ಕುಮಾರಸ್ವಾಮಿಗೆ ಯಶಸ್ವಿ ಹೃದಯ ಸರ್ಜರಿ

KannadaprabhaNewsNetwork |  
Published : Mar 22, 2024, 01:01 AM ISTUpdated : Mar 22, 2024, 12:49 PM IST
HDK

ಸಾರಾಂಶ

ಹೃದಯ ಸಂಬಂಧಿ ಸಮಸ್ಯೆಗೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಹೃದಯ ಸಂಬಂಧಿ ಸಮಸ್ಯೆಗೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ಗುರುವಾರ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ವೈದ್ಯರು ಕುಮಾರಸ್ವಾಮಿ ಆರೋಗ್ಯದ ಮೇಲೆ ನಿಗಾವಹಿಸಿದ್ದಾರೆ.

ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲಿಯೇ ವಿಶ್ರಾಂತಿ ಪಡೆದು ಇದೇ 25ರಂದು ನಗರಕ್ಕೆ ಆಗಮಿಸಲಿದ್ದಾರೆ. ಬಳಿಕ ಲೋಕಸಭಾ ಚುನಾವಣೆಯತ್ತ ಗಮನಹರಿಸಲಿದ್ದಾರೆ.

ಕುಮಾರಸ್ವಾಮಿ ಶಸ್ತ್ರಚಿಕಿತ್ಸೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ, ಅಭಿಮಾನಿಗಳು, ಹಿತೈಷಿಗಳು, ಜೆಡಿಎಸ್‌ನ ಎಲ್ಲ ಕಾರ್ಯಕರ್ತರು ಹಾಗೂ ರಾಜ್ಯದ ಸಮಸ್ತ ಜನತೆಯ ಹಾರೈಕೆ ಹಾಗೂ ಆ ಭಗವಂತನ ದಯೆಯಿಂದ ತಂದೆಯವರು ಆರೋಗ್ಯವಾಗಿದ್ದಾರೆ. 

ತಂದೆಯವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ, ಹರಸಿದ ಪ್ರತಿಯೊಬ್ಬರಿಗೂ ನಮ್ಮ ಕುಟುಂಬದ ಪರವಾಗಿ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಪ್ರೀತಿ ವಿಶ್ವಾಸಕ್ಕೆ ಋಣಿಯಾಗಿದ್ದೇವೆ ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.

ಸಂಸದ ಪ್ರಜ್ವಲ್‌ ರೇವಣ್ಣ ಸಹ ತಮ್ಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದ ಜನತೆಯ ಹರಕೆ, ಆಶೀರ್ವಾದದಿಂದ ಎಚ್‌.ಡಿ.ಕುಮಾರಸ್ವಾಮಿ ಅವರು ಆರೋಗ್ಯವಾಗಿದ್ದು, ಸದ್ಯದಲ್ಲಿಯೇ ಮರಳಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

PREV

Recommended Stories

ಗ್ರಾಮೀಣ ಭಜನಾ ಮಂಡಳಿಗಳಲ್ಲಿ ತತ್ವಪದಗಳು ಜೀವಂತ
ರಾಮದುರ್ಗ ಧನಲಕ್ಷ್ಮೀ ಶುಗರ್ ಚುನಾವಣೆ: ಸತತ 4ನೇ ಬಾರಿಗೆ ಯಾದವಾಡರ ನೇತೃತ್ವಕ್ಕೆ ಜಯ