ಕನ್ನಡಪ್ರಭ ವಾರ್ತೆ ಮಂಡ್ಯ
ರಾಜ್ಯದಲ್ಲಿ ಮುಂಗಾರು ಮಳೆ ಕೈ ಕೊಟ್ಟಿದ್ದು, ಕರುನಾಡಲ್ಲಿ ಬರಗಾಲದ ಛಾಯೆ ಆವರಿಸಿದೆ. ಇಂತಹ ಸಂಕಷ್ಟ ಪರಿಸ್ಥಿತಿಯಲ್ಲೂ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಮಂಡಳಿ ಶಿಫಾರಸು ಮಾಡಿರುವುದು ಅಮಾನವೀಯ. ತಮಿಳುನಾಡಿನ ಒತ್ತಡದ ಮೇರೆಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಉನ್ನತ ಮಟ್ಟದ ಸಭೆ ನಡೆಸಿದೆ. ಕಳೆದ ಸಭೆಯಲ್ಲೂ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡುವ ಬಗ್ಗೆ ಯಾವುದೇ ಸೂಚನೆ ನೀಡಿರಲಿಲ್ಲ. ಇದಕ್ಕೆ ತಮಿಳುನಾಡು ಅತೃಪ್ತಿ ವ್ಯಕ್ತಪಡಿಸಿತ್ತು. ಇದೀಗ ಸಭೆಯಲ್ಲಿ ತಮಿಳುನಾಡಿಗೆ ನೀರು ಬಿಡಲು ಸೂಚಿಸಿರುವುದು ಸರಿಯಲ್ಲ. ಇದಕ್ಕೆ ಸರ್ಕಾರ ಸ್ಪಂದಿಸಬಾರದು ಎಂದು ಒತ್ತಾಯಿಸಿದರು.ಆದೇಶಕ್ಕೆ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ತೀವ್ರ ಖಂಡನೆಮಂಡ್ಯ:ಮುಂಗಾರು ಕೈಕೊಟ್ಟು ಬರದ ಛಾಯೆ ಆವರಿಸಿರುವ ಬೆನ್ನಲ್ಲೇ, ತಮಿಳುನಾಡಿಗೆ ನಿತ್ಯ 3,500 ಕ್ಯುಸೆಕ್‌ನಂತೆ 15 ದಿನಗಳ ಕಾಲ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ಶಿಫಾರಸ್ಸು ಜೀವ ವಿರೋಧಿಯಾಗಿದೆ ಎಂದು ಜಿಲ್ಲಾ ರೈತ ಹಿತರ ಕ್ಷಣಾ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.
ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಸಿಡಬ್ಲ್ಯೂಆರ್‌ಸಿಯು ಮಹತ್ವದ ಆದೇಶ ಹೊರಡಿಸಿ ಮಂಡ್ಯ ಜಿಲ್ಲೆಯ ರೈತರಿಗೆ ಹಾಗೂ ಜನ-ಜಾನುವಾರುಗಳಿಗೆ ಬರೆ ಎಳೆದಿದೆ ಎಂದು ಕಿಡಿಕಾರಿದ್ದಾರೆ.ತಮಿಳುನಾಡಿಗೆ ನಿತ್ಯ 3,500 ಕ್ಯುಸೆಕ್‌ನಂತೆ 15 ದಿನಗಳ ಕಾಲ ನೀರು ಹರಿಸುವಂತೆ ಸಮಿತಿ ಶಿಫಾರಸ್ಸು ಮಾಡಿರುವುದು ಖಂಡನೀಯ. ರಾಜ್ಯ ಸರ್ಕಾರ ಈ ಆದೇಶಕ್ಕೆ ಆಕ್ಷೇಪ ವ್ಯಕ್ತಪಡಿಸಿ ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದು ತೀರ್ಮಾನಿಸಿರುವುದನ್ನು ಕೂಡ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಸ್ವಾಗತಿಸುತ್ತದೆ.ವರ್ಚ್ಯುವಲ್ ಮೂಲಕ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಪ್ರತಿ ದಿನ 3,500 ಕ್ಯುಸೆಕ್‌ನಂತೆ 15 ದಿನಗಳಲ್ಲಿ ಒಟ್ಟು 4 ಟಿಎಂಸಿ ನೀರು ಹರಿಸಲು ಸಿಡಬ್ಲ್ಯೂಆರ್‌ಸಿ ಹೇಳಿದೆ. ಪ್ರಸ್ತುತ ಕೆಆರ್‌ಎಸ್‌ನಲ್ಲಿ 91 ಮಾತ್ರ ನೀರಿದ್ದು ಇದನ್ನು ಕುಡಿಯಲು ಮಾತ್ರ ಬಳಸಲು ಸಾಧ್ಯವಿದೆ ಎಂದು ಸರ್ಕಾರ ಪರಿಗಣಿಸಿದೆ. ರೈತರ ಬೆಳಗಳಿಗೂ ಕೂಡ ನೀರು ಕೊಡದೆ ಸತಾಯಿಸಿದ್ದು, ಏನಾದರೂ ಆದೇಶಕ್ಕೆ ಮಣಿದು ನೀರು ಬಿಟ್ಟರೆ ತೀವ್ರ ಪ್ರತಿಭಟನೆ ಮಾಡುತ್ತೇವೆ ಎಂದು ಸಮಿತಿ ಸದಸ್ಯರು ಎಚ್ಚರಿಸಿದ್ದಾರೆ.ಇದೇ ವೇಳೆ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಬಿ.ಶಿವಕುಮಾರ್, ಹಿರಿಯ ಹೋರಾಟಗಾರ ಬೋರಯ್ಯ, ಸಂಘಟನಾ ಕಾರ್ಯದರ್ಶಿ ಸುನಂದ ಜಯರಾಮ್, ಮುದ್ದೇಗೌಡ, ಡಾ.ಬಿ.ಶಿವಲಿಂಗಯ್ಯ ಮತ್ತಿತರರು ಇದ್ದರು.