ಹಾಸನ : ಕಳೆದ ಶನಿವಾರ ರಾತ್ರಿ ಸುರಿದ ಬಾರಿ ಗಾಳಿ ಮಳೆಗೆ ತುಂಡಾಗಿ ಕೆಳಗೆ ಬಿದ್ದಿದ್ದ ಹೈ ಟೆನ್ಷನ್ ವಿದ್ಯುತ್ ತಂತಿಯನ್ನು ತುಳಿದ ಪರಿಣಾಮ ಕೆ.ಎಸ್.ಆರ್.ಟಿ.ಸಿ. ನೌಕರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಹೊರವಲಯದ ಬಿ ಟಿ ಕೊಪ್ಪಲಿನಲ್ಲಿ ಸಂಭವಿಸಿದೆ.
ಕೆ.ಎಸ್.ಆರ್.ಟಿ.ಸಿ. ನೌಕರ ನಂದೀಶ್ (40 ವರ್ಷ) ಎಂಬುವವರೆ ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿವ ದುರ್ದೈವಿ. ಶನಿವಾರ ರಾತ್ರಿ ಭಾರಿ ಗಾಳಿ ಮಳೆಯಿಂದ ೧೧ ಕೆವಿ. ವಿದ್ಯುತ್ ತಂತಿ ತುಂಡಾಗಿ ಕೆಳಗೆ ಬಿದ್ದಿತ್ತು.
ಇದರ ಅರಿವಿಲ್ಲದ ನಂದೀಶ್ ಅವರು ಬೆಳಗ್ಗೆ ವಾಯು ವಿಹಾರಕ್ಕೆ ಹೋದ ಸಂದರ್ಭದಲ್ಲಿ ಆಕಸ್ಮಿಕವಾಗಿ ತುಳಿದಿದ್ದು, ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.