14 ಕೋಟಿ ವೆಚ್ಚದಲ್ಲಿ ಕೆಪಿಎಸ್ ಶಾಲೆ ಅಭಿವೃದ್ಧಿ: ಶಾಸಕ

KannadaprabhaNewsNetwork |  
Published : Sep 30, 2026, 01:15 AM IST
29ಕೆಆರ್ ಎಂಎನ್ 14.ಜೆಪಿಜಿಹಾರೋಹಳ್ಳಿ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯ ಅಭಿವೃದ್ಧಿ ಕಾಮಗಾರಿಗಳು ಹಾಗೂ ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಶಿಕ್ಷಕರು ಮತ್ತು ಶಾಲಾ ಆಡಳಿತ ಮಂಡಳಿಯೊಂದಿಗೆ ಶಾಸಕ ಇಕ್ಬಾಲ್ ಹುಸೇನ್  ಚರ್ಚಿಸಿದರು. | Kannada Prabha

ಸಾರಾಂಶ

ಹಾರೋಹಳ್ಳಿ: ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಗೆ ಶಾಸಕ ಇಕ್ಬಾಲ್ ಹುಸೇನ್ ಭೇಟಿ ನೀಡಿ ಶಾಲೆಯ ಅಭಿವೃದ್ಧಿ ಕಾಮಗಾರಿ ಹಾಗೂ ವಿದ್ಯಾರ್ಥಿಗಳ ಸಮಸ್ಯೆ ಕುರಿತು ಶಿಕ್ಷಕರು ಮತ್ತು ಶಾಲಾ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿದರು

ಹಾರೋಹಳ್ಳಿ: ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಗೆ ಶಾಸಕ ಇಕ್ಬಾಲ್ ಹುಸೇನ್ ಭೇಟಿ ನೀಡಿ ಶಾಲೆಯ ಅಭಿವೃದ್ಧಿ ಕಾಮಗಾರಿ ಹಾಗೂ ವಿದ್ಯಾರ್ಥಿಗಳ ಸಮಸ್ಯೆ ಕುರಿತು ಶಿಕ್ಷಕರು ಮತ್ತು ಶಾಲಾ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿದರು.

ಬಳಿಕ ಮಾತನಾಡಿದ ಶಾಸಕರು, ಅಂಥೆಮ್ ಕಂಪನಿಯ ಸಿಎಸ್‌ಆರ್ ಅನುದಾನದಡಿ 14 ಕೋಟಿ ವೆಚ್ಚದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಅಭಿವೃದ್ಧಿಪಡಿಸಲಾಗುವುದು. ಶಾಲೆ ಸುತ್ತಲೂ ಸುಸಜ್ಜಿತ ಕಾಂಪೌಂಡ್ ನಿರ್ಮಾಣ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಶೂಗಳ ಗುಣಮಟ್ಟದ ಬಗ್ಗೆ ದೂರುಗಳು ಬಂದಿದ್ದು, ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಶಿಕ್ಷಕರು ವಿದ್ಯಾರ್ಥಿಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ, ಅವರ ಶೈಕ್ಷಣಿಕ ಪ್ರಗತಿ ಹಾಗೂ ಅಗತ್ಯಗಳತ್ತ ಗಮನ ಹರಿಸಬೇಕು. ಶಿಕ್ಷಕರು ಪರಸ್ಪರ ಹೊಂದಾಣಿಕೆಯಿಂದ ಕೆಲಸ ಮಾಡುವ ಮೂಲಕ ಶಾಲೆಯ ಶೈಕ್ಷಣಿಕ ವಾತಾವರಣ ಉತ್ತಮಪಡಿಸಬೇಕು. ಮುಂದಿನ ದಿನಗಳಲ್ಲಿ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿಯೂ ಸಿಎಸ್‌ಆರ್ ಅನುದಾನದ ಸಹಕಾರದೊಂದಿಗೆ ಶಾಲೆಗಳನ್ನು ಅಭಿವೃದ್ಧಿಪಡಿಸುವ ಹಾಗೂ ಅಗತ್ಯವಿರುವೆಡೆ ಶಾಲಾ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು.ಶಾಲೆ ಮೂಲಸೌಕರ್ಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣ ಹಾಗೂ ಶಿಕ್ಷಕರು-ಪೋಷಕರ ನಡುವಿನ ಸಮನ್ವಯಕ್ಕೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ ಎಂದು ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.

29ಕೆಆರ್ ಎಂಎನ್ 14.ಜೆಪಿಜಿ

ಹಾರೋಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆಯ ಅಭಿವೃದ್ಧಿ ಕಾಮಗಾರಿಗಳು ಹಾಗೂ ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಶಿಕ್ಷಕರು ಮತ್ತು ಶಾಲಾ ಆಡಳಿತ ಮಂಡಳಿಯೊಂದಿಗೆ ಶಾಸಕ ಇಕ್ಬಾಲ್ ಹುಸೇನ್ ಚರ್ಚಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕರಕುಶಲ ಕಲೆಗಳಿವೆ ತನ್ನದೇ ವೈಶಿಷ್ಟ್ಯತೆ: ಕಿರಣ
ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಸ್ವಪಕ್ಷದವರ ಆಕ್ರೋಶ