ಕೃಷ್ಣಾ ಪ್ರವಾಹ: ಸಾರ್ವಜನಿಕರು, ಮೀನುಗಾರರು ನದಿಗಿಳಿಯದಂತೆ ಸೂಚನೆ

KannadaprabhaNewsNetwork |  
Published : Jul 30, 2024, 12:43 AM IST
ವಡಗೇರಾ ತಾಲೂಕಿನ ಸಂಗಮ ಹಾಗೂ ಕೃಷ್ಣಾ ನದಿಯ ಗೂಗಲ್ ಬ್ರಿಡ್ಜ್ ಕಂ ಬ್ಯಾರೇಜ್ ಗೆ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅವರು ಭೇಟಿ ಪರಿಶೀಲಿಸಿದರು. | Kannada Prabha

ಸಾರಾಂಶ

ತಾಲೂಕಿನ ಸಂಗಮ ಹಾಗೂ ಕೃಷ್ಣಾ ನದಿಯ ಗೂಗಲ್ ಬ್ರಿಡ್ಜ್ ಕಂ ಬ್ಯಾರೇಜ್ ಗೆ ಹಾಗೂ ನದಿ ತೀರದ ಗ್ರಾಮಗಳಿಗೆ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅವರು ಭೇಟಿ ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ವಡಗೇರಾ

ತಾಲೂಕಿನ ಸಂಗಮ ಹಾಗೂ ಕೃಷ್ಣಾ ನದಿಯ ಗೂಗಲ್ ಬ್ರಿಡ್ಜ್ ಕಂ ಬ್ಯಾರೇಜ್ ಗೆ ಹಾಗೂ ನದಿ ತೀರದ ಗ್ರಾಮಗಳಿಗೆ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅವರು ಭೇಟಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ 3 ಲಕ್ಷ ಕ್ಯುಸೆಕ್ ಕ್ಕಿಂತ ಅಧಿಕ ನೀರು ಬಿಡಲಾಗುತ್ತಿದೆ. ಅಲ್ಲದೇ ಈಗಾಗಲೇ ಎಲ್ಲಾ ಕಡೆ ಹೆಚ್ಚು ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಯ ಹೊರಹರಿವು ಹೆಚ್ಚಾಗಿದೆ. ಪ್ರವಾಹ ಸಂಭವಿಸುವ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಮ್ಮ ಕಂದಾಯ ಇಲಾಖೆಯ ಸಿಬ್ಬಂದಿ ನದಿ ಪಾತ್ರದ ಗ್ರಾಮಗಳಿಗೆ ಭೇಟಿ ನೀಡಿ ಡಂಗೂರ ಸಾರಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಒಂದು ವೇಳೆ ಪ್ರವಾಹದ ಮುನ್ಸೂಚನೆ ಕಂಡುಬಂದಲ್ಲಿ ಅವಶ್ಯಕತೆ ಇರುವ ಕಡೆ ಕಾಳಜಿ ಕೇಂದ್ರಗಳ ವ್ಯವಸ್ಥೆ ಮಾಡಲಾಗುವುದು ಎಂದರು ತಿಳಿಸಿದರು.

ನದಿ ಪಾತ್ರದ ಜನರು ನದಿಯ ಕಡೆ ಹಾಗೂ ಬ್ರಿಡ್ಜ್ ಮೇಲೆ ತೆರಳುವಾಗ ಎಚ್ಚರಿಕೆ ವಹಿಸಬೇಕು. ನದಿಗೆ ಇನ್ನು ಹೆಚ್ಚಿನ ನೀರು ಬಿಡುವ ಸಂಭವವಿದ್ದು, ಜನ-ಜಾನುವಾರು ಹಾಗೂ ಮೀನುಗಾರರು ನದಿಗೆ ಇಳಿಯದಂತೆ ಸೂಚಿಸಿದರು.

ಸಹಾಯಕ ಆಯುಕ್ತರಾದ ಹಂಪಣ್ಣ ಸಜ್ಜನ್, ತಹಸೀಲ್ದಾರ್ ಶ್ರೀನಿವಾಸ್ ಚಾಪೆಲ್, ಉಪ ತಹಸೀಲ್ದಾರ್ ಸಂಗಮೇಶ್ ದೇಸಾಯಿ, ಕಂದಾಯ ನಿರೀಕ್ಷಕ ಸಂಜೀವ್ ಕುಮಾರ್ ಕಾವಲಿ, ಗ್ರಾಮ ಆಡಳಿತ ಅಧಿಕಾರಿಗಳಾದ ನಟರಾಜ, ಬಸವರಾಜ ಮೂಡಗಿ, ಕೊಟ್ರೇಶ್ ಸೇರಿದಂತೆ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು