ಕುಂದಾಪುರ ಐಎಂಜೆ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ಸಂಪನ್ನ

KannadaprabhaNewsNetwork | Published : Apr 14, 2025 1:21 AM

ಸಾರಾಂಶ

ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ವಾರ್ಷಿಕೋತ್ಸವವನ್ನು ಕೋಟ ಪಡುಕೇರಿಯ ಲಕ್ಷ್ಮಿಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ನಾಯಕ್ ಅವರು ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಕುಂದಾಪುರ

ಇಲ್ಲಿನ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ವಾರ್ಷಿಕೋತ್ಸವವನ್ನು ಕೋಟ ಪಡುಕೇರಿಯ ಲಕ್ಷ್ಮಿಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ನಾಯಕ್ ಅವರು ಉದ್ಘಾಟಿಸಿದರು.

ನಂತರ ವಿದ್ಯಾರ್ಥಿಗಳನ್ನು ಉದ್ದೇಶಿಸಿ, ಧನಾತ್ಮಕ ಚಿಂತನೆಯನ್ನು ಬೆಳೆಸಿಕೊಳ್ಳಬೇಕು. ಸಜ್ಜನರ ಜೊತೆಗೆ ಹೆಚ್ಚಾಗಿ ಬೆರೆಯಬೇಕು ಎನ್ನುವುದನ್ನು ಮಹಾಭಾರತದ ಕೆಲವು ಸಾಂದರ್ಭಿಕ ಉದಾಹರಣೆಯೊಂದಿಗೆ ವಿವರಿಸಿದರು. ಮುಂದಿನ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು, ವಿದ್ಯಾರ್ಥಿಗಳ ಕೌಶಲ್ಯಕ್ಕೆ ಅನುಗುಣವಾದ ವಿದ್ಯಾಭ್ಯಾಸವನ್ನು ಆಯ್ಕೆ ಮಾಡಿಕೊಂಡು, ಯಶಸ್ವಿ ಬದುಕನ್ನ ತಮ್ಮದಾಗಿಸಿಕೊಳ್ಳಬೇಕೆಂದು ಶುಭಹಾರೈಸಿದರು.ಇದೆ ಸಂದರ್ಭದಲ್ಲಿ ಜೀವದ ಹಂಗು ತೊರೆದು ಸಾವಿರಾರು ಜೀವ ರಕ್ಷಣೆ ಮಾಡಿರುವ ಸಮಾಜಸೇವಕ ಈಶ್ವರ್ ಮಲ್ಪೆ ಅವರ ಕಾರ್ಯವನ್ನು ಗುರುತಿಸಿ ಸನ್ಮಾನಿಸಲಾಯಿತು.ಸನ್ಮಾನ ಸ್ವೀಕರಿಸಿ ಮಾತನಾಡಿದ ಈಶ್ವರ್ ಮಲ್ಪೆ ಅವರು ''''''''ಗುರು ಹಿರಿಯರಿಗೆ ಗೌರವ ನೀಡಿ ದೇವರ ಬಗ್ಗೆ ನಂಬಿಕೆ ಹೊಂದಿ ಸಂಸ್ಕಾರಯುತ ಜೀವನವನ್ನು ನಡೆಸಿ, ಬದುಕಿನಲ್ಲಿ ಬರುವ ಸಮಸ್ಯೆಗಳನ್ನು ಮೆಟ್ಟಿನಿಂತು ಜೀವನವನ್ನು ಎದುರಿಸಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ ಪಟೇಲ್ ಕಾಲೇಜಿನ ವಾರ್ಷಿಕ ವರದಿಯನ್ನು ವಾಚಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಐಎಂಜೆ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಸಿದ್ಧಾರ್ಥ್ ಜೆ. ಶೆಟ್ಟಿ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಬ್ರ್ಯಾಂಡ್ ಬಿಲ್ಡಿಂಗ್ ನಿರ್ದೇಶಕರಾದ ಡಾ. ರಾಮಕೃಷ್ಣ ಹೆಗಡೆ, ಉಪ ಪ್ರಾಂಶುಪಾಲ ಜಯಶೀಲ್ ಕುಮಾರ್ ಉಪಸ್ಥಿತರಿದ್ದರು. ಶೈಕ್ಷಣಿಕ, ಕ್ರೀಡೆ ಹಾಗು ಸಾಂಸ್ಕೃತಿಕ ವಿಭಾಗದಲ್ಲಿ ವಿಶೇಷ ಸಾಧನೆಗೈದು ಕಾಲೇಜಿಗೆ ವಿಶೇಷ ಕೊಡುಗೆ ನೀಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ಗಣಕಶಾಸ್ತ್ರ ಉಪನ್ಯಾಸಕಿ ರಕ್ಷಿತಾ ಅಡಿಗ ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕಿ ರಕ್ಷಾ ಮುಖ್ಯ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಕನ್ನಡ ಉಪನ್ಯಾಸಕಿ ರೇವತಿ ಸನ್ಮಾನ ಪತ್ರವನ್ನು ವಾಚಿಸಿದರು. ಗಣಕಶಾಸ್ತ್ರ ಉಪನ್ಯಾಸಕಿ ನಾಫಿಯ ಅಕ್ತಾರಿ ವಂದಿಸಿದರು. ಇಂಗ್ಲಿಷ್ ಉಪನ್ಯಾಸಕಿ ರಾಜೇಶ್ವರಿ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿತು.

Share this article