ಮುಕ್ತ ವಿಶ್ವವಿದ್ಯಾನಿಯ ಪ್ರವೇಶ: ಮಾ.31ರ ವರೆಗೆ ಕಾಲಾವಕಾಶ

KannadaprabhaNewsNetwork |  
Published : Mar 07, 2024, 01:46 AM IST
32 | Kannada Prabha

ಸಾರಾಂಶ

ರಾಜ್ಯ ಮುಕ್ತ ವಿಶ್ವವಿದ್ಯಾಲಯ 2023-24 ನೇ ಜನವರಿ ಆವೃತ್ತಿ ಪ್ರವೇಶಾತಿ ಅವಕಾಶವನ್ನು ಮಾ.31ರ ವರೆಗೆ ವಿಸ್ತರಿಸಲಾಗಿದೆ. ವಿವರಗಳಿಗೆ ದೂರವಾಣಿ ಸಂಖ್ಯೆ 08272-201147, 8073342310, 9483391260, 8296215714, 9611320191, 9743576338, 7411233007, 9844395986 ನ್ನು ಸಂಪರ್ಕಿಸಬಹುದು

ಕನ್ನಡಪ್ರಭ ವಾರ್ತೆ ಮಡಿಕೇರಿಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ 2023-24 ನೇ ಜನವರಿ ಆವೃತ್ತಿ ಪ್ರವೇಶಾತಿ ಅವಕಾಶವನ್ನು ಮಾ.31ರ ವರೆಗೆ ವಿಸ್ತರಿಸಲಾಗಿದೆ ಎಂದು ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ.

ಕೆಲಸಕ್ಕೆ ಹೋಗುವ ಆಸಕ್ತರು ಕ.ರಾ.ಮು.ವಿ.ಯಲ್ಲಿ ಪ್ರವೇಶಾತಿ ಪಡೆಯಲು ಅನುಕೂಲ ಮಾಡಿಕೊಡುವ ಸಲುವಾಗಿ 2024ರ ಮಾ.31 ರವರೆಗೆ ಸಾರ್ವತ್ರಿಕ ರಜಾ ದಿನಗಳಾದ ಎರಡನೇ ಶನಿವಾರ ಹಾಗೂ ನಾಲ್ಕನೇ ಶನಿವಾರ ಮತ್ತು ಭಾನುವಾರಗಳಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕರಾಮುವಿ, ಮಡಿಕೇರಿ ಪ್ರಾದೇಶಿಕ ಕೇಂದ್ರ ಕಚೇರಿಯನ್ನು ತೆರೆಯುವ ಮೂಲಕ ಪ್ರವೇಶಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಕ.ರಾ.ಮು.ವಿ ಮಡಿಕೇರಿ ಪ್ರಾದೇಶಿಕ ಕೇಂದ್ರದಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸ್ನಾತಕ/ಸ್ನಾತಕೋತ್ತರ ಕೋರ್ಸ್‌ಗಳಾದ ಬಿ.ಎ, ಬಿಕಾಂ, ಬಿ.ಬಿ.ಎ, ಬಿ.ಸಿ.ಎ, ಬಿಲಿಬ್ ಐಎಸ್ಸಿ, ಬಿ.ಎಸ್ಸಿ, ಬಿಎಸ್ ಡಬ್ಲ್ಯು, ಎಂ.ಎ, ಎಂ.ಸಿ.ಜೆ, ಎಂ.ಕಾಂ, ಎಂ.ಎಸ್ಸಿ, ಎಂಲಿಬ್‌ಐಎಸ್ಸಿ, ಎಂಬಿಎ, ಎಂಸಿಎ, ಎಂಎಸ್‌ಡಬ್ಲ್ಯು ಮತ್ತು ಪಿಜಿ ಸರ್ಟಿಫಿಕೇಟ್ ಡಿಪ್ಲೊಮಾ ಸರ್ಟಿಫಿಕೇಟ್ ಕೋರ್ಸುಗಳಿಗೆ ಪ್ರವೇಶ ಮಾಡಿಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಕೆಎಸ್‌ಒಯು ಯುಜಿಸಿ ಮಾನ್ಯತೆ ಪಡೆದಿದೆ ಮತ್ತು ನ್ಯಾಕ್ ನಿಂದ ‘ಎ ಪ್ಲಸ್’ ಮಾನ್ಯತೆ ಪಡೆದಿದೆ ಯುಜಿಸಿ ನಿಯಮಾವಳಿ ಪ್ರಕಾರ ಮುಕ್ತ ವಿಶ್ವವಿದ್ಯಾನಿಲಯ ನೀಡುವ ಪದವಿಗಳು ರೆಗ್ಯುಲರ್ ಮೂಲಕ ನೀಡುವ ಪದವಿಗಳಿಗೆ ಸಮನಾದ ಅರ್ಹತೆ ಇರುತ್ತದೆ ಎಂದು ಕ.ರಾ.ಮು.ವಿ ಮಡಿಕೇರಿ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ.

ಹೆಚ್ಚಿನ ವಿವರಗಳಿಗೆ ಕ.ರಾ.ಮು.ವಿ. ಪ್ರಾದೇಶಿಕ ನಿರ್ದೇಶಕರು, ಮಡಿಕೇರಿ ಪ್ರಾದೇಶಿಕ ಕೇಂದ್ರ, ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕ್ರೀಡಾಂಗಣ ಕಟ್ಟಡ, ಮಡಿಕೇರಿ-571201 ದೂ. 08272-201147, 8073342310, 9483391260, 8296215714, 9611320191, 9743576338, 7411233007, 9844395986 ನ್ನು ಸಂಪರ್ಕಿಸಬಹುದು ಎಂದು ಸ್ಮಿತಾ ಸುಬ್ಬಯ್ಯ ಹೇಳಿದ್ದಾರೆ.

PREV

Recommended Stories

ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ಸಹಕಾರಿ ತತ್ವದಿಂದ ಕಟ್ಟಕಡೆ ವ್ಯಕ್ತಿಗೂ ಸಹಾಯ