ಕನ್ನಡಪ್ರಭ ವಾರ್ತೆ ಕವಿತಾಳ
ಕಾರ್ಯಕ್ರಮವನ್ನು ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕೃಷಿ ತಾಂತ್ರಿಕತೆ ವಿಭಾಗದ ಡೀನ್ ಡಾ. ಕೆ.ವಿ.ಪ್ರಕಾಶ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ರಸಗೊಬ್ಬರ ಮತ್ತು ಕ್ರಿಮಿನಾಶಕಗಳ ಮಿತ ಬಳಕೆ ನೀರಿನ ಸದ್ವಳಕೆ ಹಾಗೂ ಆಧುನಿಕ ಯಂತ್ರಗಳನ್ನು ಬಳಸಿಕೊಂಡು ರೈತರು ಆರ್ಥಿಕ ಸದೃಢತೆಯತ್ತ ಸಾಗಬೇಕು ಎಂದರು.
ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಗ್ರಾಮಸ್ಥರು ಉತ್ತಮ ಸಹಕಾರ ನೀಡಿದ್ದು, 60 ದಿನಗಳ ಈ ಶಿಬಿರದಲ್ಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ರೈತರೊಂದಿಗೆ ಸಂವಾದ ನಡೆಸುವ ಮೂಲಕ ಪರಸ್ಪರ ಮಾಹಿತಿ ವಿನಿಮಯ ಮಾಡಿಕೊಂಡಿದ್ದಾರೆ. ಇದರ ಜೊತೆಗೆ ರೈತರ ಬದುಕು ಕೃಷಿ ವಾಸ್ತವತೆ ಕೃಷಿ ಮತ್ತು ಸಾಮಾಜಿಕ ಚಟುವಟಿಕೆಗಳು ಮತ್ತು ಸಿರಿಧಾನ್ಯಗಳ ಮಹತ್ವ ಕುರಿತು ರೈತರಲ್ಲಿ ಜಾಗೃತಿ ಮೂಡಿಸಲಾಗಿದೆ. ಬೆಳೆ ವಿಮೆ ಯೋಜನೆಗಳ ಕುರಿತು ಸೂಕ್ತ ಮಾಹಿತಿ ನೀಡಲಾಗಿದೆ, ನೈಸರ್ಗಿಕ ಕೃಷಿಯತ್ತ ರೈತರ ಒಲವು ಮೂಡಿಸುವಲ್ಲಿ ವಿದ್ಯಾರ್ಥಿಗಳು ಶ್ರಮಿಸಿದ್ದಾರೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಗಣ್ಯರನ್ನು ಗ್ರಾಮದಲ್ಲಿ ಕುಂಭ ಕಳಸ ಮೆರವಣಿಗೆ ಮೂಲಕ ಎತ್ತಿನ ಬಂಡಿಯಲ್ಲಿ ಕರೆತರಲಾಯಿತು. ಇದೇ ವೇಳೆ ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ರೈತರಿಗೆ ಮಾಹಿತಿ ನೀಡಿದರು.