ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲೆಯಲ್ಲಿ ನಡೆಯಲಿರುವ ೮೭ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಪೂರ್ವಭಾವಿಯಾಗಿ ಹಾಗೂ ಸಮ್ಮೇಳನಕ್ಕೆ ಸ್ವಾಗತ ಕೋರುವ ಸಲುವಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಹಿರಿಯ ಸಾಹಿತಿ ತೈಲೂರು ವೆಂಕಟಕೃಷ್ಣ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಟ್ರಸ್ಟ್ ಅಧ್ಯಕ್ಷ ಡಾ.ಕಿಕ್ಕೇರಿ ಕೃಷ್ಣಮೂರ್ತಿ ವಹಿಸುವರು. ಟ್ರಸ್ಟ್‌ನ ಸದಸ್ಯ ಕಾರ್ಯದರ್ಶಿಯಾಗಿ ಡಾ.ಬಿ.ವಿ.ನಂದೀಶ್ ಪ್ರಾಸ್ತವಿಕವಾಗಿ ಮಾತನಾಡುವರು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕಾರ್ಯಕ್ರಮದಲ್ಲಿ ಗಾಯಕರಾದ ಶ್ರೀನಿವಾಸ ಉಡುಪ, ಪೂರ್ಣಿಮಾ, ಡಾ.ಕಿಕ್ಕೇರಿ ಕೃಷ್ಣಮೂರ್ತಿ, ಡೇವಿಡ್ ಪ್ರತಿಭಾಂಜಲಿ, ವಿದ್ಯಾಶಂಕರ್, ಎಂ.ಎನ್.ಶ್ರೀಧರ್, ಇಂದಿರಾ ರಾಮಯ್ಯ, ಟಿ.ಎನ್.ಶ್ರೀಧರ್, ಪಿ.ಎಂ.ಶಿವಶಂಕರ್ ಮುಂತಾದ ಕಲಾವಿದರು ಕೆ.ಎಸ್.ನರಸಿಂಹಸ್ವಾಮಿ ಅವರ ಗೀತಗಾಯನ ಹಾಗೂ ನೃತ್ಯ ಕಾರ್ಯಕ್ರಮ ನಡೆಸಲಿದ್ದಾರೆ ಎಂದು ನುಡಿದರು.ಸಮ್ಮೇಳನದ ಪ್ರಾರಂಭಕ್ಕೆ ೮೭ ಕಲಾವಿದರು ನಾಡಗೀತೆಯನ್ನು ಹಾಡಲಿದ್ದು, ಅದರ ಪೂರ್ವಭಾವಿ ಸಿದ್ದತಾ ಗಾಯನವನ್ನು ಕಾರ್ಯಕ್ರಮದಲ್ಲಿ ಮಾಡಲಾಗುವುದು. ಸಂಪೂರ್ಣ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದರು.
ಡಿ.14 ರಂದು ಹಿರಿಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ
ಗುರುವಂದನಾ ಕಾರ್ಯಕ್ರಮ ನಿಮಿತ್ತ ತಾಲೂಕಿನ ಮೇಲುಕೋಟೆ ಜನಪದ ಸೇವಾ ಟ್ರಸ್ಟ್ ಹಾಗೂ ಶ್ರೀಲಕ್ಷ್ಮಿ ಹಯಗ್ರೀವ ಪದವಿ ಪೂರ್ವ ಕಾಲೇಜಿನ ಹಳೆಯ ವಿದ್ಯಾರ್ಥಿಗಳು ಡಿ.14ರಂದು ಮಧ್ಯಾಹ್ನ ಕಾಲೇಜಿನ ಆವರಣದಲ್ಲಿ ಪೂರ್ವಭಾವಿ ಸಭೆ ಆಯೋಜಿಸಿದ್ದಾರೆ. ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಐತಿಹಾಸಿಕ ಹಿನ್ನೆಲೆ ಹೊಂದಿರುವ ಮೇಲುಕೋಟೆಯಲ್ಲಿ ಸ್ಥಾಪಿತವಾದ ಜನಪದ ಸೇವಾ ಟ್ರಸ್ಟ್ ಪದವಿ ಪೂರ್ವ ಕಾಲೇಜು ಮುಂದೆ ಶ್ರೀಲಕ್ಷ್ಮಿ ಹಯಗ್ರೀವ ಪದವಿ ಪೂರ್ವ ಕಾಲೇಜು ಆಗಿ ಹೊಸ ಹೆಸರಿನೊಂದಿಗೆ ಮೇಲುಕೋಟೆ ಸುತ್ತಮುತ್ತಲಿನ ಗ್ರಾಮಗಳ ಗ್ರಾಮೀಣ ಮಕ್ಕಳ ವಿದ್ಯಾಭ್ಯಾಸಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಾ ಸಾವಿರಾರು ವಿದ್ಯಾರ್ಥಿಗಳು ಇಂದು ತಮ್ಮ ಜೀವನ ರೂಪಿಸಿಕೊಳ್ಳಲು ಕಾರಣವಾಗಿದೆ.
ಈ ಹಿನ್ನೆಲೆಯಲ್ಲಿ ಎಲ್ಲಾ ಬ್ಯಾಚಿನ ಹಳೆಯ ವಿದ್ಯಾರ್ಥಿಗಳು ಸೇರಿ ಒಂದೇ ವೇದಿಕೆಯಲ್ಲಿ ಜನವರಿ 2025ರ ಮಾಹೆಯಲ್ಲಿ ಗುರುವಂದನಾ ಕಾರ್ಯಕ್ರಮವನ್ನು ಆಯೋಜಿಸಬೇಕೆಂದು ಇಚ್ಚಿಸಿದ್ದು, ಡಿ.14 ರಂದು ಪೂರ್ವಭಾವಿ ಸಭೆ ನಡೆಸಲು ಹಿರಿಯ ವಿದ್ಯಾರ್ಥಿಗಳು
ಮದ್ದೂರು: