ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವರ ದೇವರಮಾರು ಗದ್ದೆಯಲ್ಲಿ ಜ. 24ರಂದು ನಡೆದ ಕೋಟಿ- ಚೆನ್ನಯ ಜೋಡುಕರೆ ಕಂಬಳದ ಸಭಾ ಕಾರ್‍ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿನ ಸಾಧನೆಗಾಗಿ ಸನ್ಮಾನಿಲಾಯಿತು.
ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವರ ದೇವರಮಾರು ಗದ್ದೆಯಲ್ಲಿ ಜ. 24ರಂದು ನಡೆದ ಕೋಟಿ- ಚೆನ್ನಯ ಜೋಡುಕರೆ ಕಂಬಳದ ಸಭಾ ಕಾರ್‍ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿನ ಸಾಧನೆಗಾಗಿ ಸನ್ಮಾನಿಲಾಯಿತು.
ಜೇನು ಕೃಷಿ, ಬರಹ, ಸಂಶೋಧನೆ, ಬೋಡೊ ದ್ರಾವಣ ಟೆಕ್ನಿಕ್ ರಾಷ್ಟ್ರೀಯ ಪ್ರಶಸ್ತಿ ಸಹಿತ ಹಲವು ಪ್ರಶಸ್ತಿ, ಸನ್ಮಾನ ಪಡೆದ, ಕೋತಿ ಕೋವಿ, ಪರಿಸರ ಉಳಿವಿಗಾಗಿ ಸಿಮೆಂಟ್ ಶೀಟ್‌ನಲ್ಲಿ ಜೇನು ಪೆಟ್ಟಿಗೆ, ಗ್ರಾಮೀಣ ಭಾಗದ ಹವ್ಯಾಸಿ, ವರದಿಗಾರ, ಸ್ವರ ಸಿಂಚನ ಕಲಾ ತಂಡದ ಮೂಲಕ ಸಂಗೀತವನ್ನು ಪ್ರಸರಿಸುವಲ್ಲಿ ಸಲ್ಲಿಸಿದ ಅನುಪಮ ಸೇವೆ, ಕಲಾ ಪ್ರೋತ್ಸಾಹಕ, ಕಲಾ ನಿರ್ದೇಶಕ ಹಾಗೂ ಕೃಷಿ ಸಾಹಿತ್ಯ ಕ್ಷೇತ್ರದಲ್ಲಿ ಅವರ ಸೇವೆಯನ್ನು ಗುರುತಿಸಿ ಸಮಾರಂಭದಲ್ಲಿ ಅಧ್ಯಕ್ಷರಾದ ಶಾಸಕ ಅಶೋಕ್ ಕುಮಾರ್ ರೈ, ಕಂಬಳ ಸಮಿತಿ ಗೌರವಾಧ್ಯಕ್ಷ ವಿನಯ್ ಕುಮಾರ್ ಸೊರಕೆ, ಪ್ರಧಾನ ಕಾರ್‍ಯದರ್ಶಿ ದಿನೇಶ್ ಕುಲಾಲ್ ಪಿ.ವಿ. ಅವರು ಸನ್ಮಾನಿಸಿದರು. ಕಂಬಳ ಸಮಿತಿ ಗೌರವಾಧ್ಯಕ್ಷರಾದ ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿ, ಕಂಬಳ ಸಮಿತಿ ಕೋಶಾಧಿಕಾರಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಕಂಬಳದ ತೀರ್ಪುಗಾರ ಗುಣಪಾಲ ಕಡಂಬ, ತಾಪಂ ಕಾರ್‍ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ದ.ಕ. ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮದ್ ಬಡಗನ್ನೂರು, ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಮೌರಿಸ್ ಮಸ್ಕರೆನಸ್, ಕೆಪಿಸಿಸಿ ಕಾರ್‍ಯದರ್ಶಿ ಎಂ.ಎಸ್. ಮಹಮದ್, ಜಿಲ್ಲಾ ಸೆಷನ್ಸ್ ನ್ಯಾಯಾಧೀಶೆ ಸರಿತ, ನ್ಯಾಯಾಧೀಶೆ ಪ್ರಕೃತಿ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮಹಮ್ಮದ್ ಅಲಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಮಲ್ಲಿಕಾ ಪಕ್ಕಳ, ಚಲನಚಿತ್ರ ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು. ಕೋಟಿ ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಚಾಲಕ ವಸಂತ ಕುಮಾರ್ ರೈ ದುಗ್ಗಳ, ಅಧ್ಯಕ್ಷ ನಿರಂಜನ ರೈ ಮಠಂತಬೆಟ್ಟು ನಿರೂಪಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.