ಹಾವೇರಿ: ಲೋಕಾಯುಕ್ತ ಅಧಿಕಾರಿ, ಸಿಬ್ಬಂದಿಗಳಿಂದಲೇ ಭ್ರಷ್ಟಾಚಾರ ನಡೆದಿರುವ ಆರೋಪ ಕೇಳಿಬಂದಿದ್ದು, ಆರೋಪಿತರ ವಿರುದ್ಧ ನ್ಯಾಯಯುತ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸುವಂತೆ ಕರ್ನಾಟಕ ರಾಷ್ಟ್ರ ಸಮಿತಿ(ಕೆಆರ್‌ಎಸ್) ಪಕ್ಷ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.ಈ ಕುರಿತು ನಗರದ ಜಿಲ್ಲಾ ಲೋಕಾಯುಕ್ತ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು, ಲೋಕಾಯುಕ್ತ ನ್ಯಾ. ಬಿ.ಎಸ್. ಪಾಟೀಲರಿಗೆ ಮನವಿ ಪತ್ರ ರವಾನಿಸಿದರು.ಲೋಕಾಯುಕ್ತಕ್ಕೆ ಭ್ರಷ್ಟರ ಕುರಿತು ದೂರು ಕೊಟ್ಟರೆ ಅವರಿಗೆ ಗಿರಾಕಿಗಳನ್ನು ಹಿಡಿದುಕೊಟ್ಟಂತೆ ಎಂಬ ಆರೋಪವಿದೆ. ಬೆಂಗಳೂರು ನಗರದ ಲೋಕಾಯುಕ್ತ ಎಸ್‌ಪಿ ಆಗಿದ್ದ ಶ್ರೀನಾಥ ಜೋಶಿ ಅವರ ಏಜೆಂಟರಾಗಿ ಪೊಲೀಸ್ ಕಾನ್‌ಸ್ಟೆಬಲ್ ನಿಂಗಪ್ಪ ಕೆಲಸ ಮಾಡುತ್ತಿದ್ದರು. ಅಧಿಕಾರಿಗಳಿಂದ ಬೆದರಿಸಿ, ಹಣ ಸುಲಿಗೆ ಮಾಡುತ್ತಿದ್ದರು ಎಂಬ ಆರೋಪಗಳು ಕೇಳಿಬಂದಿವೆ. ಬೆಂಗಳೂರಿನಲ್ಲಿ ಮಾತ್ರ ಈ ಘಟನೆ ಆಗಿದ್ದಲ್ಲ.
ಹಾವೇರಿ: ಧಾರ್ಮಿಕ ದತ್ತಿ ಇಲಾಖೆಯ ಆಡಳಿತಕ್ಕೆ ಒಳಪಟ್ಟ ಸಿ ಪ್ರವರ್ಗದ ರಾಣಿಬೆನ್ನೂರು ತಾಲೂಕು ಗುಡಿಹೊನ್ನತ್ತಿ ಗ್ರಾಮದ ಹೊನ್ನಮ್ಮದೇವಿ ದೇವಸ್ಥಾನಕ್ಕೆ ಒಂಬತ್ತು ಸದಸ್ಯರಿರುವ ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ ಆಹ್ವಾನಿಸಲಾಗಿದೆ.
ದೇವಸ್ಥಾನದ ಸಂಬಂಧದಲ್ಲಿ ಪ್ರಧಾನ ಅರ್ಚಕ ಅಥವಾ ಅರ್ಚಕ ಒಂದು, ಅನುಸೂಚಿತ ಜಾತಿ, ಅನುಸೂಚಿತ ಬುಡಕಟ್ಟುಗಳಿಗೆ ಸೇರಿದ ಕನಿಷ್ಠ ಒಬ್ಬ ಸದಸ್ಯ, ಇಬ್ಬರು ಮಹಿಳೆಯರು, ದೇವಸ್ಥಾನ, ಸಂಸ್ಥೆ ಇರುವ ಪ್ರದೇಶದ ಸ್ಥಳೀಕರಲ್ಲಿ ಕನಿಷ್ಠ ಒಬ್ಬರು ಹಾಗೂ ಇತರೆ ನಾಲ್ಕು ಜನರನ್ನೊಳಗೊಂಡ ಸಮಿತಿ ರಚನೆ ಮಾಡಲಾಗುವುದು.ಆಸಕ್ತರು ಪೊಲೀಸ್ ಸತ್ಯಾಪನಾ ವರದಿ, ಪೂರ್ಣ ವಿಳಾಸ, ದೂರವಾಣಿ ಸಂಖ್ಯೆ ಸೇರಿದಂತೆ ಅಗತ್ಯ ಮಾಹಿತಿಯನ್ನು ಸ್ಪಷ್ಟವಾಗಿ ನಮೂದಿಸಿದ ಅರ್ಜಿಯನ್ನು ಈ ಪ್ರಕಟಣೆಯ 30 ದಿನದೊಳಗಾಗಿ ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ನಂತರ ಸಲ್ಲಿಸಲಾದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್ ಅಧ್ಯಕ್ಷ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.