- ಕುಣಿಬೆಳಕೆರೆಯಲ್ಲಿ ವೃತ್ತಿ ಅವಕಾಶಗಳ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ವಿನಯಕುಮಾರ್
ಕನ್ನಡಪ್ರಭ ವಾರ್ತೆ ಹರಿಹರ
ರಾಜ್ಯ ಸರ್ಕಾರವು ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಿನಲ್ಲಿ ಸರ್ಕಾರಿ ಶಾಲೆಗಳ ಮುಚ್ಚುವ ಹುನ್ನಾರ ಮಾಡಿದೆ. ಈ ಯೋಜನೆ ವಿರುದ್ಧ ಪೋಷಕರು, ಸಾರ್ವಜನಿಕರು ವಿರೋಧ ವ್ಯಕ್ತಪಡಿಸಬೇಕು. ಶಿಕ್ಷಣ ವಿರೋಧಿ ನೀತಿಗಳ ವಿರುದ್ಧ ಸಂಘಟಿತರಾಗಿ ಹೋರಾಟ ನಡೆಸಬೇಕು ಎಂದು ಇನ್ ಸೈಟ್ಸ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕ ಹಾಗೂ ಸ್ವಾಭಿಮಾನಿ ಬಳಗ ರಾಜ್ಯಾಧ್ಯಕ್ಷ ಜಿ.ಬಿ. ವಿನಯ್ ಕುಮಾರ್ ಹೇಳಿದರು.ತಾಲೂಕಿನ ಕುಣಿಬೆಳಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಗ್ರಾಮೀಣ ಪ್ರದೇಶ ಮಕ್ಕಳಿಗೆ ಏರ್ಪಡಿಸಿದ್ದ ವೃತ್ತಿ ಅವಕಾಶಗಳ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.
ಕರ್ನಾಟಕ ಪಬ್ಲಿಕ್ ಸ್ಕೂಲ್ ಹೆಸರಿನಲ್ಲಿ ಒಂದೂವರೆಯಿಂದ 2 ಸಾವಿರ ವಿದ್ಯಾರ್ಥಿಗಳಿಗೆ ಶಿಕ್ಷಣ ಕೊಡಲಾಗುತ್ತದೆ. ನರ್ಸರಿಯಿಂದ ಪಿಯುಸಿವರೆಗೆ ಒಂದೇ ಶಾಲೆ ಇರುತ್ತದೆ. ಇದೇ ಶಾಲೆಗೆ ನೀವು ಕಳುಹಿಸಬೇಕು. ಈಗಿರುವ ಶಾಲೆಗಳನ್ನು ಮುಚ್ಚಲಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು, ಪೋಷಕರು ಹಾಗೂ ಕುಣಿಬೆಳಕೆರೆ ಗ್ರಾಮಸ್ಥರು ಹಾಜರಿದ್ದರು.
- - -(ಕೋಟ್) ಚಿಕ್ಕವಯಸ್ಸಿನಲ್ಲಿಯೇ ಮಕ್ಕಳಿಗೆ ಪುಸ್ತಕಗಳನ್ನು ಓದುವ ಅಭಿರುಚಿ ಬೆಳೆಸಬೇಕು. ಸ್ವಯಂಪ್ರೇರಿತರಾಗಿ ಓದುವ ಹವ್ಯಾಸ ರೂಢಿಸಿಕೊಂಡರೆ ಜ್ಞಾನ ಸಂಪಾದನೆ ಮಾಡಲು ಸುಲಭವಾಗುತ್ತದೆ. ಇಂಥ ವಿದ್ಯಾರ್ಥಿಗಳನ್ನು ಐಎಎಸ್ ಮತ್ತು ಕೆಎಎಸ್ ನಂಥ ಉನ್ನತ ಹುದ್ದೆಗೇರಲು ತರಬೇತಿ ನೀಡಲು ಕಷ್ಟವಾಗದು. ಸಾಹಿತ್ಯ, ಸಂಸ್ಕೃತಿ, ನಾಡಿನ ಸಾಧಕರ ಜೀವನಗಾಥೆಯಂಥ ಪುಸ್ತಕ ಓದಲು ಶುರು ಮಾಡಿದರೆ ಅಭಿರುಚಿ ಬದಲಾಗುತ್ತಾ ಹೋಗುತ್ತದೆ.
- - -
-07HRR.05:ಹರಿಹರ ತಾಲೂಕಿನ ಕುಣಿಬೆಳಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಗ್ರಾಮೀಣ ಪ್ರದೇಶ ಮಕ್ಕಳಿಗೆ ಏರ್ಪಡಿಸಿದ್ದ ವೃತ್ತಿ ಅವಕಾಶಗಳ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ವಿನಯ್ ಕುಮಾರ್ ಅವರನ್ನು ಗೌರವಿಸಲಾಯಿತು.