ಕನ್ನಡಪ್ರಭ ವಾರ್ತೆ ಕುಂದಾಪುರ
ವಿದ್ಯಾರ್ಥಿಗಳು 5 ತಂಡಗಳಲ್ಲಿ ತಮ್ಮ ಪ್ರತಿಭೆಗಳನ್ನು ಯಕ್ಷಗಾನ, ಭರತನಾಟ್ಯ, ಚಂಡೆವಾದನ, ವೀರಗಾಸೆ, ಕಂಗೀಲು, ರಂಗ ಕುಣಿತ, ಸೋಮನ ಕುಣಿತ, ಜನಪದ ನೃತ್ಯ, ಕಿರು ನಾಟಕ ಇತ್ಯಾದಿಗಳ ಮೂಲಕ ಪ್ರಸ್ತುತಪಡಿಸಿದರು.
ಅತ್ಯುತ್ತಮ ಪ್ರದರ್ಶನ ನೀಡಿದ ಅಗಸ್ತ್ಯ ತಂಡ ಚಾಂಪಿಯನ್, ಅದ್ವೈತ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು. ಚಾಣಕ್ಯ ತಂಡದ ಪ್ರಥಮ ಬಿಸಿಎ ವಿದ್ಯಾರ್ಥಿನಿ ರಶೀತ ಶೆಟ್ಟಿ ಅತ್ಯುತ್ತಮ ನಿರೂಪಕಿಯಾಗಿ ಮೂಡಿಬಂದರು.ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಂಡಾರ್ಕರ್ಸ್ ಪಿ.ಯು. ಕಾಲೇಜಿನ ಪ್ರಾಂಶುಪಾಲ ಡಾ. ಜಿ.ಎಂ.ಗೊಂಡ, ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಬೇಕಾದ ಕಾಲೇಜಿನ ಅತ್ಯುತ್ತಮ ಗುಣಮಟ್ಟದ ಮೂಲಸೌಕರ್ಯ ಮತ್ತು ಸಂಪನ್ಮೂಲದ ಬಗ್ಗೆ, ವಿದ್ಯಾರ್ಥಿಗಳ ಶಿಸ್ತಿನ ಬಗ್ಗೆ ಮೆಚ್ಚುಗೆಯ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ಡಾ. ಪ್ರತಿಭಾ ಎಂ. ಪಟೇಲ್, ವಾರ್ಷಿಕ ವರದಿಯನ್ನು ನೀಡಿದರು. ಕಾಲೇಜಿನ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕ ಡಾ. ರಾಮಕೃಷ್ಣ ಹೆಗ್ಡೆ ಉಪಸ್ಥಿತರಿದ್ದರು.
ಉಪಾಪ್ರಾಂಶುಪಾಲ ಜಯಶೀಲ ಕುಮಾರ್ ಸ್ವಾಗತಿಸಿದರು. ಕನ್ನಡ ಉಪನ್ಯಾಸಕಿ ಸುಮನಾ ಅತಿಥಿಗಳನ್ನು ಪರಿಚಯಿಸಿದರು. ಬಿಸಿಎ ವಿಭಾಗದ ಮುಖ್ಯಸ್ತೆ ಸ್ವರ್ಣರಾಣಿ ಬಹುಮಾನ ವಿಜೇತರ ಪಟ್ಟಿ ಓದಿದರು. ವಾಣಿಜ್ಯ ಉಪನ್ಯಾಸಕಿ ಅರ್ಚನಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ರಶೀತ ಶೆಟ್ಟಿ ವಂದಿಸಿದರು.