ಕನ್ನಡಪ್ರಭ ವಾರ್ತೆ ಹಲಗೂರು
ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಕೆಪಿಎಸ್ ಶಾಲಾ ಸಂಭ್ರಮವನ್ನು ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ಸನ್ನಿವೇಶದಲ್ಲಿ ಎಲ್ಲರಿಗೂ ಆಂಗ್ಲ ಮಾಧ್ಯಮದ ಅವಶ್ಯಕತೆ ಇದ್ದು, ಈ ಶಾಲೆಯಲ್ಲಿ ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಆಂಗ್ಲ ಮಾಧ್ಯಮದಲ್ಲಿ ಸಂಪೂರ್ಣ ಉಚಿತ ಶಿಕ್ಷಣದ ಜೊತೆಗೆ ಕನ್ನಡ ಮಾಧ್ಯಮದಲ್ಲೂ ಕೂಡ ಶಿಕ್ಷಣ ನೀಡಲಾಗುತ್ತಿದೆ ಎಂದರು.
2018ರಲ್ಲಿ ಶಾಲೆ ಪ್ರಾರಂಭವಾಯಿತು. ಈ ವರ್ಷದಿಂದ ಮಳವಳ್ಳಿ ತಾಲೂಕಿನಲ್ಲಿ ಇನ್ನೂ ಮೂರು ಕೆಪಿಎಸ್ ಶಾಲೆಗಳನ್ನು ಪ್ರಾರಂಭಿಸಲಾಗುತ್ತಿದೆ. ಎಲ್ಲಾ ಮಕ್ಕಳಿಗೂ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಉಚಿತವಾಗಿ ನೀಡಬೇಕೆಂಬುದೇ ಸರ್ಕಾರದ ಮುಖ್ಯ ಉದ್ದೇಶ ಎಂದರು.ಕ್ಷೇತ್ರ ಸಮನ್ವಯಾಧಿಕಾರಿ ಎಂ.ಕೆ.ಶ್ರೀನಿವಾಸ್ ಮಾತನಾಡಿ, ಸಾಧಕರೆಲ್ಲರೂ ಸರ್ಕಾರಿ ಶಾಲೆಯಲ್ಲಿ ಓದಿದವರೇ ಹೆಚ್ಚು. ಈಗ ಉನ್ನತ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಮಗೆ ಈಗ ಸರ್ಕಾರಿ ಉದ್ಯೋಗ ಬೇಕು ಎನ್ನುತ್ತೇವೆ. ಆದರೆ, ಸರ್ಕಾರಿ ಶಾಲೆ ಬೇಡ ಎಂಬ ಮನಸ್ಥಿತಿಯಲ್ಲಿದ್ದೇವೆ. ಇದರಿಂದ ಹೊರಬರಬೇಕು ಎಂದರು.
ಈ ವೇಳೆ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರು ಹಾಗೂ ಪೋಷಕರ ಮನರಂಜಿಸಿದವು.
ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಉಪಾಧ್ಯಕ್ಷ ಜಿ.ಎಂ.ಮಹದೇವು ಮತ್ತು ಸದಸ್ಯರು, ಮಳವಳ್ಳಿ ಅಕ್ಷರ ದಾಸೋಹದ ನಿರ್ದೇಶಕ ಬಿ.ಮಹದೇವು,ಉದ್ಯಮಿ ಆನಂದ್ ಕುಮಾರ್, ಗ್ರಾಪಂ ಅಧ್ಯಕ್ಷೆ ಗುಲ್ನಾಜ್ ಬಾನು ಮತ್ತು ಉಪಾಧ್ಯಕ್ಷರು, ಸದಸ್ಯರು ಹಾಗೂ ಮುಖ್ಯ ಶಿಕ್ಷಕ ಕುಳ್ಳೇಗೌಡ ಮತ್ತು ಶಿಕ್ಷಕವೃಂದ ಸೇರಿದಂತೆ ಇತರರು ಇದ್ದರು.