ಕನ್ನಡಪ್ರಭ ವಾರ್ತೆ ಮಂಡ್ಯ
ಜಲಾಶಯದ ಗರಿಷ್ಠ ಮಟ್ಟ ೧೨೪.೮೦ ಅಡಿ ಇದ್ದು, ಮಂಗಳವಾರ ನೀರಿನ ಮಟ್ಟ ೯೨ ಅಡಿಗೆ ಏರಿಕೆಯಾಗಿದೆ. ಅಣೆಕಟ್ಟೆಗೆ ೧೯೧೨೯ ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ೩೬೪ ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಹಾಲಿ ಜಲಾಶಯದಲ್ಲಿ ೮.೭೮೪ ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ.
ಕಳೆದೆರಡು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಒಂದೇ ದಿನ ೧೦೦ ಮಿ.ಮೀ.ನಷ್ಟು ಮಳೆಯಾಗಿರುವುದರಿಂದ ಕಾವೇರಿ ನದಿ ಮೈದುಂಬಿಕೊಂಡಿದೆ. ನದಿಯಲ್ಲಿ ಹರಿವಿನ ಪ್ರಮಾಣ ಹೆಚ್ಚಾಗಿರುವುದರಿಂದ ಕೆಆರ್‌ಎಸ್ ಜಲಾಶಯದ ಕಡೆಗೆ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿರುವುದರಿಂದ ಅಣೆಕಟ್ಟು ಜೀವಕಳೆಯನ್ನು ಪಡೆದುಕೊಳ್ಳುತ್ತಿದೆ.ಸೋಮವಾರ ಬೆಳಗ್ಗೆ ಜಲಾಶಯದ ನೀರಿನ ಮಟ್ಟ ೮೯.೩೫ ಅಡಿಗೆ ಕುಸಿದಿತ್ತು. ೨೦೫೩ ಕ್ಯುಸೆಕ್ ಒಳಹರಿವು ದಾಖಲಾಗಿದ್ದು, ಅಣೆಕಟ್ಟೆಯಲ್ಲಿ ೭.೧೭೬ ಟಿಎಂಸಿ ಅಡಿಯಷ್ಟು ನೀರು ಸಂಗ್ರಹವಾಗಿತ್ತು. ಒಂದು ದಿನದಲ್ಲಿ ೧೯ ಸಾವಿರ ಕ್ಯುಸೆಕ್ ನೀರು ಹರಿದು ಬಂದಿದ್ದರಿಂದ ಮಂಗಳವಾರ ಬೆಳಗಿನ ವೇಳೆಗೆ ಅಣೆಕಟ್ಟೆಯ ನೀರಿನ ಮಟ್ಟ ೯೨ ಅಡಿಗೆ ಏರಿಕೆಯಾಗಿತ್ತು.
ಮೇ ತಿಂಗಳಲ್ಲಿ ಹೆಚ್ಚಿನ ಒಳಹರಿವು ಬಂದ ವರ್ಷಗಳು
7.5.202519129
31.5.200623312
ಕನ್ನಡಪ್ರಭವಾರ್ತೆ ನಾಗಮಂಗಲ
ರೈತರು ಬಿತ್ತನೆ ಬೀಜಗಳನ್ನು ಅಧಿಕೃತ ಮಾರಾಟಗಾರರಿಂದಲೇ ಖರೀದಿಸಿ ಲಾಬ್ ನಂಬರ್ ನಮೂದಿಸಿರುವ ರಶೀದಿ ಪಡೆದುಕೊಳ್ಳಬೇಕು. ಬಿತ್ತನೆ ಬೀಜ ಉತ್ಪಾದಕರು ಮತ್ತು ಮಾರಾಟಗಾರರ ವಿಳಾಸವನ್ನು ಗಮನಿಸಬೇಕು. ಬಿತ್ತನೆ ಬೀಜವು ಸಂಬಂಧಪಟ್ಟ ಪ್ರಾಧಿಕಾರದಿಂದ ಪರೀಕ್ಷಿಸಲ್ಪಟ್ಟು ಗುಣಮಟ್ಟದ ಬಗ್ಗೆ ದೃಢೀಕರಿಸಲಾಗಿದೆಯೇ ಮತ್ತು ದೃಢೀಕರಿಸಿದ ಟ್ಯಾಗ್‌ಗಳನ್ನು ಲಗತ್ತಿಸಲಾಗಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು. ಟ್ಯಾಗ್‌ಗಳನ್ನು ಬೆಳೆ ಕಟಾವು ಆಗುವವರೆಗೆ ಸುರಕ್ಷಿತವಾಗಿ ಕಾಯ್ದಿಟ್ಟುಕೊಳ್ಳಬೇಕು. ನಮೂದಿಸಿರುವ ಉತ್ಪಾದನಾ ದಿನಾಂಕ ಮತ್ತು ವ್ಯಾಲಿಡಿಸಿ ಅವಧಿಯನ್ನು ರೈತರು ಗಮನಿಸಬೇಕು ಎಂದು ತಿಳಿಸಿದ್ದಾರೆ.
ಪೀಡೆ ನಾಶಕಗಳನ್ನೂ ಕೂಡ ಅಧಿಕೃತ ಮಾರಾಟಗಾರರಿಂದಲೇ ಖರೀದಿಸಿ ರಸೀದಿ ಪಡೆದುಕೊಳ್ಳಬೇಕು. ಪೀಡೆನಾಶಕದ ಬಾಟಲಿ ಅಥವಾ ಪೊಟ್ಟಣ ತೆರೆಯಲಾಗಿದೆಯೇ ಎಂಬುದನ್ನು ಪರೀಕ್ಷಿಸಬೇಕು. ಪೀಡೆನಾಶಕದ ಉತ್ಪಾದಕರು ಮತ್ತು ಮಾರಾಟಗಾರರ ವಿಳಾಸವನ್ನು ಗಮನಿಸಬೇಕು. ಉತ್ಪಾದನಾ ದಿನಾಂಕ ಮತ್ತು ಅವಧಿ ಮೀರುವ ದಿನಾಂಕ ನಮೂದಿಸಲಾಗಿದೆಯೇ ಎಂಬುದನ್ನು ರೈತರು ಗಮನಿಸಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.