ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿಕೆ) ವಿದ್ಯಾರ್ಥಿನಿ ಗೀತಾಂಜಲಿ ಶಿವಗೊಂಡ ಚೌಗಲಾ ಅವರು ಮಲೇಷ್ಯಾದ ಕೌಲಾಲಂಪುರದಲ್ಲಿ ನಡೆದ ಅತಿ ದೊಡ್ಡ ಯುವ ನಾಯಕತ್ವ ಸಮ್ಮೇಳನಗಳಲ್ಲಿ ಒಂದಾದ ಎವೈಎಂಯುಎನ್ - 2025ರಲ್ಲಿ ಭಾರತವನ್ನು ಪ್ರತಿನಿಧಿಸಿದರು. ಈ ಸಮ್ಮೇಳನಕ್ಕೆ ಭಾರತದಿಂದ ಕೇವಲ 7 ಮಂದಿ ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಅವರಲ್ಲಿ ಗೀತಾಂಜಲಿ ಕರ್ನಾಟಕ ರಾಜ್ಯದಿಂದ ಆಯ್ಕೆಯಾದ ಏಕೈಕ ವಿದ್ಯಾರ್ಥಿನಿ. ಅವರ ಶೈಕ್ಷಣಿಕ ಸಾಮರ್ಥ್ಯ ಹಾಗೂ ಸಂಶೋಧನಾ ಲೇಖನಗಳ ಆಧಾರದಲ್ಲಿ ಅವರನ್ನು ಈ ಸಮ್ಮೇಳನಕ್ಕೆ ಆಯ್ಕೆ ಮಾಡಲಾಗಿತ್ತು.
ಗೀತಾಂಜಲಿ ಅವರ ಈ ಸಾಧನೆಗಾಗಿ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯ ಅಧ್ಯಕ್ಷರಾದ ಸಿದ್ಧಾರ್ಥ ಜೆ. ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ. ಸಂಸ್ಥೆಯ ಪ್ರಾಂಶುಪಾಲರು, ಪ್ರಾಚಾರ್ಯರು ಗೀತಾಂಜಲಿ ಅವರನ್ನು ಅಭಿನಂದಿಸಿದ್ದಾರೆ.