ಹೆಬ್ಬಾಳದ ಜಿಕೆವಿಕೆಯಲ್ಲಿ 16ರಿಂದ 3 ದಿನಗಳು ಕೃಷಿ ಮೇಳ ಆಯೋಜನೆ

KannadaprabhaNewsNetwork |  
Published : Nov 10, 2026, 02:30 AM IST
ಪೋಟೋ: 09ಎಸ್‌ಎಂಜಿಕೆಪಿ03ಶಿವಮೊಗ್ಗದ ಪತ್ರಿಕಾಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮಾತನಾಡಿದರು.  | Kannada Prabha

ಸಾರಾಂಶ

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ಹೆಬ್ಬಾಳದ ಜಿಕೆವಿಕೆಯಲ್ಲಿ ನ.16 ರಿಂದ 18 ರವರೆಗೂ 3 ದಿನಗಳ ಕಾಲ ‘ಕೃಷಿ ಮೇಳ’ವನ್ನು ಆಯೋಜಿಸಿದೆ.ನ.16 ರಂದು ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಕೃಷಿ ಮೇಳ ಉದ್ಘಾಟಿಸಲಿದ್ದಾರೆ. ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ವಿವಿ ಕುಲಪತಿ ಡಾ.ಪಿ.ವೆಂಕಟರಮಣ ಮತ್ತಿತರ ಗಣ್ಯರು ಉಪಸ್ಥಿತರಿರುವರು. ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸೂಕ್ತ ನಿರ್ವಹಣಾ ತಂತ್ರಜ್ಞಾನಗಳು, ಬೆಳೆಗಳು, ತಳಿಗಳು ಮತ್ತು ಪ್ರಾತ್ಯಕ್ಷಿಕೆಗಳನ್ನು ಆಯೋಜಿಸಲಾಗಿದೆ.

-ಒಂದು ದಿನ ಮೇಳಕ್ಕೆ ವ್ಯಾಪಕ ವಿರೋಧಕನ್ನಡಪ್ರಭ ವಾರ್ತೆ ಬೆಂಗಳೂರು

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ಹೆಬ್ಬಾಳದ ಜಿಕೆವಿಕೆಯಲ್ಲಿ ನ.16 ರಿಂದ 18 ರವರೆಗೂ 3 ದಿನಗಳ ಕಾಲ ‘ಕೃಷಿ ಮೇಳ’ವನ್ನು ಆಯೋಜಿಸಿದೆ.ನ.16 ರಂದು ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಕೃಷಿ ಮೇಳ ಉದ್ಘಾಟಿಸಲಿದ್ದಾರೆ. ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ವಿವಿ ಕುಲಪತಿ ಡಾ.ಪಿ.ವೆಂಕಟರಮಣ ಮತ್ತಿತರ ಗಣ್ಯರು ಉಪಸ್ಥಿತರಿರುವರು. ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸೂಕ್ತ ನಿರ್ವಹಣಾ ತಂತ್ರಜ್ಞಾನಗಳು, ಬೆಳೆಗಳು, ತಳಿಗಳು ಮತ್ತು ಪ್ರಾತ್ಯಕ್ಷಿಕೆಗಳನ್ನು ಆಯೋಜಿಸಲಾಗಿದೆ.

ಎಲ್‌ನಿನೋದಿಂದ ಉಂಟಾಗಿರುವ ಪರಿಣಾಮ, ಭವಿಷ್ಯದ ಸಿದ್ಧತೆಗಳು, ಹವಾಮಾನ ವೈಪರೀತ್ಯ, ಚತುರ ಕೃಷಿ, ಮಣ್ಣು ಮತ್ತು ನೀರು ಸಂರಕ್ಷಣೆ ಕುರಿತ ವಿಚಾರ ಸಂಕಿರಣಗಳನ್ನು ಹಮ್ಮಿಕೊಳ್ಳಲಾಗುವುದು. ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದ ಪ್ರಗತಿಪರ ರೈತ, ರೈತ ಮಹಿಳೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು. ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದಾಗಿ ನ.13 ರಂದು ಒಂದು ದಿನ ಮಾತ್ರ ಕೃಷಿ ಮೇಳವನ್ನು ಆಯೋಜಿಸಲು ಈ ಹಿಂದೆ ತೀರ್ಮಾನಿಸಲಾಗಿತ್ತು. ಆದರೆ, ಒಂದು ದಿನ ಮಾತ್ರ ಕೃಷಿ ಮೇಳ ಆಯೋಜಿಸುವುದಕ್ಕೆ ಸಾರ್ವಜನಿಕರು, ಕೃಷಿಕರಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಈಗ ಮೂರು ದಿನ ಕೃಷಿ ಮೇಳ ಆಯೋಜಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

12, 13ರಂದು ಪುಣ್ಯಾರಾಧನೆ, ಸ್ಮರಣೋತ್ಸವ, ಜನಜಾಗೃತಿ ಧರ್ಮ ಸಮ್ಮೇಳನ
ಟನಲ್ ಮಾಡಿದ್ರೂ ಆಗಲ್ಲ, ಎಲಿವೇಟೆಡ್‌ ಮಾಡಿದರೂ ಅಪಾದನೆ: ಡಿಕೆಶಿ ಆಕ್ರೋಶ