಿಂದ ರದ್ದುಗೊಳಿಸಿದೆ. ಮುಸ್ಲಿಂ ಸಮುದಾಯದವರ ಹೆಸರು ಇರುವುದಕ್ಕೆ ಬಿಜೆಪಿಯವರು ಟೀಕಿಸುತ್ತಾರೆ. ಮುಸ್ಲಿಮರ ಹೆಸರು ಕೇಳಿದರೆ ಬಿಜೆಪಿಯರಿಗೆ ಉರಿ.ಮುಸ್ಲಿಮರನ್ನು ಭಯೋತ್ಪಾದಕರಿಗೆ ಹೋಲಿಸುತ್ತಿದ್ದಾರೆ. ಆದರೆ, ಬಿಜೆಪಿ ಹಾಗೂ ಆರ್ ಎಸ್ಎಸ್ ನವರು ನಿಜವಾದ ಭಯೋತ್ಪಾದಕರು ಎಂದು ತಿರುಗೇಟು ನೀಡಿದರು.ರಾಜ್ಯ ಸರ್ಕಾರ 43 ಪ್ರಕರಣಗಳನ್ನು ಕೈ ಬಿಟ್ಟಿದೆ. ಅದರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಗೆ ಸಂಬಂಧಿಸಿದ 9 ಪ್ರಕರಣಗಳಿವೆ. ಉಳಿದ 34 ಪ್ರಕರಣಗಳು ಬಿಜೆಪಿ ಸರ್ಕಾರದ ಅವಧಿಗೆ ಸೇರಿವೆ. ರೈತ ಮುಖಂಡರು, ಕನ್ನಡಪರ ಹೋರಾಟಗಾರರಿಗೆ ಸಂಬಂಧಿಸಿದ ಪ್ರಕರಣಗಳಾಗಿವೆ. ಹುಬ್ಬಳ್ಳಿ ಪ್ರಕರಣದಲ್ಲಿ ಮುಸ್ಲಿಮರ ಹೆಸರು ಇರುವುದರಿಂದ ಬಿಜೆಪಿಗರು ದೊಡ್ಡದು ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.