ಕನ್ನಡಪ್ರಭ ವಾರ್ತೆ ಬೆಂಗಳೂರು
ಈ ವೇಳೆ ಮಾತನಾಡಿದ ರಾಮಲಿಂಗಾರೆಡ್ಡಿ, ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಕಠಿಣ ಪರಿಶ್ರಮ, ಶಿಸ್ತು ಮತ್ತು ಆತ್ಮವಿಶ್ವಾಸಗಳು ಯಶಸ್ಸಿನ ಮಂತ್ರಗಳು. ತಮ್ಮ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಬಳಸಿಕೊಂಡು ತಮ್ಮ ಆಸಕ್ತಿಯ ಕ್ಷೇತ್ರದಲ್ಲಿ ಶ್ರೇಷ್ಠತೆ ಸಾಧಿಸಲು ಪ್ರಯತ್ನಿಸಬೇಕು. ನಿಗಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಶ್ರಮ ಜೀವಿಗಳಾಗಿದ್ದು, ಅವರು ಜನರ ಸೇವೆಗೆ ಹೆಚ್ಚಿನ ಅವಧಿ ಮೀಸಲಿಡುತ್ತಾರೆ. ಅದರಿಂದ ಕುಟುಂಬಕ್ಕೆ ಸಮಯ ನೀಡಲು ಸಾಧ್ಯವಾಗುವುದಿಲ್ಲ. ಆದರೂ, ತಮ್ಮ ಪೋಷಕರ ಶ್ರಮ ಅರ್ಥ ಮಾಡಿಕೊಂಡು ಉತ್ತಮ ಅಂಕ ಗಳಿಸಿದ ಮಕ್ಕಳ ಸಾಧನೆ ಶ್ಲಾಘನೀಯ ಎಂದರು.ಎಂಬಿಬಿಎಸ್, ಎಂಟೆಕ್, ಎಂಎಸ್ಸಿ ಸೇರಿ ಇನ್ನಿತರ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿದ 6 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಆ ವಿದ್ಯಾರ್ಥಿಗಳಿಗೆ ಸಂಸ್ಥೆಯಿಂದ ತಲಾ 5 ಸಾವಿರ ರು. ಮತ್ತು ರಾಮಲಿಂಗಾರೆಡ್ಡಿ ಅವರು ವೈಯಕ್ತಿಕವಾಗಿ ತಲಾ 20 ಸಾವಿರ ರು. ಗೌರವಧನ, ಪ್ರಶಂಸಾಪತ್ರ ನೀಡಿ ಗೌರವಿಸಲಾಯಿತು.
ಬಿಎಂಟಿಸಿ ಅಧ್ಯಕ್ಷ ವಿ.ಎಸ್. ಆರಾಧ್ಯ, ಕೆಎಸ್ಸಾರ್ಟಿಸಿ ಉಪಾಧ್ಯಕ್ಷ ರಿಜ್ವಾನ್ ನವಾಬ್, ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ, ನಿರ್ದೇಶಕಿ ಡಾ. ಕೆ. ನಂದಿನಿದೇವಿ ಇತರರಿದ್ದರು.