ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲಾ ಸರ್ಕಾರಿ ನೌಕರರ ಭವನದಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಕುಮಾರ್ ಅವರು ಮಂಡ್ಯ ಉತ್ತರ ವಲಯದ ಜೋಡಿ ಹೊಡಾಘಟ್ಟ ಗ್ರಾಮದ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರಾಗಿರುವ ಕೆ.ಆರ್.ಶಶಿಧರ ಈಚಗೆರೆ ಅವರಿಗೆ ನೇಮಕಾತಿ ಪತ್ರ ವಿತರಣೆ ಮಾಡಿದರು.
ಈ ಬಗ್ಗೆ ಕೆ.ಆರ್.ಶಶಿಧರ ಈಚಗೆರೆ ಮಾತನಾಡಿ, ಶಿಕ್ಷಕರ ಪರ ಹೋರಾಟ ಹಾಗೂ ಇನ್ನಿತರ ಕೆಲಸಗಳನ್ನುಗುರುತಿಸಿ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಿದ ಜಿಲ್ಲಾಧ್ಯಕ್ಷ ಕೆ.ನಾಗೇಶ್, ರಾಜ್ಯ ಪರಿಷತ್ ಸದಸ್ಯ ಎಸ್.ಶಂಭುಗೌಡ, ಖಜಾಂಚಿ ಹೇಮಣ್ಣ, ಕಾರ್ಯದರ್ಶಿ ವಿ.ಎನ್.ವಿಜಯಕುಮಾರ್ ಹಾಗೂ ಜಿಲ್ಲಾ ನಿರ್ದೇಶಕರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಎಂ.ಪಿ.ಕೃಷ್ಣಕುಮಾರ್, ಜಿಲ್ಲಾಧ್ಯಕ್ಷ ಕೆ.ನಾಗೇಶ್, ರಾಜ್ಯ ಪರಿಷತ್ ಸದಸ್ಯ ಎಸ್.ಶಂಭುಗೌಡ, ಖಜಾಂಚಿ ಹೇಮಣ್ಣ, ಕಾರ್ಯದರ್ಶಿ ವಿ.ಎನ್.ವಿಜಯಕುಮಾರ್ ಹಾಗೂ ಜಿಲ್ಲಾ ಮತ್ತು ತಾಲೂಕುಗಳ ಪದಾಧಿಕಾರಿಗಳು ಮತ್ತು ನಿರ್ದೇಶಕರು ಇದ್ದರು.