ಕುಕ್ಕೆ: ಆದಿಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆ ಸಮರ್ಪಿಸಿದ ಮಾಜಿ ಪ್ರಧಾನಿ

KannadaprabhaNewsNetwork |  
Published : Jan 27, 2024, 01:19 AM IST
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರಸಾದ ಸ್ವೀಕರಿಸುತ್ತಿರುವ ದೇವೇಗೌಡ ದಂಪತಿ ಹಾಗೂ ಕ್ಷೇತ್ರದ ಆನೆ ಯಶಸ್ವಿಯಿಂದ ಗೌಡರಿಗೆ ಆಶೀರ್ವಾದ | Kannada Prabha

ಸಾರಾಂಶ

ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಮಾಜಿ ಪ್ರಧಾನಿಗೆ ಭವ್ಯ ಸ್ವಾಗತ ನೀಡಲಾಯಿತು. ದೇವಳದ ಗೋಪುರದ ಬಳಿ ಮಂಗಳವಾದ್ಯದ ಮೂಲಕ ದೇವಳಕ್ಕೆ ಕರೆದೊಯ್ಯಲಾಯಿತು. ದೇವಳದ ಆನೆ ಯಶಸ್ವಿಯು ಎಚ್.ಡಿ.ದೇವೇಗೌಡರನ್ನು ತನ್ನ ಸೊಂಡಿಲಿನಿಂದ ಆಶೀರ್ವದಿಸಿತು. ದೇವರ ದರುಶನ ಮಾಡಿದ ಅವರಿಗೆ ದೇವಳದ ಅರ್ಚಕರು ಮಹಾಪ್ರಸಾದ ನೀಡಿದರು. ಬಳಿಕ ಅವರು ಹೊಸಳಿಗಮ್ಮನ ದರುಶನ ಪಡೆದರು. ಪುರೋಹಿತರು ಅವರಿಗೆ ಕುಂಕುಮಾರ್ಚನೆಯ ಪ್ರಸಾದ ನೀಡಿದರು.

ಕನ್ನಡಪ್ರಭ ವಾರ್ತೆ ಸುಬ್ರಹ್ಮಣ್ಯ

ನಾಗಾರಾಧನೆಯ ಪುಣ್ಯ ತಾಣ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶುಕ್ರವಾರ ಸಂಜೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ದೇವೇಗೌಡ ಭೇಟಿ ನೀಡಿದರು. ಆರಂಭದಲ್ಲಿ ಶ್ರೀ ದೇವಳದ ಆದಿಶೇಷ ವಸತಿಗೃಹಕ್ಕೆ ಆಗಮಿಸಿದ ಮಾಜಿ ಪ್ರಧಾನಿಗಳನ್ನು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಎಸ್. ಸುಳ್ಳಿ ಪುಷ್ಪಗುಚ್ಛ ನೀಡಿ ಬರಮಾಡಿಕೊಂಡರು.

* ಆದಿ ದೇವಳಕ್ಕೆ ಭೇಟಿ:ಬಳಿಕ ಅವರು ಆದಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರುಶನ ಪಡೆದು ಸೇವೆ ನೆರವೇರಿಸಿ ಮೃತ್ತಿಕಾ ಪ್ರಸಾದ ಸ್ವೀಕರಿಸಿದರು. ದೇವಳದ ಅರ್ಚಕರು ಮಾಜಿ ಪ್ರಧಾನಿಗೆ ಶಾಲು ಹೊದಿಸಿ ಪ್ರಸಾದ ನೀಡಿದರು.

* ಭವ್ಯ ಸ್ವಾಗತ:

ನಂತರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಮಾಜಿ ಪ್ರಧಾನಿಗೆ ಭವ್ಯ ಸ್ವಾಗತ ನೀಡಲಾಯಿತು. ದೇವಳದ ಗೋಪುರದ ಬಳಿ ಮಂಗಳವಾದ್ಯದ ಮೂಲಕ ದೇವಳಕ್ಕೆ ಕರೆದೊಯ್ಯಲಾಯಿತು. ದೇವಳದ ಆನೆ ಯಶಸ್ವಿಯು ಎಚ್.ಡಿ.ದೇವೇಗೌಡರನ್ನು ತನ್ನ ಸೊಂಡಿಲಿನಿಂದ ಆಶೀರ್ವದಿಸಿತು. ಅಲ್ಲದೆ ಮಾಜಿ ಪ್ರಧಾನಿಗಳನ್ನು ವಿಶೇಷವಾಗಿ ಸ್ವಾಗತಿಸಿತು. ನಂತರ ದೇವರ ದರುಶನ ಮಾಡಿದ ಅವರಿಗೆ ದೇವಳದ ಅರ್ಚಕರು ಮಹಾಪ್ರಸಾದ ನೀಡಿದರು. ಬಳಿಕ ಅವರು ಹೊಸಳಿಗಮ್ಮನ ದರುಶನ ಪಡೆದರು. ಪುರೋಹಿತರು ಅವರಿಗೆ ಕುಂಕುಮಾರ್ಚನೆಯ ಪ್ರಸಾದ ನೀಡಿದರು.

ಈ ಸಂದರ್ಭ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್‌ರಾಂ ಸುಳ್ಳಿ, ಸದಸ್ಯರಾದ ವನಜಾ ವಿ.ಭಟ್, ಶೋಭಾ ಗಿರಿಧರ್, ಎಇಒ ರಾಜಣ್ಣ, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಬಿ.ಸದಾಶಿವ, ಜಿಲ್ಲಾ ವಕ್ತಾರ ಎಂ.ಬಿ. ಸದಾಶಿವ, ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡ, ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾ ದಳ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ, ರತೀಶ್ ಕರ್ಕೇರ, ಹಿತೇಶ್ ರೈ, ಆದರ್ಶ ಸುಧಾಕರ್ ಮುಂತಾದವರು ಪಾಲ್ಗೊಂಡಿದ್ದರು.

ಸುಬ್ರಹ್ಮಣ್ಯ ಜೆಡಿಎಸ್ ಅಧ್ಯಕ್ಷ ಕಿಶೋರ್ ಅರಂಪಾಡಿ, ಜೆಡಿಎಸ್ ಮುಖಂಡರಾದ ಜಾಕೆ ಮಾಧವ ಗೌಡ, ಸಯ್ಯದ್ ಮೀರಾ ಸಾಹೇಬ್, ಡಾ.ತಿಲಕ್ ಎ.ಎ., ಎಂ.ಪಿ.ದಿನೇಶ್ ಮಾಸ್ಟರ್ ಉಪಸ್ಥಿತರಿದ್ದರು.

* ಇಂದು ಆಶ್ಲೇಷ ಬಲಿ ಮತ್ತು ಮಹಾಪೂಜೆ:

ದೇವರ ದರುಶನ ಮಾಡಿದ ಬಳಿಕ ಆದಿಶೇಷ ಗೆಸ್ಟ್ ಹೌಸ್‌ಗೆ ಆಗಮಿಸಿದ ಮಾಜಿ ಪ್ರಧಾನಿಗಳು ಸುಮಾರು ಒಂದು ಗಂಟೆಗಳ ಕಾಲ ಪಾರಾಯಣ ಶ್ಲೋಕ ವಾಚಿಸಿದರು. ಬಳಿಕ ಶ್ರೀ ದೇವಳದಲ್ಲಿ ರಾತ್ರಿಯ ಪ್ರಸಾದ ಭೋಜನ ಸ್ವೀಕರಿಸಿದರು.

ಇಂದು(ಶನಿವಾರ) ಬೆಳಗ್ಗೆ ಶ್ರೀ ದೇವಳದಲ್ಲಿ ಮಾಜಿ ಪ್ರಧಾನಿಗಳು ಸಂಕಲ್ಪ ನೆರವೇರಿಸಿ ಆಶ್ಲೇಷ ಬಲಿ ಸೇವೆ ನೆರವೇರಿಸಲಿದ್ದಾರೆ. ಬಳಿಕ ಮಧ್ಯಾಹ್ನದ ಮಹಾಪೂಜೆ ವೀಕ್ಷಿಸಿ ಮಹಾಪೂಜಾ ಸೇವೆ ನೆರವೇರಿಸಲಿದ್ದಾರೆ. ಬಳಿಕ ಪ್ರಸಾದ ಭೋಜನ ಸ್ವೀಕರಿಸಿಲಿದ್ದಾರೆ. ನಂತರ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ನಿರ್ಮಿಸಿದ ಹೆಲಿಪ್ಯಾಡ್‌ಗೆ ತೆರಳಿ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಳಿದ್ದಾರೆ.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ