ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಕುಂಬ್ಯಾರ್ ಕಲಾಡ್ಚ ಹಬ್ಬ ಸಂಪನ್ನ

KannadaprabhaNewsNetwork | Published : Mar 14, 2025 12:35 AM

ಸಾರಾಂಶ

ಸಮೀಪದ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಕುಂಬ್ಯಾರು ಕಲಾಡ್ಜ ವಾರ್ಷಿಕ ಉತ್ಸವ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಸಮೀಪದ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಕುಂಬ್ಯಾರ್ ಕಲಾಡ್ಚ ವಾರ್ಷಿಕ ಉತ್ಸವ (ಹಬ್ಬ)ವನ್ನು ಊರಿನ ಪರವೂರಿನ ಭಕ್ತರು ಸೇರಿ ಗುರುವಾರ ಸಾಂಪ್ರದಾಯಿಕವಾಗಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಇಗ್ಗುತ್ತಪ್ಪ ಸನ್ನಿಧಿಯಲ್ಲಿ ದೇವತಕ್ಕರಾದ ಪರದಂಡ ಕುಟುಂಬಸ್ಥರ ಎತ್ತು ಪೋರಾಟ ಹಾಲು ಬಲಿವಾಡು. ಅದರೊಂದಿಗೆ ಇನ್ನಿತರ ತಕ್ಕಮುಖ್ಯಸ್ಥರ ಎತ್ತು ಪೋರಾಟ ಹಾಲು ಬಲಿವಾಡು ಸೇವೆಗಳೂ ಸಂಪ್ರದಾಯದಂತೆ ನಡೆದವು. ಈ ಸಂದರ್ಭ ಭಕ್ತಾದಿಗಳಿಂದ ತುಲಾಭಾರ ಸೇವೆ ಸೇರಿದಂತೆ ಹರಕೆ ಇನ್ನಿತರ ಪೂಜೆಗಳನ್ನು ನೆರವೇರಿಸಿದ ಬಳಿಕ ಮಹಾಪೂಜೆ ಜರುಗಿ ಭಕ್ತಾದಿಗಳಿಗೆ ತೀರ್ಥ ಪ್ರಸಾದ ಅನ್ನಸಂತರ್ಪಣೆ ನೆರವೇರಿತು.

ನಂತರ ದೇವರ ಪ್ರಾರ್ಥನೆಯ ಬಳಿಕ ದೇವರ ಪ್ರದರ್ಶನ ಬಲಿ ಜರುಗಿ ಎತ್ತುಪೋರಾಟದೊಂದಿಗೆ ತಕ್ಕ ಮುಖ್ಯಸ್ಥರು ಭಕ್ತಾದಿಗಳು ದೇವರ ಆದಿ ನೆಲೆ ಮಲ್ಮ ಬೆಟ್ಟಕ್ಕೆ ಶ್ರದ್ಧಾಭಕ್ತಿಯಿಂದ ತೆರಳಿದರು. ಇದೇ ಸಂದರ್ಭ ಪೇರೂರು ಹಾಗೂ ನೆಲಜಿ ಗ್ರಾಮದ ತಕ್ಕ ಮುಖ್ಯಸ್ಥರು ಎತ್ತುಪೋರಾಟದೊಂದಿಗೆ ಮಲ್ಮಕ್ಕೆ ಆಗಮಿಸಿದರು.

ಅರ್ಚಕರು ಶುದ್ಧಕಲಶ ಪೂಜಾಕಾರ್ಯಗಳನ್ನು ನೆರವೇರಿಸಿ ಎತ್ತುಪೋರಾಟ ದುಡಿಕೊಟ್ಟ್ ಪಾಟ್ ನೆರವೇರಿತು. ಬಳಿಕ ಎತ್ತುಪೋರಾಟದ ಅಕ್ಕಿಯನ್ನು ಮೂರು ಭಾಗಮಾಡಿ ನೆಲಜಿ, ಪೇರೂರು ಹಾಗೂ ಪಾಡಿ ದೇವಾಲಯದ ತಕ್ಕಮುಖ್ಯಸ್ಥರು ಹಂಚಿಕೊಂಡು ದೇವರ ಕಟ್ಟು ಸಡಿಲಿಸಲಾಯಿತು. ಆನಂತರ ನಾಡಿನ

ಮಳೆ, ಬೆಳೆ ಸುಭಿಕ್ಷ, ಸಮೃದ್ಧಿ ಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ದೇವಾಲಯಕ್ಕೆ ಹಿಂತಿರುಗಿ ಸಂಜೆ ದೇವಾಲಯದಲ್ಲಿ ವಿವಿಧ ದೇವತಾ ವಿಧಿ ವಿಧಾನಗಳೊಂದಿಗೆ ಕಲಾಡ್ಚ ಸಂಭ್ರಮದಿಂದ ಸಂಪನ್ನಗೊಂಡಿತು. ಈ ಸಂದರ್ಭ ಅರ್ಚಕ ಕುಶ ಭಟ್, ಜಗದೀಶ್, ಶ್ರೀಕಾಂತ್ , ಶ್ರೀನಿವಾಸ್

ಇತರರು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.

ಉತ್ಸವದಲ್ಲಿ ದೇವಾಲಯದ ತಕ್ಕ ಮುಖ್ಯಸ್ಥರು, ಭಕ್ತ ಜನ ಸಂಘದ ಅಧ್ಯಕ್ಷ, ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ, ಉಪಾಧ್ಯಕ್ಷ ಕಲಿಯಾಟ೦ಡ ಅಪ್ಪಣ್ಣ, ಕಾರ್ಯದರ್ಶಿ ಬಟ್ಟಿರ ಚೋಂದಮ್ಮ ಮೇದಪ್ಪ, ಖಜಾಂಚಿ ಅಂಜಪರವ೦ಡ ಕೆ. ಕುಶಾಲಪ್ಪ, ಆಡಳಿತ ಮಂಡಳಿಯ ನಿರ್ದೇಶಕರಾಗಿ ಪರದಂಡ ಸದಾ ನಾಣಯ್ಯ, ಅನ್ನಡಿಯಂಡ ಪಿ. ದಿಲೀಪ್ ಕುಮಾರ್, ಕಲಿಯಂಡ ಎಸ್

. ಗಣೇಶ್, ಕೆಲೆಟಿರ ಎ.ರಂಜನ್, ಕಾಂಡಂಡ ಎಂ. ಪೂವಯ್ಯ , ಕುಟ್ಟ೦ಜೆಟ್ಟಿರ ಎನ್ ಬೋಪಣ್ಣ, ಅಪ್ಪಾರಂಡ ಸಿ. ಮಂದಣ್ಣ , ಕುಲ್ಲೇಟಿರ ಅರುಣ್ ಬೇಬ, ಅಲ್ಲಾ ರಂಡ ಎಸ್. ಅಯ್ಯಪ್ಪ, ಆಡಳಿತ ಅಧಿಕಾರಿ ಕಂದಾಯ ಪರಿವೀಕ್ಷಕ ರವಿಕುಮಾರ್, ವ್ಯವಸ್ಥಾಪಕ ಕಂಬೆಯಂಡ ಬೊಳ್ಳಪ್ಪ, ಪಾರುಪತ್ಯೆಗಾರ ಪರದಂಡ ಪ್ರಿನ್ಸ್, ಆಡಳಿತ ಮಂಡಳಿಯ ಮಾಜಿ ಪದಾಧಿಕಾರಿಗಳು, ಸದಸ್ಯರು, ಊರಿನ ಹಿರಿಯರು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

Share this article