ಕುಂದಾಪುರ: ನೀಟ್ ವಿಚಾರದಲ್ಲಿ ಭವಿಷ್ಯದ ಕನಸುಗಳನ್ನು ಹೊತ್ತಿರುವ ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ನ್ಯಾಯ ಕೇಳಿದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಾಗೂ ಬಾಡಿಗೆ ಗೂಂಡಾಗಳ ಮೂಲಕ ಕೇಂದ್ರ ಸರ್ಕಾರ ದೌರ್ಜನ್ಯ ನಡೆಸಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದರು.ನೀಟ್ ಪರೀಕ್ಷೆ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿಬುಧವಾರ ಶಾಸ್ತ್ರಿ ಸರ್ಕಲ್‌ನಲ್ಲಿ ಕುಂದಾಪುರ, ಕೋಟ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.
ತಾ.ಪಂ. ಮಾಜಿ ಸದಸ್ಯ ಅಶೋಕ್ ಪೂಜಾರಿ ಬೀಜಾಡಿ ಮಾತನಾಡಿ, ನೀಟ್ ಹಗರಣ ಇಂದು ಕೇವಲ ಪರೀಕ್ಷಾ ಅಕ್ರಮದ ವಿಷಯವಾಗಿ ಉಳಿದಿಲ್ಲ. ಅದು ದೇಶವ್ಯಾಪಿ ಜನಾಂದೋಲನವಾಗಿ ರೂಪುಗೊಂಡಿದೆ ಎಂದರು.
ಕೆಪಿಸಿಸಿ ಸದಸ್ಯ ಮಲ್ಯಾಡಿ ಶಿವರಾಮ ಶೆಟ್ಟಿ, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಿಮ್ಮ ಪೂಜಾರಿ ಮಣೂರು ಹಾಗೂ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಎಚ್. ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಮಾತನಾಡಿದರು.ಪ್ರತಿಭಟನೆ ವೇಳೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪ್ರತಿಕೃತಿಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.ರಾಜ್ಯ ಕಾಂಗ್ರೆಸ್ ಸೋಶಿಯಲ್ ಮೀಡಿಯಾ ಘಟಕದ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ, ಜಿಲ್ಲಾಧ್ಯಕ್ಷ ರೋಶನ್ ಕುಮಾರ್ ಶೆಟ್ಟಿ, ಎನ್ಎಸ್ಯುಐ ಜಿಲ್ಲಾಧ್ಯಕ್ಷ ಸೌರಭ್ ಬಲ್ಲಾಳ್, ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಸುಜನ್ ಶೆಟ್ಟಿ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಶಮಂತ್ ಎಸ್ ಕರ್ಕೇರ, ಎನ್ಎಸ್ಯುಐ ಮುಖಂಡ ವಿವೇಕ್ ಕುಂದಾಪುರ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮುನಾಫ್ ಕೋಡಿ, ಪ್ರಮುಖರಾದ ದೇವಕಿ ಪಿ.ಸಣ್ಣಯ್ಯ, ಚಂದ್ರಶೇಖರ ಖಾರ್ವಿ, ಕೇಶವ ಭಟ್, ವಿಜಯಾಧರ ಪೂಜಾರಿ, ಚಂದ್ರ ಎ ಅಮಿನ್, ಅಬು ಮೊಹಮ್ಮದ್, ಸುರೇಶ್ ನಾಯ್ಕ್ ಆನಗಳ್ಳಿ, ಜೋಯ್ಸ್ಟನ್ ಕಳಂಜಿ, ಗಣೇಶ್ ಶೇರುಗಾರ್, ರಫೀಕ್ ಗಂಗೊಳ್ಳಿ, ಸುನಿಲ್ ಪೂಜಾರಿ ಕೋಡಿ, ರಿಯಾಝ್ ಕೋಡಿ, ರಮೇಶ್ ಶೆಟ್ಟಿ ವಕ್ವಾಡಿ, ಪ್ರಭಾಕರ ಕೋಡಿ ರೇವತಿ ಶೆಟ್ಟಿ, ಜ್ಯೋತಿ ವಿ ಪುತ್ರನ್, ಮೊಹಮ್ಮದ್ ಎಂ ಕೋಡಿ, ಆಶಾ ಕರ್ವೆಲ್ಲೊ, ಗೀತಾ, ಅಶೋಕ್ ಸುವರ್ಣ, ಶಶಿಧರ ಕೋಟಿ, ಅಬಿಬ್ ಹಂಗಳೂರು ಇದ್ದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾನಂದ ಶೆಟ್ಟಿ ಕೆದೂರು ಸ್ವಾಗತಿಸಿದರು. ನಗರಾಭಿವೃದ್ದಿ ಪ್ರಾಧಿಲಾರದ ಅಧ್ಯಕ್ಷ ವಿನೋದ್ ಕ್ರಾಸ್ಟೊ ನಿರೂಪಿಸಿದರು. ಕೋಟ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಗೋಪಾಲ ಬಂಗೇರ ವಂದಿಸಿದರು.