ಕೆಆರ್‌ಇಡಿಎಲ್‌ನ ರೂ.4.5 ಕೋಟಿ ಲಾಭಾಂಶ ಸಾಮಾಜಿಕ ಕಾರ್ಯಕ್ಕೆ

KannadaprabhaNewsNetwork |  
Published : Mar 09, 2026, 01:15 AM IST
೦೮ಬಿಹೆಚ್‌ಆರ್ ೨: ಬಾಳೆಹೊನ್ನೂರು ಸಮೀಪದ ಬೆಳಸೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ನಿಗಮದ ಲಾಭಾಂಶದ ಹಣವನ್ನು ನಿಗಮದ ಅಧ್ಯಕ್ಷ, ಶಾಸಕ ಟಿ.ಡಿ.ರಾಜೇಗೌಡ ವಿವಿಧ ಸಂಘ ಸಂಸ್ಥೆಗಳಿಗೆ ಚೆಕ್ ಮೂಲಕ ಹಸ್ತಾಂತರಿಸಿದರು. | Kannada Prabha

ಸಾರಾಂಶ

ಬಾಳೆಹೊನ್ನೂರುಕರ್ನಾಟಕ ನವೀಕರಿಸಬಹುದಾದ ಇಂಧನ ನಿಗಮದ (ಕೆಆರ್‌ಇಡಿಎಲ್) ಪ್ರಸಕ್ತ ಸಾಲಿನ ಲಾಭಾಂಶದಲ್ಲಿ ₹ 4.5 ಕೋಟಿ ಹಣವನ್ನು ಸಾಮಾಜಿಕ ಕಾರ್ಯಗಳಿಗೆ ವಿವಿಧ ಸಂಘ, ಸಂಸ್ಥೆಗಳಿಗೆ ನೀಡಲಾಗುತ್ತಿದೆ ಎಂದು ನಿಗಮದ ಅಧ್ಯಕ್ಷ, ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

ಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರು

ಕರ್ನಾಟಕ ನವೀಕರಿಸಬಹುದಾದ ಇಂಧನ ನಿಗಮದ (ಕೆಆರ್‌ಇಡಿಎಲ್) ಪ್ರಸಕ್ತ ಸಾಲಿನ ಲಾಭಾಂಶದಲ್ಲಿ ₹ 4.5 ಕೋಟಿ ಹಣವನ್ನು ಸಾಮಾಜಿಕ ಕಾರ್ಯಗಳಿಗೆ ವಿವಿಧ ಸಂಘ, ಸಂಸ್ಥೆಗಳಿಗೆ ನೀಡಲಾಗುತ್ತಿದೆ ಎಂದು ನಿಗಮದ ಅಧ್ಯಕ್ಷ, ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.ಕರ್ನಾಟಕ ನವೀಕರಿಸಬಹುದಾದ ಇಂಧನ ನಿಗಮದ ಲಾಭಾಂಶದ ಹಣದ ಚೆಕ್‌ನ್ನು ವಿವಿಧ ಸಂಘ ಸಂಸ್ಥೆಗಳಿಗೆ ಹಸ್ತಾಂತರಿಸಿ ಮಾತನಾಡಿದರು. ಕೆಆರ್‌ಇಡಿಎಲ್ ಕಳೆದ 2 ವರ್ಷಗಳಿಂದ ನಿರಂತವಾಗಿ ಸೋಲಾರ್ ವಿದ್ಯುತ್ ಉತ್ಪಾದನೆಯಲ್ಲಿ ದೇಶಕ್ಕೆ ಮೊದಲ ಸ್ಥಾನ ಪಡೆದಿದೆ. ಕಳೆದ ವರ್ಷ ನಿಗಮ ತನ್ನ ಲಾಭಾಂಶದಲ್ಲಿ ಶೇ.2ರಷ್ಟು ಅಂದರೆ 2 ಕೋಟಿ ಹಣವನ್ನು ಸಾಮಾಜಿಕ ಕಾರ್ಯಗಳಿಗೆ ವಿನಿಯೋಗಿಸಿತ್ತು. ಈ ವರ್ಷ ₹4.5 ಕೋಟಿ ಲಾಭಾಂಶವನ್ನು ವಿವಿಧ ಕ್ಷೇತ್ರಕ್ಕೆ ನೀಡಲಾಗಿದೆ.

ಪ್ರಮುಖವಾಗಿ ಶಾಲೆ, ಕಾಲೇಜು ಅಭಿವೃದ್ಧಿ, ವಿವಿಧ ಸಂಘ ಸಂಸ್ಥೆಗಳ ಕಾರ್ಯಗಳಿಗೆ, ಶೌಚಾಲಯ, ಆಟದ ಮೈದಾನ ನಿರ್ಮಾಣ, ಅರಣ್ಯ ಇಲಾಖೆಯ ಕಾಡಾನೆ ಹಾವಳಿ ನಿಯಂತ್ರಣಕ್ಕೆ ವಾಹನ ಖರೀದಿಗೆ, ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಿಗೆ, ಮೂಲಭೂತ ಸೌಕರ್ಯಗಳಿಗೆ ನೀಡಲಾಗಿದೆ.ಲಾಭಾಂಶದಲ್ಲಿ ಕಳೆದ ವರ್ಷ ₹72 ಕೋಟಿಯನ್ನು ಸರ್ಕಾರಕ್ಕೆ ನೀಡಲಾಗಿದೆ. ₹5 ಕೋಟಿಯನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೊಡಲಾಗಿದೆ. ಪ್ರಸಕ್ತ ವರ್ಷ ₹64 ಕೋಟಿ ಲಾಭಾಂಶವನ್ನು ಸರ್ಕಾರಕ್ಕೆ, ₹5 ಕೋಟಿಯನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಲಾಗಿದೆ. ನವೀಕರಿಸಬಹುದಾದ ಇಂಧನ ನಿಗಮವನ್ನು ಸರ್ಕಾರ ಷೇರು ಹಣ ಹಾಕಿ ಆರಂಭಿಸಿದ್ದು, ಸರ್ಕಾರದಿಂದ ಇದಕ್ಕೆ ಯಾವುದೇ ಅನುದಾನ ದೊರೆಯಲ್ಲ. ನಿಗಮವೇ ತನ್ನ ಕಾರ್ಯಚಟುವಟಿಕೆ ನಡೆಸಿ ಲಾಭಾಂಶ ಕಂಡುಕೊಂಡು ವಿವಿಧ ಸತ್ಕಾರ್ಯಕ್ಕೆ ವಿನಿಯೋಗಿಸಲಾಗುತ್ತಿದೆ.ಸಂಸ್ಥೆ ಆದಾಯವನ್ನು ಮುಂದಿನ ಎರಡು ವರ್ಷದಲ್ಲಿ ದ್ವಿಗುಣಗೊಳಿಸುವ ಯೋಜನೆ ನಮ್ಮ ಮುಂದಿದ್ದು, ಮುಂದಿನ ವರ್ಷಗಳಲ್ಲಿ ₹100 ಕೋಟಿಗೂ ಅಧಿಕ ಲಾಭಾಂಶ ಗಳಿಸಿ, ಅದರಲ್ಲಿ ₹25 ಕೋಟಿ ಲಾಭಾಂಶವನ್ನು ಸಾಮಾಜಿಕ ಚಟುವಟಿಕೆಗಳಿಗೆ ನೀಡುವ ಉದ್ದೇಶ ಹೊಂದಲಾಗಿದೆ.ಕ್ಷೇತ್ರದ ಶಾಸಕನಾದ ನಂತರ ಶಿಕ್ಷಣ, ಕ್ರೀಡೆ, ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಿ ಕೆಲಸ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಬರುವ ಟೀಕೆ ಟಿಪ್ಪಣಿಗಳಿಗೆ ತಲೆ ಕೆಡಿಸಿಕೊಂಡಿಲ್ಲ. ಪ್ರಾಮಾಣಿಕ ಕೆಲಸ ಮಾಡಿದಾಗಲೂ ಕೆಲವರು ತೊಂದರೆ ಕೊಟ್ಟಾಗ ಮನಸ್ಸಿಗೆ ನೋವಾಗಲಿದೆ ಎಂದರು.ನವೀಕರಿಸಬಹುದಾದ ಇಂಧನ ನಿಗಮದ ಅಧಿಕಾರಿಗಳು, ಕಾಂಗ್ರೆಸ್ ಮುಖಂಡರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.೦೮ಬಿಹೆಚ್‌ಆರ್ ೨:

ಬಾಳೆಹೊನ್ನೂರು ಸಮೀಪದ ಬೆಳಸೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ನಿಗಮದ ಲಾಭಾಂಶದ ಹಣವನ್ನು ನಿಗಮದ ಅಧ್ಯಕ್ಷ, ಶಾಸಕ ಟಿ.ಡಿ.ರಾಜೇಗೌಡ ವಿವಿಧ ಸಂಘ ಸಂಸ್ಥೆಗಳಿಗೆ ಚೆಕ್ ಮೂಲಕ ಹಸ್ತಾಂತರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೆಣ್ಣನ್ನು ಗೌರವಿಸುವವನೇ ನಿಜವಾದ ಮನುಜ
ಹೆಣ್ಣು ಅಬಲೆಯಲ್ಲಿ ಸಬಲೆ: ಮಾಜಿ ಸಚಿವ ಆಂಜನೇಯ