ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ಪ್ರಥಮ ಪದವಿ ಪ್ರದಾನ ಸಮಾರಂಭ ನಡೆಯಿತು. ಸಂಸ್ಥೆಯ ಶೈಕ್ಷಣಿಕ ಪ್ರಯಾಣದಲ್ಲಿ ಈ ಸಮಾರಂಭ ಮಹತ್ವದ ಮೈಲಿಗಲ್ಲು ಸಾಧಿಸಿದೆ.
ಸಂಸ್ಥೆಯ ಶೈಕ್ಷಣಿಕ ನಿರ್ದೇಶಕ ಡಾ. ಎಸ್.ಎನ್. ಭಟ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಬ್ರ್ಯಾಂಡ್ ಬಿಲ್ಡಿಂಗ್ ನಿರ್ದೇಶಕ ಡಾ. ರಾಮಕೃಷ್ಣ ಹೆಗಡೆ ಉಪಸ್ಥಿತರಿದ್ದರು. ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಮುಖ್ಯಸ್ಥೆ ಪ್ರೊ. ಶಿಲ್ಪಾಶ್ರೀ ಅವರು ಪದವಿ ಪ್ರತಿಜ್ಞೆ ಬೋಧಿಸಿದರು. ಪ್ರಥಮ ಬ್ಯಾಚಿನ ಬಿಕಾಂ ಮತ್ತು ಬಿಸಿಎ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗಣ್ಯರಿಂದ ಪದವಿ ಪ್ರಮಾಣಪತ್ರಗಳನ್ನು ಸ್ವೀಕರಿಸಿದರು.
ಇದೇ ಸಂದರ್ಭ ಸಂಸ್ಥೆಯ ಪ್ರಥಮ ಕಾಲೇಜು ಪತ್ರಿಕೆ ‘ವಿದ್ಯಾವೀಣೆ – ಕಲೆ ಸಾಹಿತ್ಯಗಳ ಸ್ವರ ಸೌರಭ’ ಅನ್ನು ಬಿಡುಗಡೆ ಮಾಡಲಾಯಿತು. ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್ ಸ್ವಾಗತಿಸಿದರು. ಕಂಪ್ಯೂಟರ್ ಅಪ್ಲಿಕೇಶನ್ಸ್ ವಿಭಾಗದ ಮುಖ್ಯಸ್ಥೆ ಪ್ರೊ. ಸ್ವರ್ಣ ರಾಣಿ ಯು.ಪಿ. ವಂದಿಸಿದರು. ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ. ರಾಜೇಶ್ವರಿ ಆರ್. ಶೆಟ್ಟಿ ನಿರೂಪಿಸಿದರು.