ಕೆಪಿಎಸ್‌ ಶಾಲೆಗಳಲ್ಲಿ ಸ್ಕೌಟ್ಸ್,ಗೈಡ್ಸ್ ಸ್ಥಾಪನೆಗೆ ಚಿಂತನೆ

KannadaprabhaNewsNetwork |  
Published : Jan 13, 2026, 02:00 AM IST
ಪೊಟೊ: 12ಎಸ್‌ಎಂಜಿಕೆಪಿ07 | Kannada Prabha

ಸಾರಾಂಶ

ಸಮಾಜಮುಖಿ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಸ್ಕೌಟ್ಸ್, ಗೈಡ್ ದಳ ಸ್ಥಾಪಿಸಲು ಚಿಂತನೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಶಿವಮೊಗ್ಗ: ಸಮಾಜಮುಖಿ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಸ್ಕೌಟ್ಸ್, ಗೈಡ್ ದಳ ಸ್ಥಾಪಿಸಲು ಚಿಂತನೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಆವರಣದಲ್ಲಿ ಆಯೋಜಿಸಿದ್ದ ಶತಮಾನೋತ್ಸವ ಹಾಗೂ ಜಿಲ್ಲಾಮಟ್ಟದ ರ‍್ಯಾಲಿ ಉದ್ಘಾಟಿಸಿ ಮಾತನಾಡಿ, ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ದೈಹಿಕವಾಗಿ ಮಾನಸಿಕವಾಗಿ ಸದೃಢರಾಗುತ್ತಾರೆ. ನೀತಿ ಬೋಧನೆ ಮಾಡುವ ಒಂದು ಪಾಠವನ್ನು ಪಠ್ಯಪುಸ್ತಕಗಳಲ್ಲಿ ಅಳವಡಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಸಮಾಜ ಸೇವೆಗಳಲ್ಲಿ ತೊಡಗಿಸಿಕೊಳ್ಳಲು ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ಉತ್ತಮವಾದ ಅವಕಾಶವಿದೆ. ಸ್ಕೌಟ್ಸ್ ಗೈಡ್ಸ್ ಚಳುವಳಿ ಮನೆ ಮನೆಗಳನ್ನು ತಲುಪಬೇಕು ಎಂದರು.

ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಮಾತನಾಡಿ, ಶತಮಾನೋತ್ಸವ ಆಚರಿಸುವ ಸಂದರ್ಭದಲ್ಲಿ ವ್ಯವಸ್ಥಿತವಾಗಿ ಸಂಸ್ಥೆ ಈ ಮಟ್ಟಕ್ಕೆ ಬೆಳೆಯಲು ಶ್ರಮಿಸಿದ ಗಣ್ಯರನ್ನು ನಾವು ನೆನಪು ಮಾಡಿಕೊಳ್ಳಲೇಬೇಕು. ಶಿವಮೊಗ್ಗದ ಜಿಲ್ಲಾ ಸಂಸ್ಥೆ ಶತಮಾನೋತ್ಸವ ಹಾಗೂ ಟಿ.ವಿ.ನಾರಾಯಣಶಾಸ್ತ್ರಿಗಳ ಜನ್ಮ ಶತಮಾನೋತ್ಸವ ಕಾರ್ಯಕ್ರಮ ನಮ್ಮ ರಾಜ್ಯಕ್ಕೆ ಮಾದರಿಯಾಗಿದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಶಿವಮೊಗ್ಗ ಜಿಲ್ಲಾ ಮುಖ್ಯ ಪ್ರಧಾನ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಮಾತನಾಡಿ, ಶತಮಾನೋತ್ಸವ ಯಶಸ್ವಿಯಾಗಿ ನಡೆಯಲು ಸಹಕರಿಸಿದ ಎಲ್ಲಾ ಜಿಲ್ಲೆಯ ಪದಾಧಿಕಾರಿಗಳಿಗೆ, ಸಾರ್ವಜನಿಕರಿಗೆ, ದಾನಿಗಳಿಗೆ ಅಭಿನಂದಿಸಿ ಗೌರವಿಸಿದರು.

ಇದೇ ವೇಳೆ ಸಂಸ್ಥೆ ಕಟ್ಟಿ ಬೆಳೆಸಲು ಸಹಕರಿಸಿದ ನೂರು ಜನ ಪದಾಧಿಕಾರಿಗಳಿಗೆ ಸನ್ಮಾನಿಸಲಾಯಿತು.

ಶತಮಾನೋತ್ಸವ ಸಮಿತಿ ಅಧ್ಯಕ್ಷ ಎಸ್.ರುದ್ರೇಗೌಡ, ಎಂಎಲ್‌ಸಿ ಬಲ್ಕಿಶ್ ಬಾನು, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಎಡಿಸಿ ಅಭಿಷೇಕ್, ಭಾರತಿ ಚಂದ್ರಶೇಖರ, ರಾಜ್ಯ ಉಪಾಧ್ಯಕ್ಷ ಮಹೇಶ್, ಆಯುಕ್ತ ಕೆ.ರವಿ, ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್, ಚೂಡಾಮಣಿ ಪವಾರ್, ಎಸ್.ಜಿ.ಆನಂದ್ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೈಕೋರ್ಟ್‌ ಹೊಸ ಕಟ್ಟಡಕ್ಕೆ 30 ಎಕ್ರೆಕೋರಿಕೆ:ರಾಜ್ಯ ಸರ್ಕಾರಕ್ಕೆ ನೋಟಿಸ್‌
ಬಿಎಂಐಸಿ ಮರುಪರಿಶೀಲಿಸಿ: ರಾಜ್ಯಕ್ಕೆ ಕೋರ್ಟ್‌ ಸೂಚನೆ