ಕುಂದಾಪುರ: ಗುಡ್ಡಟ್ಟು ನೆರೆಹಾನಿ ಪ್ರದೇಶಕ್ಕೆ ನ್ಯಾಯಾಧೀಶರ ಭೇಟಿ

KannadaprabhaNewsNetwork |  
Published : Aug 02, 2024, 12:53 AM IST
ಕುಂದಾಪುರ ತಾಲ್ಲೂಕಿನ ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಯಡಾಡಿ ಮತ್ಯಾಡಿ ಗ್ರಾಮದ ಗುಡ್ಡಟ್ಟುವಿಗೆ ಗುರುವಾರ ಭೇಟಿ ನೀಡಿದ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜು ಎನ್. ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶೆ ಮಂಜುಳ ಬಿ ಅವರು ಹಾನಿಯ ಪರಿಶೀಲನೆ ನಡೆಸಿದರು. | Kannada Prabha

ಸಾರಾಂಶ

ಮಳೆಯಿಂದ ಹಾನಿಗೊಳಗಾದ ಗುಡ್ಡಟ್ಟುವಿನ ದೇವಿ ಸೀತಾರಾಮ ಆಚಾರ್, ನಾಗರಾಜ್, ಬಾಬು ರಾಯ್, ತಾರಾ ಆಚಾರ್ತಿ ಅವರ ಮನೆಗಳಿಗೆ ಭೇಟಿ ನೀಡಿದ ನ್ಯಾಯಾಧೀಶರು, ಸಂತೃಸ್ತರಿಗೆ ಊಟೋಪಚಾರದ ವ್ಯವಸ್ಥೆಗೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಕುಂದಾಪುರಬುಧವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಹಾನಿಗೊಳಗಾದ ತಾಲೂಕಿನ ಹೊಂಬಾಡಿ-ಮಂಡಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡಾಡಿ ಮತ್ಯಾಡಿ ಗ್ರಾಮದ ಗುಡ್ಡಟ್ಟುವಿಗೆ ಗುರುವಾರ ಇಲ್ಲಿನ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ರಾಜು ಎನ್. ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶೆ, ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಮಂಜುಳಾ ಬಿ. ಭೇಟಿ ನೀಡಿ ಹಾನಿಯ ಪರಿಶೀಲನೆ ನಡೆಸಿದರು.

ಮಳೆಯಿಂದ ಹಾನಿಗೊಳಗಾದ ಗುಡ್ಡಟ್ಟುವಿನ ದೇವಿ ಸೀತಾರಾಮ ಆಚಾರ್, ನಾಗರಾಜ್, ಬಾಬು ರಾಯ್, ತಾರಾ ಆಚಾರ್ತಿ ಅವರ ಮನೆಗಳಿಗೆ ಭೇಟಿ ನೀಡಿದ ನ್ಯಾಯಾಧೀಶರು, ಸಂತೃಸ್ತರಿಗೆ ಊಟೋಪಚಾರದ ವ್ಯವಸ್ಥೆಗೆ ಸೂಚಿಸಿದರು. ಮಳೆ ಮುಂದುವರಿಯುವ ಸಾಧ್ಯತೆಗಳಿರುವುದರಿಂದ, ಸ್ಥಳೀಯ ಗ್ರಾಮ ಪಂಚಾಯತ್ ನವರು ಸೂಚಿಸುವ ವಸತಿ ವ್ಯವಸ್ಥೆಗೆ ತೆರಳುವಂತೆ ಸಲಹೆ ನೀಡಿದರು.ಮಳೆ ಹಾಗೂ ನೆರೆ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದರು. ಪುರಸಭೆ ವ್ಯಾಪ್ತಿಯ ಖಾರ್ವಿಕೇರಿಯ ರಿಂಗ್ ರೋಡ್‌ನಲ್ಲಿ ಸರಾಗವಾಗಿ ನೀರು ಹರಿದು ಹೋಗಲು ಸೂಕ್ತ ಪೈಪ್ ವ್ಯವಸ್ಥೆ ಮಾಡುವಂತೆಯೂ ಹೇಳಿದರು. ನೆರೆ ಹಾನಿ ಸಂದರ್ಭ ಸಂತ್ರಸ್ತರಿಗೆ ಸೂಕ್ತ ಕಾನೂನು ನೆರವು, ಮಾಹಿತಿ ನೀಡುವ ಹಾಗೂ ಪರಿಹಾರ ಕಾರ್ಯಾಚರಣೆಯಲ್ಲಿಸರ್ಕಾರಿ ಹಾಗೂ ಸರಕಾರೇತರ ಸಂಸ್ಥೆಗಳ ಜತೆ ಸಮನ್ವಯ ಸಾಧಿಸುವ ಮಹತ್ವದ ಸದುದ್ದೇಶದ ಸಲುವಾಗಿ ಭೇಟಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ತಹಸೀಲ್ದಾರ್ ಎಚ್.ಎಸ್.ಶೋಭಾಲಕ್ಷ್ಮೀ, ಉಪ ತಹಸೀಲ್ದಾರ್ ವಿನಯ್, ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಹಂದಟ್ಟು ಪ್ರಮೋದ್ ಹಂದೆ, ಪ್ರಧಾನ ಕಾರ್ಯದರ್ಶಿ ಗಿಳಿಯಾರು ಪ್ರಕಾಶ್ಚಂದ್ರ ಶೆಟ್ಟಿ, ಕಂದಾಯ ನಿರೀಕ್ಷಕ ದಿನೇಶ್, ಗ್ರಾಮ ಕರಣಿಗ ವಿಶ್ವನಾಥ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅರುಣ್ ಕುಮಾರ್ ಹೆಗ್ಡೆ, ಅಭಿವೃದ್ಧಿ ಅಧಿಕಾರಿ ಚಂದ್ರಕಾಂತ ಬಿ., ಕುಂದಾಪುರ ಪೊಲೀಸ್ ಠಾಣೆಯ ಎಸ್ಐ ಪುಷ್ಪ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ರಾಂತಿಕಾರಿ ಪುರುಷರ ಆದರ್ಶ ರೂಢಿಸಿಕೊಳ್ಳಿ: ವಿನಯಕುಮಾರ್‌
ಆದಿಚುಂಚನಗಿರಿ ಜಾತ್ರೆ ಮಹೋತ್ಸವದ ಕೊನೇ ದಿನ ಗಂಗಾಪೂಜೆ