-ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್. ಮರಿಸ್ವಾಮಿ----
ಪ್ರತಿಯೊಬ್ಬ ವಿದ್ಯಾರ್ಥಿ ತನ್ನದೇ ಆದ ಗುರಿಯನ್ನು ಇಟ್ಟುಕೊಂಡಾಗ ಮಾತ್ರ ಆತ ತನ್ನ ಜೀವನದಲ್ಲಿ ಏನ್ನಾದರೂ ಸಾದಿಸುತ್ತಾನೇ ಎಂದು ಜಿಲ್ಲೆ ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್. ಮರಿಸ್ವಾಮಿ ರವರು ಹೇಳಿದರು
ಮೂಗೂರಿನ ಕೆಪಿಎಸ್ ಶಾಲೆಯ ಕಾಲೇಜು ವಿಭಾಗದ ಆವರಣದಲ್ಲಿ 2023 -24 ನೇ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಸಮಾರೋಪ ಸಮಾರಂಭ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾಗಿ ಬೀಳ್ಕೊಡುಗೆ ಸಮಾರಂಭವನ್ನು ಅವರು ಉದ್ಘಾಟಿಸಿ ಮಾತನಾಡಿದರು.ಶಿಕ್ಷಣ ಇಲ್ಲದಿದ್ದರೆ ಏನು ಸಾಧಿಸುವುದಕ್ಕೆ ಆಗುವುದಿಲ್ಲ, ಕಾಲೇಜಿಗೆ ಬಂದು ವಿದ್ಯಾರ್ಥಿಗಳು ಟೈಂ ಪಾಸ್ ಮಾಡಿಕೊಂಡು ಹೋಗಬಾರದು, ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯಾರ್ಥಿಗಳು ಫಲಿತಾಂಶ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಬೇಕು, ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣವೇ ಜೀವನ ಓದುವ ಕಡೆ ಗಮನ ಹರಿಸಿ ಎಂದರು.
ಕಾಲೇಜು ವತಿಯಿಂದ ವರ್ಷದ ಉತ್ತಮ ವಿದ್ಯಾರ್ಥಿಗಳಿಗೆ ಎಲ್ಲ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಲಾಯಿತು. ಕ್ರೀಡೆಯಲ್ಲಿ ಭಾಗವಹಿಸಿದ ವಿಜೇತ ವಿದ್ಯಾರ್ಥಿಗಳಿಗೆ ಕಾಲೇಜು ವತಿಯಿಂದ ಪ್ರಶಸ್ತಿಗಳನ್ನು ನೀಡಲಾಯಿತು.