ಕುಂದಾಪುರ: ಹೆಮ್ಮಾಡಿ ಜನತಾ ಪಿಯು ಕಾಲೇಜಿನಲ್ಲಿ ಜನತಾ ದಿಬ್ಬಣ

KannadaprabhaNewsNetwork |  
Published : Aug 24, 2025, 02:00 AM IST
23ಜನತಾ | Kannada Prabha

ಸಾರಾಂಶ

ಹೆಮ್ಮಾಡಿ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ‘ಜನತಾ ದಿಬ್ಬಣ’ ಕಾರ್ಯಕ್ರಮ ನಡೆಯಿತು. ವಿ.ವಿ.ವಿ. ಮಂಡಳಿ ಹೆಮ್ಮಾಡಿ ಅಧ್ಯಕ್ಷ, ಮಾಜಿ ಶಾಸಕ ಗೋಪಾಲ ಪೂಜಾರಿ ಉದ್ಘಾಟಿಸಿದರು.

ಪ್ರತಿಭೆ ಎಂಬ ಗಿಡ ಮರವಾಗಿ ಬೆಳೆದು ನೆರಳು ಕೊಡುತ್ತದೆ: ಪ್ರಮೋದ್ ಮರವಂತೆಕನ್ನಡಪ್ರಭ ವಾರ್ತೆ ಕುಂದಾಪುರ

ವಿದ್ಯಾರ್ಥಿಗಳು ಜೀವನದಲ್ಲಿ ಗುರಿ, ಶಿಸ್ತು, ಆದರ್ಶವನ್ನು ಮೈಗೂಡಿಸಿಕೊಂಡು ವಿಜ್ಞಾನಿ, ವೈದ್ಯರಾಗಿ ದೇಶಕ್ಕೆ ಕೊಡುಗೆ ನೀಡಿ ಎಂದು ವಿ.ವಿ.ವಿ. ಮಂಡಳಿ ಹೆಮ್ಮಾಡಿ ಅಧ್ಯಕ್ಷ, ಮಾಜಿ ಶಾಸಕ ಗೋಪಾಲ ಪೂಜಾರಿ ಹೇಳಿದರು.ಅವರು ಇಲ್ಲಿನ ಹೆಮ್ಮಾಡಿ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ‘ಜನತಾ ದಿಬ್ಬಣ’ ಉದ್ಘಾಟಿಸಿ ಶುಭಹಾರೈಸಿದರು.ಮುಖ್ಯ ಅತಿಥಿ, ಚಿತ್ರಸಾಹಿತಿ ಪ್ರಮೋದ್ ಮರವಂತೆ ಮಾತನಾಡಿ, ಅವಕಾಶ ಸಿಕ್ಕಾಗ ಬಳಸಿಕೊಳ್ಳಿ, ಪ್ರತಿಭೆಗೆ ಇರುವ ಸೌಂದರ್ಯ ಬೇರೆಲ್ಲೂ ಇಲ್ಲ. ಪ್ರತಿಭೆ ಎಂಬ ಗಿಡ ಮರವಾಗಿ ಬೆಳೆದು ಮುಂದೆ ನಿಮಗೆ ನೆರಳು ಕೊಡುತ್ತದೆ. ಹೆಚ್ಚು ಸಾಹಿತ್ಯ ಪುಸ್ತಕಗಳನ್ನು ಓದಿ ಜ್ಞಾನಭಂಡಾರ ಹೆಚ್ಚಿಸಿಕೊಳ್ಳಿ ಎಂದರು.ಜಿ ಕನ್ನಡ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಬೆಳ್ತಂಗಡಿ ಮಾತನಾಡಿ, ಇವತ್ತಿನ ಪ್ರತಿಭಾ ದಿನದದಲ್ಲಿ ನಿಮಗೆ ಸಿಕ್ಕ ಅವಕಾಶ ಮುಂದೊಂದು ದಿನ ನಿಮ್ಮನ್ನು ಬಹಳ ಎತ್ತರಕ್ಕೆ ಕೊಂಡೊಯ್ಯುತ್ತದೆ ಎಂದು ಹೇಳಿದರು.ಕಾಲೇಜಿನ ಪ್ರಾಂಶುಪಾಲ ಗಣೇಶ ಮೊಗವೀರ ಅಧ್ಯಕ್ಷತೆ ವಹಿಸಿ, ಪಠ್ಯದ ಜೊತೆಗೆ ಸಹಪಠ್ಯ ಚಟುವಟಿಕೆಗಳಿಗೆ ಅವಕಾಶವನ್ನು ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ವಿದ್ಯಾರ್ಥಿಗಳು ತಮ್ಮ ಸುಪ್ತ ಪ್ರತಿಭೆಯನ್ನು ಪ್ರದರ್ಶನ ಮಾಡುವುದರ ಮೂಲಕ ಭವಿಷ್ಯದಲ್ಲಿ ಸಾಧಕರಾಗಿ ರೂಪುಗೊಳ್ಳಬೇಕು ಎಂದರು.ಕಾರ್ಯಕ್ರಮದಲ್ಲಿ ಹೆಮ್ಮಾಡಿ ಮೀನುಗಾರರ ಸಹಕಾರಿ ಸಂಘದ ಪ್ರ. ವ್ಯವಸ್ಥಾಪಕ ಉದಯ ಕುಮಾರ್ ಹಟ್ಟಿಯಂಗಡಿ, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲಿನ ಮುಖ್ಯಶಿಕ್ಷಕಿ ದೀಪಿಕಾ ಆಚಾರ್ಯ, ಜನತಾ ಪ್ರೌಢಶಾಲೆ ಹೆಮ್ಮಾಡಿಯ ಪ್ರಭಾರ ಮುಖ್ಯಶಿಕ್ಷಕ ಜಗದೀಶ್ ಶೆಟ್ಟಿ ಉಪಸ್ಥಿತರಿದ್ದರು. ಉಪಪ್ರಾಂಶುಪಾಲ ರಮೇಶ್ ಪೂಜಾರಿ ಸ್ವಾಗತಿಸಿ, ಉಪನ್ಯಾಸಕ ಅಭಿಜಿತ್ ವಂದಿಸಿ, ಉದಯ ನಾಯ್ಕ ನಿರೂಪಿಸಿದರು.ನಂತರ ಆರು ತಂಡಗಳ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ನಡೆಯಿತು. ವೈಯಕ್ತಿಕ, ಗುಂಪು ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಡಿದ್ದು ಬೆಳಗಾವಿಯಲ್ಲಿ ಪಂಚಮಸಾಲಿ ಹೋರಾಟ
ಹುಟ್ಟು ಸಾವಿನ ಮಧ್ಯೆ ಸಾಧನೆ ಮಹತ್ವದ್ದು: ಡಾ.ಮುರುಗೇಶ ನಿರಾಣಿ