ಕುಂದಾಪುರ: 20ರಂದು ‘ಲಗೋರಿ’ ಗ್ರಾಮೀಣ ಕ್ರೀಡಾಕೂಟ

KannadaprabhaNewsNetwork |  
Published : Jul 15, 2025, 11:45 PM IST
14ಲಗೋರಿ | Kannada Prabha

ಸಾರಾಂಶ

ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ವತಿಯಿಂದ, ಕುಂದಾಪ್ರ ಭಾಷೆಯ ಹೆಸರಿನಲ್ಲಿ, 2ನೇ ವರ್ಷದ ‘ಲಗೋರಿ’- ಊಟೋಪಚಾರ ಸಹಿತ ಗ್ರಾಮೀಣ ಕ್ರೀಡಾಕೂಟವನ್ನು ಜು.20ರಂದು ಕುಂದಾಪುರದ ಬೋರ್ಡ್‌ ಹೈಸ್ಕೂಲು ಮೈದಾನದಲ್ಲಿ ಆಯೋಜಿಸಲಾಗಿದೆ.

ಕನ್ನಡಪ್ರಭ ವಾರ್ತೆ ಉಡುಪಿ

ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ವತಿಯಿಂದ, ಕುಂದಾಪ್ರ ಭಾಷೆಯ ಹೆಸರಿನಲ್ಲಿ, 2ನೇ ವರ್ಷದ ‘ಲಗೋರಿ’- ಊಟೋಪಚಾರ ಸಹಿತ ಗ್ರಾಮೀಣ ಕ್ರೀಡಾಕೂಟವನ್ನು ಜು.20ರಂದು ಕುಂದಾಪುರದ ಬೋರ್ಡ್‌ ಹೈಸ್ಕೂಲು ಮೈದಾನದಲ್ಲಿ ಆಯೋಜಿಸಲಾಗಿದೆ.ಈ ಬಗ್ಗೆ ಸಂಸ್ಥೆಯ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಇತ್ತೀಚೆಗೆ ಜಾತಿ ಧರ್ಮದ ಹೆಸರಿನಲ್ಲಿ ಕ್ರೀಡಾಕೂಟಗಳು ನಡೆಯುವುದು ಹೆಚ್ಚಾಗಿದೆ. ಆದರೆ ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಭಾಷೆಯ ಹೆಸರಿನಲ್ಲಿ ಈ ಕ್ರೀಡಾಕೂಟವನ್ನು ಆಯೋಜಿಸುತ್ತಿದೆ. ಈ ಮೂಲಕ ತೆರೆಯ ಮರೆಗೆ ಸರಿಯುತ್ತಿರುವ ಗ್ರಾಮೀಣ ಆಟಗಳನ್ನು ಮತ್ತೆ ಮುನ್ನೆಲೆಗೆ ತರುವುದು ಈ ಕೂಟದ ಉದ್ದೇಶವಾಗಿದೆ ಎಂದರು.12 ವರ್ಷದೊಳಗಿನವರಿಗೆ ಗುರಿ ಇಟ್ಟು ಹೊಡೆಯುವುದು, ಚಕ್ರವ್ಯೂಹ, ಗೋಣಿಚೀಲ ಓಟ, ಸೈಕಲ್ ಟಯರ್ ಓಟ, ನಿಮ್ಮ್ ಕಾಲ್ಗುಣ, 17 ವರ್ಷ ಮೇಲ್ಪಟ್ಟವರಿಗೆ ಉಪ್ಪುಮುಡಿ, ಗೋಣಿಚೀಲ ಓಟ, ಗೂಟ ಸುತ್ತಿ ಓಟ, ಸೈಕಲ್ ಟಯರ್ ಓಟ, ಕಂಬಳ, 65 ವರ್ಷದೊಳಗಿನ ಮುಕ್ತ ವಿಭಾಗದಲ್ಲಿ ಗೋಣಿಚೀಲ ಓಟ, ಕಂಬಳ, ಸೈಕಲ್ ಟಯರ್ ಓಟ, ಗೂಟ ಸುತ್ತಿ ಓಟ, ಉಪ್ಪಮುಡಿ, ಕಣ್ಣುಕಟ್ಟಿ ಮಡಕೆ ಒಡೆಯುವ ಸ್ಪರ್ಧೆಗಳು ನಡೆಯಲಿವೆ.ಅಲ್ಲದೇ ಮುಕ್ತ ವಿಭಾಗದಲ್ಲಿ ಗುಂಪು ಆಟದ ಸ್ಪರ್ಧೆಗಳು ನಡೆಯಲಿದ್ದು, ಪುರುಷರಿಗೆ ಲಗೋರಿ, ಚೆಂಡಾನ್ ಚೆಂಡು, ಹಗ್ಗ ಜಗ್ಗಾಟ (9 ಮಂದಿ), ಮಹಿಳೆಯರಿಗೆ ಬೆನ್ಚೆಂಡು, ಡೊಂಕಾಲು, ಥ್ರೋ ಬಾಲ್ ಮತ್ತು ಹಗ್ಗಜಗ್ಗಾಟ ಸ್ಪರ್ಧೆಗಳಿರುತ್ತದೆ. ಜೊತೆಗೆ ಚೆನ್ನೆಮಣೆ, ಗುಡ್ನ, ಗೋಲಿ ಆಟಗಳ ಪ್ರದರ್ಶನವೂ ಇರುತ್ತದೆ ಎಂದವರು ಹೇಳಿದರು.

ಉಡುಪಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲೂ ಕುಂದಾಪ್ರ ಕನ್ನಡ ಮಾತನಾಡುವವರಿದ್ದಾರೆ. ಆದ್ದರಿಂದ ಇದು ಜಿಲ್ಲಾ ಮಟ್ಟದ ಕ್ರೀಡಾಕೂಟವಾಗಿದೆ. ಜಿಲ್ಲೆ ಯಾವ ಭಾಗದಿಂದಲೂ ಸ್ಪರ್ಧಿಗಳು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9844783053 ನ್ನು ಸಂಪರ್ಕಿಸಬಹುದಾಗಿದೆ.

ಸುದ್ದಿಗೋಷ್ಠಿಯಲ್ಲಿ ಕಲಾಕ್ಷೇತ್ರ ಟ್ರಸ್ಟಿನ ಪದಾಧಿಕಾರಿಗಳಾದ ರಾಜೇಶ್ ಕಾವೇರಿ, ಕೆ.ಆರ್.ನಾಯ್ಕ್, ಶ್ರೀಧರ ಸುವರ್ಣ ಮತ್ತು ರಾಮಚಂದ್ರ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''