ಕೆ.ಆರ್.ಪೇಟೆ ತಾಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಮೂವರು ನಾಮಪತ್ರ ಸಲ್ಲಿಕೆ

KannadaprabhaNewsNetwork |  
Published : Oct 17, 2024, 12:11 AM IST
16ಕೆಎಂಎನ್ ಡಿ16 | Kannada Prabha

ಸಾರಾಂಶ

ಕೆ.ಆರ್.ಪೇಟೆ ತಾಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮೂರು ಸ್ಥಾನಗಳಿಗೆ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಒಮ್ಮತದ ಅಭ್ಯರ್ಥಿಗಳಾಗಿ ತಾಲೂಕು ಯೋಜನಾಧಿಕಾರಿ ಶ್ರೀನಿವಾಸ್, ಆನೆಗೊಳ ಗ್ರಾಪಂ ಪಿಡಿಒ ರವಿಕುಮಾರ್ ಹಾಗೂ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ದ್ವಿತೀಯ ದರ್ಜೆ ಸಹಾಯಕ ರವಿಪ್ರಸನ್ನ ನಾಮಪತ್ರ ಸಲ್ಲಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ತಾಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮೂರು ಸ್ಥಾನಗಳಿಗೆ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಒಮ್ಮತದ ಅಭ್ಯರ್ಥಿಗಳಾಗಿ ತಾಲೂಕು ಯೋಜನಾಧಿಕಾರಿ ಶ್ರೀನಿವಾಸ್, ಆನೆಗೊಳ ಗ್ರಾಪಂ ಪಿಡಿಒ ರವಿಕುಮಾರ್ ಹಾಗೂ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ದ್ವಿತೀಯ ದರ್ಜೆ ಸಹಾಯಕ ರವಿಪ್ರಸನ್ನ ನಾಮಪತ್ರ ಸಲ್ಲಿಸಿದ್ದಾರೆ.

ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಚುನಾವಣಾ ಅಧಿಕಾರಿಯಾಗಿರುವ ಗ್ರೇಡ್-2 ತಹಸೀಲ್ದಾರ್ ಬಿ.ಆರ್.ಲೋಕೇಶ್ ಅವರಿಗೆ ಮೂವರು ಸ್ಪರ್ಧಿಗಳು ನಾಮಪತ್ರ ಸಲ್ಲಿಸಿದರು. ಈ ಮೂವರನ್ನು ಬಿಟ್ಟು ಬೇರೆ ಯಾರೂ ಕೂಡ ನಾಮಪತ್ರ ಸಲ್ಲಿಸದ ಕಾರಣ ಬಹುತೇಕ ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ.

ನಾಮಪತ್ರ ಸಲ್ಲಿಕೆ ನಂತರ ತಾಲೂಕು ಯೋಜನಾಧಿಕಾರಿ ಶ್ರೀನಿವಾಸ್ ಮಾತನಾಡಿ, ಅ.28ರಂದು ಚುನಾವಣೆ ನಡೆಯಲಿದ್ದು, ಪ್ರಸ್ತುತ ಸರ್ಕಾರಿ ನೌಕರರ ತಾಲೂಕು ಅಧ್ಯಕ್ಷರ ಹುದ್ದೆಗೆ ನಾನು ಪ್ರಬಲ ಆಕಾಂಕ್ಷಿ. ಎಲ್ಲಾ ಇಲಾಖೆಗಳ ಅಭ್ಯರ್ಥಿಗಳು ತಮ್ಮೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪ್ರತ್ಯೇಕ ಗುಂಪು ತಾಲೂಕಿನಲ್ಲಿ ರಚನೆಯಾಗಿದೆ. ಎಲ್ಲಾ ಇಲಾಖೆಗಳ ಪ್ರತಿನಿಧಿಗಳು ನಮ್ಮ ಗುಂಪಿಗೆ ಬೆಂಬಲ ನೀಡಿ ಆ ಮೂಲಕ ತಾಲೂಕು ನೌಕರರ ಹಿತರಕ್ಷಣೆ ಮತ್ತು ಸೇವೆ ಮಾಡಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.ನಾಳೆ ಹಲವೆಡೆ ವಿದ್ಯುತ್ ವ್ಯತ್ಯಯ

ಮಂಡ್ಯ:66/11 ಕೆ.ವಿ. ಹಂಪಾಪುರ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್-13 ಉಪ್ಪಾರಕನಹಳ್ಳಿ ಎನ್‌ಜೆವೈ ಫೀಡರ್‌ನಲ್ಲಿ ಅ.18 ರಂದು ತುರ್ತು ಕಾರ್ಯನಿರ್ವಹಣೆ ಕೆಲಸ ಹಮ್ಮಿಕೊಂಡಿರುವುದರಿಂದ ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ತಾಲೂಕಿನ ಉಪ್ಪಾರಕನಹಳ್ಳಿ, ಗಂಟೆಗೌಡನಹಳ್ಳಿ, ದೊಡ್ಡಗರುಡನಹಳ್ಳಿ, ಗುಡಿಗೇನಹಳ್ಳಿ, ಮಾಯಪ್ಪನಹಳ್ಳಿ, ಹಂಪಾಪುರ, ಹಬ್ಬದಮಾರನಹಳ್ಳಿ, ಹನಗನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮಂಡ್ಯ ಸೆಸ್ಕ್ ವಿಭಾಗದ ಕಾರ್ಯ ನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಿರ್ಮಲ ತುಂಗಭದ್ರಾ ಅಭಿಯಾನಕ್ಕೆ ಕೈಜೋಡಿಸಿ
ಹೊಲಗಳಲ್ಲಿ ಚರಗ ಚೆಲ್ಲಿ ಹಬ್ಬ ಆಚರಿಸಿದ ಅನ್ನದಾತರು