ಮದ್ಯ ಸೇವನೆ ತ್ಯಜಿಸುವ ಸಂಕಲ್ಪ ಮಾಡಲು ಕೃಷ್ಣೇಗೌಡ ಕರೆ

KannadaprabhaNewsNetwork |  
Published : Jun 06, 2025, 01:49 AM IST
ಚಿಕ್ಕಮಗಳೂರು ತಾಲೂಕಿನ ಜೋಳದಾಳು ಗ್ರಾಮದಲ್ಲಿ ನಡೆದ ಮದ್ಯವರ್ಜನ ಶಿಬಿರವನ್ನು ಡಾ. ಜೆ.ಪಿ. ಕೃಷ್ಣೇಗೌಡ ಅವರು ಉದ್ಘಾಟಿಸಿದರು. | Kannada Prabha

ಸಾರಾಂಶ

ಚಿಕ್ಕಮಗಳೂರು, ಮನುಷ್ಯನ ಜೀವ ಮತ್ತು ಜೀವನಕ್ಕೆ ಮಾರಕವಾಗಿರುವ ಮದ್ಯ ಮತ್ತು ಮಾದಕ ದ್ರವ್ಯ ಸೇವನೆ ತ್ಯಜಿಸುವ ಸಂಕಲ್ಪವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಹೆಸರಿನಲ್ಲಿ ಮಾಡುವಂತೆ ಮಕ್ಕಳ ತಜ್ಞ ಡಾ. ಜೆ.ಪಿ. ಕೃಷ್ಣೇಗೌಡ ಹೇಳಿದರು.

- ಜೋಳದಾಳು ಗ್ರಾಮದಲ್ಲಿ ಮದ್ಯವರ್ಜನ ಶಿಬಿರ ಉದ್ಘಾಟನೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಮನುಷ್ಯನ ಜೀವ ಮತ್ತು ಜೀವನಕ್ಕೆ ಮಾರಕವಾಗಿರುವ ಮದ್ಯ ಮತ್ತು ಮಾದಕ ದ್ರವ್ಯ ಸೇವನೆ ತ್ಯಜಿಸುವ ಸಂಕಲ್ಪವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಹೆಸರಿನಲ್ಲಿ ಮಾಡುವಂತೆ ಮಕ್ಕಳ ತಜ್ಞ ಡಾ. ಜೆ.ಪಿ. ಕೃಷ್ಣೇಗೌಡ ಹೇಳಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜೋಳದಾಳು ಗ್ರಾಮದಲ್ಲಿ ನಡೆದ ಮದ್ಯವರ್ಜನ ಶಿಬಿರ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಭಾಗದ ಮಹಿಳೆಯರಲ್ಲಿ ಸ್ವಾವಲಂಬನೆ ಮೂಲಕ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಇಡೀ ರಾಜ್ಯದಲ್ಲೇ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಮೂಲಕ ಕೆಲಸ ಮಾಡಲಾಗುತ್ತಿದೆ. ಇದರ ಜೊತೆಗೆ ಬಡ ಕುಟುಂಬಗಳ ಬದುಕಿಗೆ ಮಾರಕವಾಗಿರುವ ಕುಡಿತ ಮತ್ತು ಮಾದಕ ವಸ್ತುಗಳ ಸೇವನೆ ಚಟಕ್ಕೆ ಬಲಿಯಾಗಿರುವವರನ್ನು ಈ ಚಟದಿಂದ ದೂರ ಮಾಡಲು ಮದ್ಯವರ್ಜನ ಶಿಬಿರವನ್ನು ನನ್ನ ಸ್ವಗ್ರಾಮ ಜೋಳದಾಳು ಗ್ರಾಮದಲ್ಲಿ ಹಮ್ಮಿಕೊಂಡಿದೆ ಎಂದರು.

ಮದ್ಯಪಾನ ಸೇವನೆಯಿಂದ ಸಾವಿರಾರು ಕುಟುಂಬಗಳು ಬೀದಿ ಪಾಲಾಗುತ್ತಿವೆ. ಕತ್ತಲೆ ತುಂಬಿದ ಕುಟುಂಬಗಳಲ್ಲಿ ಬೆಳಕು ಚೆಲ್ಲುವ ಹಿತದೃಷ್ಟಿಯಿಂದ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ 8 ದಿನಗಳ ಮದ್ಯವರ್ಜನ ಶಿಬಿರವನ್ನು ಹಮ್ಮಿಕೊಂಡಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕುಡಿತದ ಚಟಕ್ಕೆ ಬಲಿಯಾಗಿರುವವರು ಈ ಶಿಬಿರದ ಪ್ರಯೋಜನ ಪಡೆದು ಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬದುಕಬೇಕೆಂದು ಮನವಿ ಮಾಡಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸದಾನಂದ ಬಂಗೇರ ಮಾತನಾಡಿ, ಚಿಕ್ಕ ಮಗಳೂರು ರಾಜ್ಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಸ್ಥಿತ್ವಕ್ಕೆ ಬಂದ ನಂತರ ಈವರೆಗೆ 1931 ಮದ್ಯ ವರ್ಜನ ಶಿಬಿರಗಳನ್ನು ನಡೆಸಲಾಗಿದೆ. ಈ ಶಿಬಿರದ ಪ್ರಯೋಜನ ಪಡೆದು ಕುಡಿತದ ಚಟದಿಂದ ಹೊರಬಂದ ಸಾವಿರಾರು ಜನರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಡೆಸುತ್ತಿರುವ ಇಂತಹ ಶಿಬಿರಗಳಲ್ಲಿ ಸ್ವಯಂ ಪ್ರೇರಿತರಾಗಿ ಕೆಲಸ ಮಾಡುತ್ತಿ ದ್ದಾರೆ. ಕುಡಿತದ ಚಟದಿಂದ ನರಕದ ಜೀವನ ನಡೆಸುತ್ತಿದ್ದ ಕುಟುಂಬಗಳಲ್ಲಿ ಬೆಳಕು ನೀಡುವ ಕೆಲಸವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಮಾಡಲಾಗುತ್ತಿದೆ ಎಂದು ಹೇಳಿದರು. ಶಿಬಿರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಾಗೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಬಿರದ ಯೋಜನಾಧಿಕಾರಿ ನಾಗರಾಜ್ ಕುಲಾಲ್, ಮಲ್ಲಂದೂರು ಪೊಲೀಸ್ ಠಾಣಾಧಿಕಾರಿ ಗುರುಸಜ್ಜನ್, ಮಲ್ಲಂದೂರು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಚೇತನ, ಅಖಿಲ ಕರ್ನಾಟಕ ಜನಜಾಗೃತಿ ಸಮಿತಿ ಅಧ್ಯಕ್ಷ ಎ.ಸಿ. ಚಂದ್ರಪ್ಪ, ಮಾಡೆಲ್ ಶಾಲೆ ಪ್ರಾಂಶುಪಾಲ ಎಂ.ಎನ್. ಷಡಕ್ಷರಿ, ಜೋಳದಾಳು ಗ್ರಾಮದ ಬೀನಾ ಅನುರಾಜೇಗೌಡ ಮಾತನಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ರೂಪ ಜಿ. ಜೈನ್ ಸ್ವಾಗತಿಸಿದರು. ಯೋಜನೆಯ ತಾಲ್ಲೂಕು ಕೃಷಿ ಅಧಿಕಾರಿ ಬಿ. ಉಮೇಶ್ ಕಾರ್ಯಕ್ರಮ ನಿರೂಪಿಸಿದರು. ಶಿಬಿರದ ಗೌರವಾಧ್ಯಕ್ಷ ಮಲ್ಲಂದೂರು ಧರ್ಮರಾಜ್ ವಂದಿಸಿದರು. 5 ಕೆಸಿಕೆಎಂ 1ಚಿಕ್ಕಮಗಳೂರು ತಾಲೂಕಿನ ಜೋಳದಾಳು ಗ್ರಾಮದಲ್ಲಿ ನಡೆದ ಮದ್ಯವರ್ಜನ ಶಿಬಿರವನ್ನು ಡಾ. ಜೆ.ಪಿ. ಕೃಷ್ಣೇಗೌಡ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ
‘ಜಿ ರಾಮ್‌ ಜಿ’ ವಿರುದ್ಧ ಸಮರಕ್ಕೆ ನಾಳೆ ಕೈ ವಿಶೇಷ ಸಂಪುಟ ಸಭೆ