ಮುಡಾ ವತಿಯಿಂದಲೇ ಕುದ್ಮುಲ್ ರಂಗರಾವ್ ಸಮಾಧಿ ಅಭಿವೃದ್ಧಿ ನಡೆಯಲಿ: ಕಾಮತ್

KannadaprabhaNewsNetwork |  
Published : Jul 07, 2026, 03:15 AM IST
ವೇದವ್ಯಾಸ ಕಾಮತ್‌ | Kannada Prabha

ಸಾರಾಂಶ

ನಗರದ ಅತ್ತಾವರ ಬಾಬುಗುಡ್ಡೆಯಲ್ಲಿರುವ ಕುದ್ಮುಲ್ ರಂಗರಾವ್ ಅವರ ಸಮಾಧಿ ಬಳಿ ಪ್ರವಾಸಿ ತಾಣ, ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಮೀಸಲಿಟ್ಟಿದ್ದ 3 ಕೋಟಿ ರು. ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ರದ್ದುಗೊಳಿಸಿರುವುದರಿಂದ, ಮುಡಾ ವತಿಯಿಂದಲೇ ಅಭಿವೃದ್ಧಿ ಕಾರ್ಯ ಕೈಗೊಳ್ಳುವಂತೆ ಶಾಸಕ ವೇದವ್ಯಾಸ ಕಾಮತ್ ಆಗ್ರಹಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ನಗರದ ಅತ್ತಾವರ ಬಾಬುಗುಡ್ಡೆಯಲ್ಲಿರುವ ಕುದ್ಮುಲ್ ರಂಗರಾವ್ ಅವರ ಸಮಾಧಿ ಬಳಿ ಪ್ರವಾಸಿ ತಾಣ, ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಮೀಸಲಿಟ್ಟಿದ್ದ 3 ಕೋಟಿ ರು. ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ರದ್ದುಗೊಳಿಸಿರುವುದರಿಂದ, ಮುಡಾ ವತಿಯಿಂದಲೇ ಅಭಿವೃದ್ಧಿ ಕಾರ್ಯ ಕೈಗೊಳ್ಳುವಂತೆ ಶಾಸಕ ವೇದವ್ಯಾಸ ಕಾಮತ್ ಆಗ್ರಹಿಸಿದ್ದಾರೆ.

ಈ ಬಗ್ಗೆ ಮುಡಾ ಅಧ್ಯಕ್ಷರಿಗೆ, ಆಯುಕ್ತರಿಗೆ ಪತ್ರ ಬರೆದ ಶಾಸಕರು, ದಲಿತೋದ್ದಾರಕ, ಪೂಜನೀಯ ಕುದ್ಮುಲ್ ರಂಗರಾವ್ ಅವರ ಸಮಾಧಿ ಅಭಿವೃದ್ಧಿಗಾಗಿ 2022ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ -1 ಮೂಲಕ 3 ಕೋಟಿ ರು. ಅನುದಾನ ಮಂಜೂರುಗೊಳಿಸಲಾಗಿತ್ತು. ನಂತರ ಅದರ ಗುದ್ದಲಿ ಪೂಜೆಯನ್ನೂ ನಡೆಸಲಾಗಿತ್ತು. ಆದರೆ ರಾಜ್ಯದಲ್ಲಿ ಸರ್ಕಾರ ಬದಲಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಈ ಅನುದಾನವನ್ನು ರದ್ದುಗೊಳಿಸಿರುವುದು ಖಂಡನೀಯ ಹಾಗೂ ಬೇಸರದ ಸಂಗತಿ. ಅಲ್ಲದೇ ಪ್ರಸ್ತುತ ರಾಜ್ಯ ಸರ್ಕಾರ ಕಳೆದ ಮೂರು ವರ್ಷಗಳಿಂದ ಯಾವುದೇ ಹೊಸ ಅನುದಾನ ನೀಡುತ್ತಿಲ್ಲ. ಪರಿಶಿಷ್ಟ ವರ್ಗದ ಬಂಧುಗಳಿಗಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟಿದ್ದ ಆ ಮಹಾತ್ಮರ ಸಮಾಧಿಯ ಅಭಿವೃದ್ಧಿಗೆ ಹಿನ್ನಡೆಯಾಗುವುದನ್ನು ಯಾವುದೇ ಕಾರಣಕ್ಕೂ ಸಹಿಸಲಾಗದು. ಕೂಡಲೇ ಮುಡಾ ವತಿಯಿಂದಲೇ 3 ಕೋಟಿ ರು. ಅನುದಾನ ಹೊಂದಿಸಿಕೊಂಡು ಯೋಜನೆ ಪೂರ್ಣಗೊಳಿಸುವಂತೆ ಶಾಸಕರು ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಲಮಟ್ಟಿಗೆ ಒಳಹರಿವು ಆರಂಭ; ಅವಳಿ ಜಿಲ್ಲೆಯ ಜನತೆಯಲ್ಲಿ ಸಂಭ್ರಮ
ಪ್ಯಾಸೆಂಜರ್‌ ರೈಲು ಆರಂಭಿಸಲು ಸಂಸದ ಗದ್ದಿಗೌಡರ ಸ್ಪಂದನೆ