ಶಾಂತಳ್ಳಿ ಕುಮಾರಲಿಂಗೇಶ್ವರ ಸ್ವಾಮಿ ದೇವರ ಜಾತ್ರೋತ್ಸವಕ್ಕೆ ಚಾಲನೆ

KannadaprabhaNewsNetwork |  
Published : Jan 16, 2026, 03:15 AM IST
ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ದೇವರ ವಾರ್ಷಿಕ ಜಾತ್ರೋತ್ಸವಕ್ಕೆ ವಿದ್ಯುಕ್ತ ಚಾಲನೆ | Kannada Prabha

ಸಾರಾಂಶ

ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ದೇವರ 67ನೇ ವರ್ಷದ ವಾರ್ಷಿಕ ಜಾತ್ರೋತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆತಿದ್ದು, ಗುರುವಾರ ‘ಅರಸು ಬಲ ಸೇವೆ’ಯಲ್ಲಿ ವಿವಿಧ ಗ್ರಾಮಗಳಿಂದ ದೇವಾಲಯಕ್ಕೆ ಕಾಣಿಕೆ ಅರ್ಪಿಸಿದರು.

ಸೋಮವಾರಪೇಟೆ: ತಾಲೂಕಿನ ಶಾಂತಳ್ಳಿ ಗ್ರಾಮದಲ್ಲಿರುವ ಚೋಳರ ಕಾಲದ ಐತಿಹ್ಯ ಹೊಂದಿರುವ ಇತಿಹಾಸ ಪ್ರಸಿದ್ಧ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ದೇವರ 67ನೇ ವರ್ಷದ ವಾರ್ಷಿಕ ಜಾತ್ರೋತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆತಿದ್ದು, ಗುರುವಾರ ‘ಅರಸು ಬಲ ಸೇವೆ’ಯಲ್ಲಿ ವಿವಿಧ ಗ್ರಾಮಗಳಿಂದ ದೇವಾಲಯಕ್ಕೆ ಕಾಣಿಕೆ ಅರ್ಪಿಸಿದರು.

ನೂರಾರು ಸಂಖ್ಯೆಯಲ್ಲಿ ವಾದ್ಯಗೋಷ್ಠಿಯೊಂದಿಗೆ ತಮ್ಮ ಊರಿನ ಕಾಣಿಕೆಯನ್ನು ಮೆರವಣಿಗೆಯ ಮೂಲಕ ತಂದು ದೇವಾಲಯಕ್ಕೆ ಸಲ್ಲಿಸುವ ಕೆಲಸ ಕಳೆದ ನೂರಾರು ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಸಂಪ್ರದಾಯವಾಗಿದೆ. ಕಾರ್ಯಕ್ರಮದ ಪ್ರಯುಕ್ತ ಸಂಜೆ 7.30ರಿಂದ ಗಣಹೋಮ, ರಂಗಪೂಜೆ, ಬೀದಿ ಉತ್ಸವ ಮಹಾಮಂಗಳಾರತಿ ಕಾರ್ಯಕ್ರಮಗಳು ನಡೆದವು.

13ರಂದು ಸಂಜೆ ''''''''''''''''ಬೆಳ್ಳಿ ಬಂಗಾರ ದಿನ''''''''''''''''ದ ಆಚರಣೆಯೊಂದಿಗೆ ಜಾತ್ರೆಯ ಪ್ರಾರಂಭೋತ್ಸವ ಪೂಜೆ ನೆರವೇರಿದ್ದು, ಇಂದು ''''''''''''''''ಮಕರ ಸಂಕ್ರಮಣ ಕರುವಿನ ಹಬ್ಬ'''''''''''''''' ಹಾಗೂ ದೇಗುಲದ ಗರುಡ ಕಂಬದ ಅಗ್ರಪೀಠದಲ್ಲಿ ತುಪ್ಪದ ನಂದಾದೀಪವನ್ನು ಬೆಳಗುವ ಪೂಜಾ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ನಡೆದವು. ಇದರೊಂದಿಗೆ ಅಂಕುರಾರ್ಪಣ ಪೂಜೆ, ಮಹಾಮಂಗಳಾರತಿ, ಪ್ರಾರ್ಥನೆ, ಪ್ರಸಾದ ಸ್ವೀಕಾರ ನಡೆಯಿತು.

16ರಂದು ಮಧ್ಯಾಹ್ನ 12.05ಕ್ಕೆ 67ನೇ ಮಹಾ ರಥೋತ್ಸವ ಜರುಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು, ಶಾಸಕ ಡಾ. ಮಂತರ್ ಗೌಡ, ಸಂಸದ ಯದುವೀರ್ ಒಡೆಯರ್, ಮಾಜಿ ಸಚಿವ ಅಪ್ಪಚ್ಚು ರಂಜನ್, ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ದೇವಾಲಯ ಧರ್ಮದರ್ಶಿ ಮಂಡಳಿ ಅಧ್ಯಕ್ಷ ಕೆ.ಎಂ. ಲೋಕೇಶ್ ತಿಳಿಸಿದರು.

17ರಂದು ಮಧ್ಯಾಹ್ನ 3 ಗಂಟೆಗೆ ಜಾತ್ರಾ ಸಮಾರೋಪ ಸಮಾರಂಭ ನಡೆಯಲಿದೆ. ಶಾಂತಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸವಿತಾ ವಿಜಯಕುಮಾರ್, ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ತಮ್ಮಯ್ಯ, ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ಜಿ. ಮೇದಪ್ಪ, ಪ್ರಮುಖರಾದ ಕೆ.ಎಸ್. ರಾಮಚಂದ್ರ, ಕೃಷ್ಣಕುಮಾರ್, ಜಯೇಂದ್ರ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ.

ಜಾತ್ರೋತ್ಸವದ ಪ್ರಯುಕ್ತ ಶ್ರೀ ಕುಮಾರಲಿಂಗೇಶ್ವರ ಯುವಕ ಸಂಘದ ವತಿಯಿಂದ ಅಂತರ್ ಜಿಲ್ಲಾ ಮಟ್ಟದ ಥ್ರೋಬಾಲ್, ಕಬಡ್ಡಿ ಮತ್ತು ವಾಲಿಬಾಲ್ ಪಂದ್ಯಾಟಗಳು ನಡೆಯಲಿದ್ದು, ಜಾತ್ರೋತ್ಸವ, ಅಂಗವಾಗಿ 15 ರಿಂದ ಮೂರು ದಿನಗಳ ಕಾಲ ದೇವಾಲಯದಲ್ಲಿ ಸಾರ್ವಜನಿಕ ಭಕ್ತಾದಿಗಳಿಗೆ ಅನ್ನದಾನ ನಡೆಯಲಿದೆ. ಇದರೊಂದಿಗೆ ಎಲ್ಲಾ ಫಲಪುಷ್ಪ, ವಸ್ತು ಪ್ರದರ್ಶನ ಆಯೋಜಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜಕೀಯ ಪಥ ಬದಲಾಗಲು ನಮ್ಮಲ್ಲಿದೆ ಹೈಕಮಾಂಡ್‌: ಸಚಿವ ತಿಮ್ಮಾಪೂರ
ದುಡಿದ ಹಣದಲ್ಲಿ ಒಂದು ಭಾಗ ಸಮಾಜ ಸೇವೆಗೆ