ಮಾಹಿತಿ ಪ್ರಸಾರಕ್ಕೆ ಕೃಷಿ ಮೇಳ ಸಹಕಾರಿ: ಡಿಸಿ ಡಾ.ವಿದ್ಯಾಕುಮಾರಿ

KannadaprabhaNewsNetwork | Published : Oct 27, 2024 2:17 AM

ಸಾರಾಂಶ

ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ಕೃಷಿ ಮೇಳ ನಡೆಯಿತು. ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಬ್ರಹ್ಮಾವರ

ಕೃಷಿ ಕ್ಷೇತ್ರಕ್ಕೆ ಪ್ರಾಧ್ಯಾನ್ಯತೆಯ ಜೊತೆಗೆ ಕೃಷಿ ವಲಯಕ್ಕೆ ಸಂಬಂಧಿಸಿದ ಮಾಹಿತಿಯನ್ನು ಸಮರ್ಪಕವಾಗಿ ರೈತರಿಗೆ ತಲುಪಿಸಿ, ಅವರ ಜೀವನಮಟ್ಟವನ್ನು ಉತ್ತಮಗೊಳಿಸುವ ದೃಷ್ಟಿಯಿಂದ ಕೃಷಿ ಮೇಳಗಳನ್ನು ಆಯೋಜಿಸಲಾಗುತ್ತದೆ. ಆದ್ದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಮಾಹಿತಿ ಪಡೆದು ತಮ್ಮ ಕೃಷಿ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದ್ದಾರೆ.

ಶನಿವಾರ ಇಲ್ಲಿನ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ಆಯೋಜಿಸಲಾದ ಕೃಷಿ ಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೃಷಿಯಿಂದ ರೈತರ ಜೀವನೋಪಾಯ ಸಾಧ್ಯವಾಗಿದ್ದರೂ, ರೈತರು ಅನೇಕ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಪ್ರಕೃತಿಗೆ ಹೊಂದಿಕೊಂಡು ರೈತರು ಕೃಷಿ ಮಾಡಬೇಕಾದ ಅನಿವಾರ್ಯತೆ ಇದೆ. ಹವಾಮಾನದ ವೈಪರಿತ್ಯ ಜೊತೆಗೆ, ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಇಲ್ಲದೇ ಸಂಕಷ್ಟಕ್ಕಿಡಗಿದ್ದಾರೆ. ಮಾರುಕಟ್ಟೆ ಎಲ್ಲವನ್ನೂ ನಿರ್ಧಾರ ಮಾಡುವ ಪರಿಸ್ಥಿತಿ ಎದುರಾಗಿದೆ. ಇಂತಹ ಸಂದರ್ಭದಲ್ಲಿ ರೈತರಿಗೆ ಪ್ರೋತ್ಸಾಹ ನೀಡುವ ಹಲವು ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಿದ್ದು, ಇದರ ಪ್ರಯೋಜವನ್ನು ಪ್ರತಿಯೊಬ್ಬ ರೈತರು ಪಡೆಯಬೇಕು ಎಂದರು.

ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃ.ತೋ.ವಿ.ವಿ.ಯ ಶಿಕ್ಷಣ ನಿರ್ದೇಶಕ ಡಾ. ಬಿ ಹೇಮ್ಲಾ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಶ್ವವಿದ್ಯಾಲಯ ಕುಲಪತಿ ಡಾ. ಆರ್.ಸಿ. ಜಗದೀಶ ಅಧ್ಯಕ್ಷತೆ ವಹಿಸಿದ್ದರು.ಮತ್ಯ್ಯೋದ್ಯಮಿ ಆನಂದ ಸಿ. ಕುಂದರ್ ಕೃಷಿ ವಸ್ತು ಪ್ರದರ್ಶನ ಉದ್ಘಾಟಿಸಿದರು.ಮಂಗಳೂರಿನ ಬ್ಯಾಂಕ್ ಆಫ್ ಬರೋಡಾ ವಲಯ ಮುಖ್ಯಸ್ಥ ರಾಜೇಶ್‌ ಖನ್ನಾ, ಉಡುಪಿ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಪ್ರಧಾನ ವ್ಯವಸ್ಥಾಪಕಿ ಪ್ರತಿಭಾ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ, ವಿಸ್ತರಣಾ ನಿರ್ದೇಶಕ ಡಾ.ಕೆ.ಟಿ. ಗುರುಮೂರ್ತಿ, ಬೆಂಗಳೂರು ಕೃಷಿ ತಂತ್ರಜ್ಞಾನ ಸಂಶೋಧನಾ ಸಂಸ್ಥೆಯ ಪ್ರಧಾನ ವಿಜ್ಞಾನಿ ಡಾ.ಡಿ.ವಿ. ಶ್ರೀನಿವಾಸ ರೆಡ್ಡಿ, ಉಡುಪಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಅಶೋಕ ಕುಮಾರ್ ಕೊಡ್ಗಿ, ಉಡುಪಿ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ಬಂಟಕಲ್ಲು ರಾಮಕೃಷ್ಣ ಶರ್ಮ, ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕಿ ಪೂರ್ಣಿಮಾ ಜಿ.ಸಿ., ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕಿ ಅಂಜನಾದೇವಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ಭುವನೇಶ್ವರಿ, ಪಶು ಸಂಗೋಪನೆ ಇಲಾಖೆಯ ಸಂದೀಪ್, ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಕುಮಾರ್ ಡಿ.ಎನ್., ಶಿವಮೊಗ್ಗ ಕೃಷಿ ಕಾಲೇಜಿನ ಡಾ. ತಿಪ್ಪೇಶ್, ಕೃಷಿ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ ನಾಯ್ಕ್, ದಕ್ಷಿಣ ಕನ್ನಡ ಕೆ.ವಿ.ಕೆ.ಯ ಹಿರಿಯ ವಿಜ್ಞಾನಿ ಡಾ.ಟಿ.ಜೆ. ರಮೇಶ್, ಬ್ರಹ್ಮಾವರ ಡಿಪ್ಲೋಮಾ ಕೃಷಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಲಕ್ಷ್ಮಣ್ ಮತ್ತಿತರರು ಇದ್ದರು.ಬ್ರಹ್ಮಾವರದ ವ.ಕೃ. ಮತ್ತು ತೋ. ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ.ಧನಂಜಯ ಬಿ. ಸ್ವಾಗತಿಸಿದರು. ನೀಲಾವರ ಸಂತೋಷ್ ಶೆಟ್ಟಿ ನಿರೂಪಿಸಿದರು. ಹಿರಿಯ ಕ್ಷೇತ್ರ ಅಧೀಕ್ಷಕ ಡಾ. ಶಂಕರ್ ಎಂ. ವಂದಿಸಿದರು.

Share this article