ಕುಮಾರಸ್ವಾಮಿಯೇ ಮುಂದಿನ ಮುಖ್ಯಮಂತ್ರಿ

KannadaprabhaNewsNetwork |  
Published : Jun 25, 2026, 01:30 AM IST
ಎನ್‌ಡಿಎ ಅಧಿಕಾರಕ್ಕೆ ಬರುವುದು ನಿಶ್ಚಿತ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯೇ ಮುಂದಿನ ಮುಖ್ಯಮಂತ್ರಿ : ಹೆಚ್. ನಿಂಗಪ್ಪ | Kannada Prabha

ಸಾರಾಂಶ

ಕಾಂಗ್ರೆಸ್ ಪಕ್ಷದ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ. ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಅಭಿವೃದ್ಧಿ ಕೆಲಸಗಳು ಸಂಪೂರ್ಣವಾಗಿ ನಿಂತುಹೋಗಿದೆ.

ತೀರ್ಥಕುಮಾರ್ ಸೇರ್ಪಡೆಯಿಂದ ತಿಪಟೂರು ಜೆಡಿಎಸ್‌ಗೆ ಬಲ ಎಂದ ಜಿಲ್ಲಾಧ್ಯಕ್ಷ ನಿಂಗಪ್ಪ

ಕನ್ನಡಪ್ರಭ ವಾರ್ತೆ ತಿಪಟೂರು

೨೦೨೮ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದ್ದು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರೇ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ತುಮಕೂರು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಚ್.ನಿಂಗಪ್ಪ ತಿಳಿಸಿದರು.

ನಗರದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ನಡೆದ ಯುವ ಮುಖಂಡ ತೀರ್ಥಕುಮಾರ್ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ. ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಅಭಿವೃದ್ಧಿ ಕೆಲಸಗಳು ಸಂಪೂರ್ಣವಾಗಿ ನಿಂತುಹೋಗಿದೆ. ಈಗ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್ ಈಗಾಗಲೇ ಗೃಹಲಕ್ಷ್ಮೀ ಯೋಜನೆಯನ್ನು ಪರಾಮರ್ಶೆ ಮಾಡುತ್ತಿದ್ದಾರೆ. ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ರಾಷ್ಟೀಯ ಮಟ್ಟದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳು ಜನರ ಕಣ್ಣಿಗೆ ಕಾಣುತ್ತಿವೆ. ಹಾಗಾಗಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳಲಿದೆ ಎಂದರು.

ಕಾಂಗ್ರೆಸ್ ಪಕ್ಷ ಬಿಡದಿ ಟೌನ್‌ಶಿಪ್ ಯೋಜನೆ ಕೈಗೆತ್ತಿಕೊಂಡಿರುವುದರಿಂದ ರೈತರು ತಮ್ಮ ಫಲವತ್ತಾದ ಭೂಮಿಯನ್ನು ಕಳೆದುಕೊಂಡು ನಿರುದ್ಯೋಗಿಗಳಾಗಲಿದ್ದಾರೆ. ಅಲ್ಲಿರುವ ಬಹಳಷ್ಟು ರೈತರು ಸಣ್ಣ-ಸಣ್ಣ ರೈತರಾಗಿದ್ದು ಅರ್ಧ ಅಥವಾ ಒಂದು ಎಕರೆ ಭೂಮಿ ಇರುವವರೇ ಹೆಚ್ಚಾಗಿದ್ದಾರೆ. ಇವರ ಭೂಮಿಯನ್ನು ಕಾಂಗ್ರೆಸ್ ಸರ್ಕಾರ ವಶಪಡಿಸಿಕೊಂಡರೆ ಈ ರೈತರೆಲ್ಲ ಬೀದಿಗೆ ಬರಲಿದ್ದಾರೆ. ಆ ರೈತರ ಪರವಾಗಿ ಕುಮಾರಸ್ವಾಮಿಯವರು ಗಟ್ಟಿಯಾಗಿ ಧ್ವನಿಎತ್ತಿ ನಿಂತಿದ್ದು ರೈತರಿಗೆ ಅನ್ಯಾಯವಾಗಲು ಅವರು ಬಿಡುವುದಿಲ್ಲ. ಯುವ ಮುಖಂಡರಾದ ತೀರ್ಥ ಕುಮಾರ್ ನೆಲ್ಲೀಕೆರೆ ಪಕ್ಷ ಸೇರ್ಪಡೆ ಪಕ್ಷಕ್ಕೆ ಹೆಚ್ಚು ಬಲ ತುಂಬಲಿದೆ ಎಂದರು.ಯುವ ಮುಖಂಡರಾದ ತೀರ್ಥ ಕುಮಾರ್ ನೆಲ್ಲೀಕೆರೆ ಪಕ್ಷ ಸೇರ್ಪಡೆಯಾಗಿ ಮಾತನಾಡಿ, ಮುಂಬರುವ ದಿನಗಳಲ್ಲಿ ಎಚ್.ಡಿ. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗುವ ಮೂಲಕ ಸಂಕಷ್ಟದಲ್ಲಿರುವ ಈ ನಾಡಿನ ರೈತರು, ಮಹಿಳೆಯರು ಹಾಗೂ ಜನಸಾಮಾನ್ಯರ ಕಷ್ಟಸುಖಗಳಿಗೆ ಸ್ಪಂದಿಸಬೇಕೆಂಬ ಏಕೈಕ ಉದ್ದೇಶದಿಂದ ನಾನು ಜೆಡಿಎಸ್ ಪಕ್ಷವನ್ನು ಸೇರ್ಪಡೆಯಾಗುತ್ತಿದ್ದೇನೆ ಎಂದರು. ಮುಖಂಡರಾದ ಕೆ.ಟಿ. ಶಾಂತಕುಮಾರ್ ಮಾತನಾಡಿ, ನಮ್ಮ ತಾಲೂಕಿನಲ್ಲಿ ಕುಡಿಯುವ ನೀರಿಗೂ ಹಾಹಾಕಾರವಿದೆ. ಸಾಮಾನ್ಯ ಜನರು ಭ್ರಷ್ಟಾಚಾರದಿಂದ ನಲುಗುತ್ತಿದ್ದಾರೆ. ರೈತರು ತಮ್ಮ ಜಮೀನುಗಳ ದಾಖಲಾತಿಗಳಿಗಾಗಿ ಕಂದಾಯ ಇಲಾಖೆಗೆ ಅಲೆಯುತ್ತಿದ್ದಾರೆ. ಕೊಬ್ಬರಿ ಬೆಂಬಲ ಬೆಲೆಗಾಗಿ ತಿಪಟೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡಿದ್ದೇನೆ. ತಿಪಟೂರು ಜಿಲ್ಲೆ ಮಾಡಲು ನಡೆಯುತ್ತಿರುವ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದೇನೆ. ನನ್ನ ಜನಸೇವೆ, ಹೋರಾಟ ಮೆಚ್ಚಿ ಜನತೆ ಆಶೀರ್ವಾದ ಮಾಡಿದರೆ ತಾಲೂಕಿನ ಜನರಿಗೆ ೨೪/೭ ಸೇವೆ ನೀಡಲು ಬದ್ದನಾಗಿದ್ದೇನೆ. ತೀರ್ಥಕುಮಾರ್‌ರಂಥ ಯುವ ಮುಖಂಡರು ಪಕ್ಷಕ್ಕೆ ಬಂದಿರುವುದು ಜೆಡಿಎಸ್‌ಗೆ ಮತ್ತಷ್ಟು ಬಲ ಬಂದಿದೆ ಎಂದು ತಿಳಿಸಿದರು.ಸಮಾರಂಭದಲ್ಲಿ ಜಿಲ್ಲಾ ಪ್ರಧಾನಕಾರ್ಯದರ್ಶಿ ಶಿವಸ್ವಾಮಿ, ನಗರ ಯುವಘಟಕದ ಅಧ್ಯಕ್ಷ ಸುರ್ಶನ್, ನಗರಸಭೆ ಮಾಜಿ ಸದಸ್ಯ ಮಂಜುನಾಥ್, ತಾಲ್ಲೂಕು ಕಾರ್ಯದರ್ಶಿ ನಟರಾಜು ಭಾಗವಹಿಸಿದ್ದರು.

ಫೋಟೋ ೨೪-ಟಿಪಿಟಿ೩ ರಲ್ಲಿ ಕಳುಹಿಸಿದೆ.ಸರ್ ನಮಸ್ಕಾರ ಸುದ್ದಿ, ಫೋಟೋ ಮುಖ್ಯ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೊಬೈಲ್ ಸೆಲ್ಫಿ ತೆಗೆದುಕೊಳ್ಳಲು ಹೋದ ನಾಲ್ವರು ಕಾವೇರಿ ನದಿಯಲ್ಲಿ ಜಲ ಸಮಾಧಿ
ಅಣೆಕಟ್ಟೆ ಕ್ರಸ್ಟ್ ಗೇಟ್‌ಗಳ ದುರಸ್ತಿ ಮುಗಿದ ಬಳಿಕ ನೀರು ಬಿಡುಗಡೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ