ಕೆ.ಆರ್.ಪೇಟೆ:
ಪಟ್ಟಣದ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಕಟ್ಟಡದ ಕೃಷ್ಣ ಪ್ರತಿಷ್ಠಾನದ ಕಚೇರಿಯಲ್ಲಿ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ, ಕೆಂಗೇರಿ ವಿಶ್ವ ಒಕ್ಕಲಿಗರ ಮಠದ ಡಾ.ನಿಶ್ಚಲಾನಂದನಾಥ ಸ್ವಾಮೀಜಿ ಸಾನಿಧ್ಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಎಚ್.ಟಿ.ಮಂಜು ಕೃಷ್ಣ ಪುರಸ್ಕಾರ ಪ್ರದಾನ ಮಾಡುವರು. ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಸಾಧಕರನ್ನು ಸನ್ಮಾನಿಸುವರು. ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಪ್ರತಿಭಾ ಪುರಸ್ಕಾರ ನೀಡಿ ವಿದ್ಯಾರ್ಥಿಗಳನ್ನು ಅಭಿನಂದಿಸುವರು ಎಂದರು.
ಸಮಾಜದ ವಿವಿಧ ಸ್ಥರಗಳಲ್ಲಿ ಸಾಧನೆಗೈದ ಪುಸ್ತಕ ಮನೆ ಅಂಕೇಗೌಡರು, ಶೂದ್ರಶಕ್ತಿ ಪತ್ರಿಕೆಯ ಸಂಪಾದಕ ಬಿ.ಆರ್. ರಾಮೇಗೌಡ ಮತ್ತು ತಾಲೂಕಿನಲ್ಲಿಯೇ ಅತಿ ಹೆಚ್ಚು ಹಾಲು ಸರಬರಾಜು ಮಾಡುತ್ತಿರುವ ರೈತ ಮಹಿಳೆ ಹೆಮ್ಮನಹಳ್ಳಿ ಪವಿತ್ರಾರಿಗೆ ಕೃಷ್ಣ ಪುರಸ್ಕಾರ, ಭಾರತೀಯ ಆಡಳಿತ ಸೇವಾ ಪರೀಕ್ಷೆಯಲ್ಲಿ ಕಳೆದ ವರ್ಷ ಉತ್ತೀರ್ಣರಾಗಿ ತಾಲೂಕಿಗೆ ಕೀರ್ತಿ ತಂದಿರುವ ಅಂಬಿಗರಹಳ್ಳಿಯ ಡಾ.ಮುತ್ತೇಶ್ ಗೌಡ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಗುವುದು ಎಂದರು.ವಿವಿಧ ಕ್ಷೇತ್ರಗಳ ಸಾಧಕರಾದ ತಾಲೂಕಿನ ಮನ್ಮುಲ್ ನಿರ್ದೇಶಕ ಡಾಲು ರವಿ, ಎಂ.ಬಿ.ಹರೀಶ್, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಸೀಳನೆರೆ ಅಂಬರೀಶ್, ರಾಜ್ಯ ಮಾರಾಟ ಮಹಾಮಂಡಲಿಯ ನಿರ್ದೇಶಕ ಶೀಳನೆರೆ ಎಸ್.ಎಲ್.ಮೋಹನ್, ಕೈಗಾರಿಕಾ ಮಾರಾಟ ಮಹಾಮಂಡಳಿ ಅಧ್ಯಕ್ಷ ಬಸ್ ಸಂತೋಷ್ ಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಜಿಲ್ಲಾ ಉಪಾಧ್ಯಕ್ಷ ಐಚನಹಳ್ಳಿ ಶಿವಣ್ಣ, ಕೋಟೆ ಭೈರವೇಶ್ವರ ಸಹಕಾರ ಸಮಘದ ಅಧ್ಯಕ್ಷೆ ಮಂಜುಲಾ ಚೆನ್ನಕೇಶವ ಅವರನ್ನು ಗೌರವಿಸಲಾಗುವುದು ಎಂದರು.
ಪ್ರತಿಷ್ಠಾನದ ಆಡಳಿತ ಮಂಡಳಿ ಸದಸ್ಯರಾದ ಬೂಕನಕೆರೆ ಜವರಾಯಿಗೌಡ, ಸಂತೇಬಾಚಹಳ್ಳಿ ನಾಗರಾಜು, ಐಚನಹಳ್ಳಿ ಶಿವಣ್ಣ, ಹಾದನೂರು ಪರಮೇಶ್, ಆರ್.ಎಸ್.ಶಿವರಾಮೇಗೌಡ, ಮಾಕವಳ್ಳಿ ವಸಂತಕುಮಾರ್, ಶಂಭುಲಿಂಗಶೆಟ್ಟಿ ಉಪಸ್ಥಿತರಿದ್ದರು.