ಕನ್ನಡಪ್ರಭ ವಾರ್ತೆ ಕುಂದಾಪುರ
ನಂತರ ಮಾತನಾಡಿದ ಅವರು, ಸಂಸ್ಕಾರದ ಮೂಲಕ ಕಲೆ ಉನ್ನತವಾದ ಹಂತವನ್ನು ತಲುಪುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿ ತನ್ನ ಜೀವನದಲ್ಲಿ ಉತ್ತಮ ಸಂಸ್ಕಾರವನ್ನು ರೂಢಿಸಿಕೊಳ್ಳಬೇಕೆಂದು ವಚನಗಳ ಉದಾಹರಣೆಯೊಂದಿಗೆ ತಿಳಿಸಿದರು.ಸಂಸ್ಥೆಯ ಬ್ರ್ಯಾಂಡ್ ಬಿಲ್ಡಿಂಗ್ ನಿರ್ದೇಶಕರಾದ ಡಾ. ರಾಮಕೃಷ್ಣ, ಸಂಸ್ಥೆಯು ವಿದ್ಯಾರ್ಥಿಗಳ ಪ್ರತಿಭೆಗೆ ಉತ್ತಮವಾದ ವೇದಿಕೆಗಳನ್ನು ನೀಡುತ್ತಾ ಬಂದಿದೆ. ವಿದ್ಯಾರ್ಥಿಗಳು ಅದರ ಸದುಪಯೋಗ ಪಡೆದುಕೊಳ್ಳಬೇಕೆಂದು ಶುಭ ಹಾರೈಸಿದರು.ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಡಾ. ಪ್ರತಿಭಾ ಎಂ. ಪಟೇಲ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲ ಜಯಶೀಲ್ ಕುಮಾರ್, ಲಲಿತ ಕಲಾ ಸಂಘದ ಸಂಯೋಜಕರಾದ ಗಣಿತಶಾಸ್ತ್ರ ಉಪನ್ಯಾಸಕಿ ರಕ್ಷಿತಾ ಅಡಿಗ ಹಾಗೂ ವಾಣಿಜ್ಯಶಾಸ್ತ್ರ ಉಪನ್ಯಾಸಕಿ ನಿಧಿ ಉಪಸ್ಥಿತರಿದ್ದರು.ವಿದ್ಯಾ ಅಕಾಡೆಮಿಯ ಶಿಕ್ಷಕ ಸಚಿನ್ ಹಾಗೂ ನರ್ಸಿಂಗ್ ಕಾಲೇಜಿನ ಉಪ ಪ್ರಾಂಶುಪಾಲರಾದ ರೂಪಶ್ರೀ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಿದರು. ಗಣಕಶಾಸ್ತ್ರದ ಉಪನ್ಯಾಸಕಿ ನಾಫಿಯ ಅಕ್ತಾರಿ ಕಾರ್ಯಕ್ರಮವನ್ನು ನಿರೂಪಿಸಿದರು.